ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ಉತ್ಸಾಹ

BCCI Keen To Get Fans Back In Stands For T20Is, Says Report

ಕೊರೊನಾ ವೈರಸ್‌ನ ಕಾರಣದಿಂದಾಗಿ ಸುದೀರ್ಘ ಕಾಲದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಮರು ಚಾಲನೆ ದೊರೆಯಲಿದೆ. ಆದರೆ ಕೊರೊನಾ ವೈರಸ್‌ನ ಕಾರಣದಿಂದಾಗಿ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಪ್ರೇಕ್ಷಕರ ಗೈರು ಹಾಜರಿಯಲ್ಲೇ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಪ್ರೇಕ್ಷಕರ ಮಧ್ಯೆ ಕ್ರಿಕೆಟ್ ಆಡುವ ದಿನ ಭಾರತದಲ್ಲೂ ದೂರವಿರುವಂತೆ ಕಾಣಿಸುತ್ತಿಲ್ಲ.

ಹೌದು ಟೆಸ್ಟ್ ಸರಣಿ ನಾಲ್ಕು ಪಂದ್ಯಗಳಲ್ಲೂ ಪ್ರೇಕ್ಷಕರ ಅಲಭ್ಯತೆಯಲ್ಲಿಯೇ ಸರಣಿ ಆಯೋಜಿಸಿದರೂ ಚುಟುಕು ಕ್ರಿಕೆಟ್ ಸರಣಿಗೆ ಇದೇ ರೀತಿ ಮುಂದುವರಿಯಲು ಬಿಸಿಸಿಐಗೆ ಇಷ್ಟವಿಲ್ಲ. ಟಿ20 ಕ್ರಿಕೆಟ್ ಸರಣಿಯನ್ನು ಪ್ರೇಕ್ಷಕರ ಹಾಜರಿಯಲ್ಲಿ ಆಯೋಜಿಸಲು ಬಿಸಿಸಿಐ ಉತ್ಸುಕವಾಗಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ.

ಅಜಿಂಕ್ಯ ರಹಾನೆ ಇಷ್ಟವಾಗೋದು ಇಂಥ ಒಳ್ಳೆಯತನಗಳಿಗಾಗಿಯೇ!ಅಜಿಂಕ್ಯ ರಹಾನೆ ಇಷ್ಟವಾಗೋದು ಇಂಥ ಒಳ್ಳೆಯತನಗಳಿಗಾಗಿಯೇ!

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮೊದಲಿಗೆ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಅದಾದ ಬಳಿಕ 5 ಪಂದ್ಯಗಳ ಟಿ20 ಸರಣಿ ಹೊಸದಾಗಿ ನಿರ್ಮಾಣವಾಗಿರುವ ವಿಶ್ವದ ಬೃಹತ್ ಕ್ರಿಕೆಟ್ ಸ್ಟೇಡಿಯಮ್ ಎಂಬ ಖ್ಯಾತಿಯನ್ನು ಹೊಂದಿರುವ ಅಹ್ಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸರಣಿಗೆ ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ಚಿಂಸಿಸುತ್ತಿದೆ. ಈ ಸರಣಿ ಮಾರ್ಚ್ 12ರಿಂದ ಆರಂಭಗೊಳ್ಳಲಿದೆ.

ಬಿಸಿಸಿಐನ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, " ಸಾಕಷ್ಟು ಕುತೂಹಲದಿಂದ ಕಾಯುತ್ತಿರುವ ಇಂಗ್ಲೆಂಡ್ ವಿರುದ್ಧದ ರೋಚಕ ಟಿ20 ಸರಣಿಗೆ ಪ್ರೇಕ್ಷಕರನ್ನು ಕರೆತರಲು ಬಿಸಿಸಿಐ ಪ್ರಯತ್ನಿಸುತ್ತಿದೆ. ಆದರೆ ಪ್ರೇಕ್ಷಕರ ಸಂಖ್ಯೆಯ ಬಗ್ಗೆ ನಾವಿನ್ನು ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ 50 ಶೇಕಡಾ ಸಮೀಪದವರೆಗೆ ಭರ್ತಿ ಮಾಡುವ ಯೋಜನೆಯಿದೆ. ಆದರೆ ಅಂತಿಮ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ. ಸುರಕ್ಷತೆ ನಮ್ಮ ಮೊದಲ ಆದ್ಯತೆ" ಎಂದಿದ್ದಾರೆ.

'ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ಯೋಜನೆ ಸಿದ್ಧವಾಗಿದೆ''ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ಯೋಜನೆ ಸಿದ್ಧವಾಗಿದೆ'

ಚೇತನ್ ಶರ್ಮಾ ಮುಖ್ಯಸ್ಥರಾಗಿರುವ ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಕಳೆದ ಮಂಗಳವಾರ ಸಭೆ ಸೇರಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ತಂಡವನ್ನು ಹೆಸರಿಸಿದೆ. ಮೊದಲ ಎರಡು ಪಂದ್ಯಗಳು ಚೆನ್ನೈನಲ್ಲಿ ನಡೆಯಲಿದ್ದು, ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಇಶಾಂತ್ ಶರ್ಮಾ ತಂಡವನ್ನು ಮರಳಿ ಸೇರಿಕೊಂಡಿದ್ದಾರೆ.

Story first published: Sunday, January 24, 2021, 13:06 [IST]
Other articles published on Jan 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X