Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್‌ಗೆ ಟೀಮ್ ಇಂಡಿಯಾ ಸ್ಕ್ವಾಡ್ ಪ್ರಕಟಕ್ಕೆ ಮುಹೂರ್ತ ನಿಗದಿ: ಯಾವಾಗ ಗೊತ್ತಾ?

ಏಷ್ಯಾಕಪ್ ಟೂರ್ನಿಯ ಮೇಲೆ ಸದ್ಯಕ್ಕೆ ಟೀಮ್ ಇಂಡಿಯಾ ಅಭಿಮಾಣಿಗಳ ಚಿತ್ತ ನೆಟ್ಟಿದೆ. ಈ ಮಧ್ಯೆ ಮುಂಬರುವ ವಿಶ್ವಕಪ್ ಟೂರ್ನಿಗೂ ಟೀಮ್ ಇಂಡಿಯಾ ಸ್ಕ್ವಾಡ್ ಪ್ರಕಟಿಸುವ ಕ್ಷಣ ಹತ್ತಿರವಾಗಿದೆ. ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದ್ದು ಸೆಪ್ಟೆಂಬರ್ 3ರಂದು ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ವಿಶ್ವಕಪ್ ಟೂರ್ನಿಗೆ ತಾತ್ಕಾಲಿಕ ತಂಡವನ್ನು ಪ್ರಕಟಿಸಲು ಇರುವ ಗಡುವಿಗೆ ಎರಡು ದಿನ ಮುನ್ನವೇ ಭಾರತ ತಂಡದ ಸ್ಕ್ವಾಡ್ ಪ್ರಕಟವಾಗುವ ಸಾಧ್ಯತೆಯಿದೆ. ಕುತೂಹಲಕಾರಿ ಸಂಗತಿಯೆಂದರೆ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಖಾಮುಖಿಯ ಮರುದಿನವೇ ಇದು ನಡೆಯಲಿರುವುದು ಈಗ ಕುತೂಹಲ ಮೂಡಿಸಿದೆ.

BCCI may announce India squad for World Cup 2023 on September 3

ಆದರೆ ಈ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಕಾಶ ಕೂಡ ಇದೆ. ಸೆಪ್ಟೆಂಬರ್ 28ಕ್ಕೂ ಮುನ್ನ ಅಂದರೆ ವಿಶ್ವಕಪ್ ಟೂರ್ನಿಯ ಆರಂಭದ ಏಳು ದಿನಗಳ ಮುನ್ನ ಈ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಕಾಶವಿದೆ. ಏಷ್ಯಾಕಪ್ ಕಪ್ ಟೂರ್ನಿಯ ಮುಕ್ತಾಯದ ಬಳಿಕ ಭಾರತ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕೂಡ ಆಡಲಿದ್ದು ಇದು ವಿಶ್ವಕಪ್‌ಗೆ ಭಾರತದ ಅಂತಿಮ ಸಿದ್ಧತೆಯಾಗಿರಲಿದೆ.

ಇನ್ನು ಭಾರತ ಈಗಾಗಲೇ 17 ಆಟಗಾರರ ಪಡೆಯನ್ನು ಏಷ್ಯಾಕಪ್ ಟೂರ್ನಿಗೆ ಪ್ರಕಟಿಸಿದೆ. ಇನ್ನು ಕೆಎಲ್ ರಾಹುಲ್ ಮತ್ತೆ ಗಾಯಕ್ಕೆ ತುತ್ತಾಗಿರುವ ಕಾರಣ ಅವರ ಸ್ಥಾನಕ್ಕಾಗಿ ಮೀಸಲು ಆಟಗಾರನನ್ನಾಗಿ ಸಂಜು ಸ್ಯಾಮ್ಸನ್ ಕೂಡ ತಂಡದ ಜೊತೆಗೆ ಪ್ರಯಾಣಿಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಕಮ್‌ಬ್ಯಾಕ್‌ಗೆ ಸಿದ್ಧವಾಗಿರುವಾಗ ರಾಹುಲ್ ಅಭ್ಯಾಸದ ಸಂದರ್ಭದಲ್ಲಿ ಮತ್ತೆ ಗಾಯಕ್ಕೆ ತುತ್ತಾಗಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಭಾರತ ಈಗಾಗಲೇ 17 ಆಟಗಾರರ ಪಡೆಯನ್ನು ಏಷ್ಯಾಕಪ್ ಟೂರ್ನಿಗೆ ಪ್ರಕಟಿಸಿದೆ. ಇನ್ನು ಕೆಎಲ್ ರಾಹುಲ್ ಮತ್ತೆ ಗಾಯಕ್ಕೆ ತುತ್ತಾಗಿರುವ ಕಾರಣ ಅವರ ಸ್ಥಾನಕ್ಕಾಗಿ ಮೀಸಲು ಆಟಗಾರನನ್ನಾಗಿ ಸಂಜು ಸ್ಯಾಮ್ಸನ್ ಕೂಡ ತಂಡದ ಜೊತೆಗೆ ಪ್ರಯಾಣಿಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಕಮ್‌ಬ್ಯಾಕ್‌ಗೆ ಸಿದ್ಧವಾಗಿರುವಾಗ ರಾಹುಲ್ ಅಭ್ಯಾಸದ ಸಂದರ್ಭದಲ್ಲಿ ಮತ್ತೆ ಗಾಯಕ್ಕೆ ತುತ್ತಾಗಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇನ್ನು ಸುದೀರ್ಘ ಕಾಲದಿಂದ ಗಾಯದಿಂದ ದೂರವುಳಿದಿದ್ದ ಶ್ರೇಯಸ್ ಐಯ್ಯರ್ ಹಾಗೂ ಕೆಎಲ್ ರಾಹುಲ್ ಟೀಮ್ ಇಂಡಿಯಾ ಏಷ್ಯಾಕಪ್ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಶ್ರೇಯಸ್ ಐಯ್ಯರ್ ಸಂಪೂರ್ಣ ಫಿಟ್ ಎಂದು ಆಯ್ಕೆ ಂಡಳಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಘೋಷಿಸಿದ್ದರು ಆದರೆ ರಾಹುಲ್ ಹೊಸ ಗಾಯಕ್ಕೆ ತುತ್ತಾಗಿರುವ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದರು.

Story first published: Monday, August 28, 2023, 23:34 [IST]
Other articles published on Aug 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+