ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ಪ್ರವಾಸಕ್ಕೆ ದ್ರಾವಿಡ್ ಕೋಚ್: ಅಧಿಕೃತವಾಗಿ ಘೋಷಿಸಿದ ಬಿಸಿಸಿಐ ಅಧ್ಯಕ್ಷ ಗಂಗೂಲಿ

BCCI president Ganguly officially announced Dravid will coach team Indian for Sri Lanka tour

ಮುಂದಿನ ಜುಲೈ ತಿಂಗಳಿನಲ್ಲಿ ಶ್ರೀಲಂಕಾ ವಿರುದ್ಧ ನಡೆಯುವ ಸೀಮಿತ ಓವರ್‌ಗಳ ಸರಣಿಯಲ್ಲಿ ಟೀಮ್ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಆಗಿ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧಿಕೃತವಾಗಿ ಘೋಷಿಸಿದ್ದಾರೆ. ಹಾಲಿ ಮುಖ್ಯ ಕೋಚ್ ರವಿ ಶಾಸ್ತ್ರಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾರಣ ರಾಹುಲ್ ದ್ರಾವಿಡ್ ಯುವ ತಂಡಕ್ಕೆ ಮಾರ್ಗದರ್ಶನವನ್ನು ನೀಡಲಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ 2014ರ ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾಗೆ ಬ್ಯಾಟಿಂಗ್ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿದ್ದಾರೆ. ಇದರ ಜೊತೆಗೆ ಅಂಡರ್ 19 ಹಾಗೂ ಭಾರತ ಎ ತಂಡಗಳ ಪ್ರಗತಿಯ ಮೇಲ್ವಿಚಾರಣೆಯನ್ನು ಕೂಡ ನಡೆಸುತ್ತಿದ್ದಾರೆ.

WTC Final ವರೆಗೆ ಟೀಮ್ ಇಂಡಿಯಾ ಬಂದಿದ್ಹೇಗೆ?: ರೋಚಕ ಕತೆ!WTC Final ವರೆಗೆ ಟೀಮ್ ಇಂಡಿಯಾ ಬಂದಿದ್ಹೇಗೆ?: ರೋಚಕ ಕತೆ!

ಶ್ರೀಲಂಕಾ ವಿರುದ್ಧ ನಡೆಯುವ ಸೀಮಿತ ಓವರ್‌ಗಳ ಸರಣಿಗೆ ಟೀಮ್ ಇಂಡಿಯಾ ನಾಯಕನಾಗಿ ಶಿಖರ್ ಧವನ್ ಆಯ್ಕೆಯಾಗಿದ್ದು ಉಪನಾಯಕನಾಗಿ ಭುವನೇಶ್ವರ್ ಕುಮಾರ್ ಧವನ್‌ಗೆ ಸಾಥ್ ನೀಡಲಿದ್ದಾರೆ. ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಕೂಡ ಈ ತಂಡದಲ್ಲಿ ಲಂಕಾ ಪ್ರವಾಸಕ್ಕೆ ತೆರಳಲಿದ್ದಾರೆ.

ಇನ್ನು ಐಪಿಎಲ್ ಸಹಿತ ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಕನ್ನಡಿಗ ದೇವದತ್ ಪಡಿಕ್ಕಲ್ ಮೊದಲ ಬಾರಿಗೆ ಟೀಮ್ ಇಂಡಿಯಾದ ಕರೆ ಸ್ವೀಕರಿಸಿದ್ದಾರೆ. ಪೃಥ್ವಿ ಶಾ, ಜೇತನ್ ಸಕಾರಿಯಾ ಕೂಡ ಶ್ರೀಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಪರವಾಗಿ ಕಣಕ್ಕಿಳಿಯಲಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಾ ಅನುಭವಿ ಆಟಗಾರರ ತಂಡ ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾರಣ 6 ಮಂದಿ ಅನ್‌ಕ್ಯಾಪ್‌ಡ್ ಆಟಗಾರರು ಈ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ.

WTC Finalನಿಂದ ನ್ಯೂಜಿಲೆಂಡ್ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್ ಹೊರಕ್ಕೆWTC Finalನಿಂದ ನ್ಯೂಜಿಲೆಂಡ್ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್ ಹೊರಕ್ಕೆ

ಶ್ರೀಲಂಕಾಗೆ ಪ್ರವಾಸಕ್ಕೆ ತೆರಳಲಿರುವ ಟೀಮ್ ಇಂಡಿಯಾ ತಂಡ: ಶಿಖರ್ ಧವನ್ (ಕ್ಯಾಪ್ಟನ್), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್) ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಾಹರ್, ನವದೀಪ್ ಸೈನಿ, ಚೇತನ್ ಸಕರಿಯಾ.

Story first published: Tuesday, June 15, 2021, 14:36 [IST]
Other articles published on Jun 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X