ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಮುಖ್ಯಸ್ಥರಾಗಿ ಸೌರವ್ ಗಂಗೂಲಿ ನೇಮಕ

BCCI president Sourav Ganguly replaces Anil Kumble as ICC Cricket Committee chairman

ಕಳೆದ 9 ವರ್ಷಗಳ ಕಾಲ ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಮುಖ್ಯಸ್ಥರಾಗಿದ್ದ ಅನಿಲ್ ಕುಂಬ್ಳೆ ಅವರ ಸೇವಾವಧಿ ಪೂರ್ಣಗೊಂಡಿದೆ. ಹೀಗಾಗಿ ಆ ಸ್ಥಾನಕ್ಕೆ ಈಗ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ನೇಮಕವಾಗಿದ್ದಾರೆ. ಈ ಬಗ್ಗೆ ಐಸಿಸಿ ನವೆಂಬರ್ 17ರಂದು ಅಧಿಕೃತವಾಗಿ ಘೋಷಣೆ ಮಾಡಿದೆ.

ಈವರೆಗೆ ಐಸಿಸಿ ಪುರುಷರ ಕ್ರಿಕೆಟ್ ಸಮಿತಿಗೆ ಮುಖ್ಯಸ್ಥರಾಗಿದ್ದ ಅನಿಲ್ ಕುಂಬ್ಳೆ 3 ವರ್ಷಗಳ ಗರಿಷ್ಠ ಪೂರು ಅವಧಿಯನ್ನು ಪೂರೈಸಿದ್ದಾರೆ. ಅಂದರೆ 9 ವರ್ಷಗಳ ಕಾಲ ಈ ಹುದ್ದೆಯನ್ನು ಕುಂಬ್ಳೆ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಹೀಗಾಗಿ ಆ ಸ್ಥಾನಕ್ಕೆ ಈಗ ಹೊಸ ನೇಮಕ ಮಾಡಿಕೊಳ್ಳಲಾಗಿದೆ. ಐಸಿಸಿ ಮುಖ್ಯಸ್ಥ ಗ್ಲೆಗ್ ಬಾರ್ಕ್ಲೆ ಮಾಧ್ಯಮ ಪ್ರಕಟಣೆಯ ಮೂಲಕ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಭಾರತ vs ನ್ಯೂಜಿಲೆಂಡ್ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಮತ್ತು ತಂಡಗಳ ವಿವರಭಾರತ vs ನ್ಯೂಜಿಲೆಂಡ್ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಮತ್ತು ತಂಡಗಳ ವಿವರ

"ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ. ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿರುವ ಸೌರವ್ ಗಂಗೂಲಿ ನಂತರ ಆಡಳಿತಗಾರರಾಗಿಯೂ ಸಮರ್ಥರು ಎಂದು ಸಾಬೀತುಪಡಿಸಿದ್ದಾರೆ. ಹೀಗಾಗಿ ಅವರ ಅನುಭವ ಭವಿಷ್ಯದ ಕ್ರಿಕೆಟ್ ನಿರ್ಧಾರಗಳನ್ನು ರೂಪಿಸಲು ನಮಗೆ ಸಹಾಯ ಮಾಡುತ್ತದೆ" ಎಂದು ಐಸಿಸಿ ಮುಖ್ಯಸ್ಥರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಾಹುಲ್ ದ್ರಾವಿಡ್ 'ಟೀಂ ಮ್ಯಾನ್': ತಂಡದಲ್ಲಿ ಸಾಂಘಿಕ ಹೋರಾಟಕ್ಕೆ ಒತ್ತು ನೀಡಲಿದ್ದಾರೆ ಎಂದ KLರಾಹುಲ್ ದ್ರಾವಿಡ್ 'ಟೀಂ ಮ್ಯಾನ್': ತಂಡದಲ್ಲಿ ಸಾಂಘಿಕ ಹೋರಾಟಕ್ಕೆ ಒತ್ತು ನೀಡಲಿದ್ದಾರೆ ಎಂದ KL

ಇನ್ನು ಇದೇ ಸಂದರ್ಭದಲ್ಲಿ ಐಸಿಸಿ ಮುಖ್ಯಸ್ಥರು ಕಳೆದ 9 ವರ್ಷಗಳ ಕಾಲ ಈ ಹುದ್ದೆಯನ್ನು ಯಶಸ್ವಿಯಾಗಿ ನಿಭಾಯಿಸಿದ ಅನಿಲ್ ಕುಂಬ್ಳೆ ಅವರನ್ನು ಕೂಡ ಅಭಿನಂದಿಸಿದ್ದಾರೆ. "ಕಳೆದ 9 ವರ್ಷಗಳಲ್ಲಿ ಅನಿಲ್ ಕುಂಬ್ಳೆ ನೀಡಿದ ಅತ್ಯುತ್ತಮ ನಾಯಕತ್ವಕ್ಕೆ ನಾನು ಧನ್ಯವಾದವನ್ನು ಹೇಳಲು ಬಯಸುತ್ತೇನೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನ ಗುಣಮಟ್ಟದ ಬೆಳವಣಿಗೆ ಹೆಚ್ಚು ಸ್ಥಿರವಾಗಿರುವಂತೆ, ಡಿಸಿಶನ್ ರಿವ್ಯೂ ಸಿಸ್ಟಮ್ ಸಮರ್ಪಕ ಬಳಕೆ ಹಾಗೂ ಅನುಮಾನಾಸ್ಪದ ಬೌಲಿಂಗ್ ಶೈಲಿಗಳನ್ನು ಪತ್ತೆಹಚ್ಚಲು ಸಮರ್ಪಕವಾದ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಅನಿಲ್ ಕುಂಬ್ಳೆ ಪಾತ್ರ ಮಹತ್ವದ್ದಾಗಿದೆ" ಎಂದಿದ್ದಾರೆ.

ಪಂತ್-ಅಯ್ಯರ್ ನಡುವೆ ಭಾರೀ ಪೈಪೋಟಿ:ಯಾರಿಗೆ ಸಿಗುತ್ತೆ ಚಾನ್ಸ್ | Oneindia Kannada

ಇನ್ನು ಇದೇ ಸಂದರ್ಭದಲ್ಲಿ ಐಸಿಸಿ ಮಹಿಳಾ ಕ್ರಿಕೆಟ್‌ ಕಮಿಟಿಯ ಮುಖ್ಯಸ್ಥರನ್ನು ಕೂಡ ಆಯ್ಕೆ ಮಾಡಲಾಗಿದೆ. ಕ್ರಿಕೆಟ್‌ ವೆಸ್ಟ್ ಇಂಡೀಸ್‌ನ ಸಿಇಒ ಜಾನಿ ಗ್ರೇವ್ ನೇಮಕವಾಗಿದ್ದಾರೆ.

Story first published: Wednesday, November 17, 2021, 17:05 [IST]
Other articles published on Nov 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X