Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೊವಿಡ್-19 ಪಾಸಿಟಿವ್

BCCI president Sourav Ganguly tests positive for Coronavirus

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ ಸೌರವ್ ಗಂಗೂಲಿಗೆ ಕೊರೊನಾವೈರಸ್ ದೃಢಪಟ್ಟಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಈ ಕ್ಷಣಕ್ಕೆ ಮಾಹಿತಿ ಲಭ್ಯವಾಗಿದೆ. ಕೋವಿಡ್ ವೈರಸ್‌ನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಗಂಗೂಲಿ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಅವರ ವರದಿ ಪಾಸಿಟಿವ್ ಬಂದಿದೆ.

ಮೂಲಗಳ ಮಾಹಿತಿಯ ಪ್ರಕಾರ ಸೌರವ್ ಗಂಗೂಲಿ ಸೋಮವಾರ ಸಂಜೆ ಕೊಲ್ಕತ್ತಾದ ಖಾಸಗೀ ಆಸ್ಪತ್ರೆಗೆ ದಾಖಲಾಗಿ, ಆದರೆ ಅವರ ಆರೋಗ್ಯ ಸ್ಥಿರವಾಗಿದೆ. ಆದರೆ ಸೌರವ್ ಗಂಗೂಲಿಯಲ್ಲಿ ಪತ್ತೆಯಾಗಿರುವುದು ಕೊರೊನಾವೈರಸ್‌ನ ಹೊಸ ಒಮೈಕ್ರಾನ್ ರೂಪಾಂತರಿಯಾ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ದೇಶಾದ್ಯಂತ ಕೊರೊನಾವೈರಸ್ ನಿಯಂತ್ರಣಕ್ಕೆ ಬಂದಿದ್ದರೂ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ಅದರಲ್ಲೂ ಒಮೈಕ್ರಾನ್ ರೂಪಾಂತರಿಯ ಆತಂಕ ಈಗ ವಿಶ್ವದೆಲ್ಲೆಡೆಯಿದ್ದು ಭಾರತಲ್ಲಿಯೂ ಒಮಿಕ್ರಾನ್ ರೂಪಾಂತರಿ ವೈರಸ್ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಅತಂಕವಿದೆ. ಇದೇ ಸಂದರ್ಭದಲ್ಲಿ ದೇಶದ ಕೆಲ ಭಾಗಗಳಲ್ಲಿ ಕೊರೊಣಾವೈರಸ್ ಪ್ರಕರಣಗಳ ಸಂಖ್ಯೆ ಕೂಡ ನಿಧಾನವಾಗಿ ಏರಿಕೆ ಕಾಣುತ್ತಿದೆ.

ದಕ್ಷಿಣ ಆಫ್ರಿಕಾದಲ್ಲಿ ಮೊದಲಿಗೆ ಪತ್ತೆಯಾದ ಕೊರೊನಾವೈರಸ್‌ನ ಹೊಸ ರೂಪಾಂತರಿ ಒಮೈಕ್ರಾನ್ ಈಗ ವಿಶ್ವಾದ್ಯಂತ ಅತ್ಯಂತ ವೇಗವಾಗಿ ಹರಡುತ್ತಿದೆ. ಕೊರೊನಾವೈರಸ್‌ನ ಅತ್ಯಂತ ಅಪಾಯಕಾರಿ ರೂಪಾಂತರಿಯಾದ ಡೆಲ್ಟಾಗಿಂತಲೂ ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯವನ್ನು ಹೊಂದಿರುವ ಒಮೈಕ್ರಾನ್ ಆಫ್ರಿಕಾ, ಅಮೇರಿಕಾ ಹಾಗೂ ಯೂರೋಪ್ ದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹರಡಿ ಹೊಸ ಅಲೆಗೆ ಕಾರಣವಾಗಿದೆ. ಹೀಗಾಗಿ ಭಾರತದಲ್ಲಿಯೂ ಮೂರನೇ ಆಲೆಯ ಆತಂಕ ಮನೆಮಾಡಿದೆ.

ಕೊಹ್ಲಿ ಕಾರಣಕ್ಕೆ ಅತಿದೊಡ್ಡ ನಿರ್ಧಾರವನ್ನು ಮಾಡಿದ್ರು MS ಧೋನಿ | Oneindia Kannada

ಇನ್ನು ಸೌರವ್ ಗಂಗೂಲಿ ಈ ವರ್ಷದಲ್ಲಿ ಮೂರನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಜನವರಿಯಲ್ಲಿ ಗಂಗೂಲಿ ಲಘು ಹೃದಯಾಘಾತಕ್ಕೆ ಒಳಗಾಗಿ ಆಂಜಿಯೋ ಪ್ಲಾಸ್ಟಿಗೆ ಒಳಗಾಗಿದ್ದರು. 20 ದಿನಗಳ ನಂತರ ಗಂಗೂಲಿಗೆ ಮತ್ತೊಮ್ಮೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಜನವರಿ 28ರಂದು ಎರಡನೇ ಬಾರಿಗೆ ಸೌರವ್ ಗಂಗೂಳಿ ಆಂಜಿಯೋ ಪ್ಲಾಸ್ಟಿಗೆ ಒಳಗಾಗಿದ್ದರು. ಒಟ್ಟು ಎರಡು ಸ್ಟಂಟ್‌ಗಳನ್ನು ಸೌರವ್ ಗಂಗೂಲಿಗೆ ಅಳವಡಿಸಲಾಗಿತ್ತು. ಅದಾದ ಬಳಿಕ ಚೇತರಿಸಿಕೊಂಡ ಸೌರವ್ ಗಂಗೂಲಿ ಮಾರ್ಚ್ ತಿಂಗಳ ಬಳಿಕ ಮತ್ತೆ ತಮ್ಮ ದೈನಂದಿನ ಚಟುವಟಿಕೆಯಲ್ಲಿ ಭಾಗಿಯಾಗತೊಡಗಿದ್ದಾರೆ. ಇನ್ನು ಸೌರವ್ ಗಂಗೂಲಿ ಕೊರೊನಾವೈರಸ್‌ನ ಎರಡು ಡೋಸ್ ವ್ಯಾಕ್ಸಿನ್ ಕೂಡ ಹಾಕಿಸಿಕೊಂಡಿದ್ದಾರೆ.

Story first published: Tuesday, December 28, 2021, 20:12 [IST]
Other articles published on Dec 28, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+