Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅರ್ಜುನ ಪ್ರಶಸ್ತಿಗೆ ಕ್ರಿಕೆಟಿಗ ಚೇತೇಶ್ವರ ಪೂಜಾರ ಹೆಸರು

ನವದೆಹಲಿ, ಮೇ 02 : ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಟೀಂ ಇಂಡಿಯಾದ ಚೇತೇಶ್ವರ ಪೂಜಾರ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.

ಪೂಜಾರ ಅವರೊಂದಿಗೆ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹರ್ಮನ್‌ ಪ್ರೀತ್ ಕೌರ್ ಕೂಡ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಬಿಸಿಸಿಐ ಯಾವುದೇ ಹೆಸರನ್ನು ಶಿಫಾರಸು ಮಾಡಿಲ್ಲ.[ಕ್ರಿಕೆಟರ್ ರೋಹಿತ್ ಶರ್ಮ, ಅಜಿಂಕ್ಯ ರಹಾನೆಗೆ ಅರ್ಜುನ ಪ್ರಶಸ್ತಿ!]

BCCI recommends Cheteshwar Pujara, Harmanpreet Kaur for Arjuna award

48 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಪೂಜಾರ, 11 ಶತಕ ಹಾಗೂ 14 ಅರ್ಧಶತಕಗಳನ್ನು ಒಳಗೊಂಡು 3798 ರನ್ ಕಲೆಹಾಕಿದ್ದಾರೆ. ಏಕದಿನ ಮಾದರಿಯಲ್ಲಿ ಹರ್ಮನ್‌ ಪ್ರೀತ್ ಅತ್ಯುತ್ತಮ ಬ್ಯಾಟ್ಸ್ ವುಮನ್ ಎಂದು ಸಾಬೀತುಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟ್ವೆಂಟಿ-20 ಸರಣಿಯಲ್ಲಿ ಉತ್ತಮವಾಗಿ ಆಡಿದ್ದರು.

'ಹಿಂದಿನ ಕೆಲವು ಟೂರ್ನಿಗಳಲ್ಲಿ ಪೂಜಾರ ಹಾಗೂ ಹರ್ಮನ್‌ಪ್ರೀತ್ ಉತ್ತಮವಾಗಿ ಆಡಿದ್ದಾರೆ. ಆದ್ದರಿಂದ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡುವುದಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು' ಎಂದು ಬಿಸಿಸಿಐ ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.

Story first published: Wednesday, January 3, 2018, 10:04 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+