ಮೈದಾನದಲ್ಲಿ ವೈಭವ್ ಸೂರ್ಯವಂಶಿ ಮಾತಿನಚಕಮಕಿ: BCCI ಯಾವುದೇ ಕ್ರಮ ಕೈಗೊಳ್ಳಲ್ಲ ಎಂದಿದ್ದೇಕೆ?
ಸದ್ಯ ಕ್ರಿಕೆಟ್‌ನಲ್ಲಿ ಭಾರೀ ಸದ್ದು ಮಾಡಿರುವ ಆಟಗಾರ ವೈಭವ್ ಸೂರ್ಯವಂಶಿ. ಇವರು ಐಪಿಎಲ್‌ನಲ್ಲಿ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನದ ಬಲದಿಂದ ಭಾರತ ತಂಡಕ್ಕೆ ಆಯ್ಕೆ ಆಗಿದ್ದಾರೆ. ಇದಕ್ಕೂ ಮೊದಲು ಇವರು ಭಾರತ "ಎ" ತಂಡದ ಪರ ಶ್ರೀಲಂಕಾದಲ್ಲಿರುವ ತ್ರಿಕೋನ ಸರಣಿಯಲ್ಲಿ ಕಣಕ್ಕೆ ಇಳಿದಿದ್ದು, ರನ್ ಕಲೆ ಹಾಕುವಲ್ಲಿ ಪರದಾಟ ನಡೆಸಿದ್ದಾರೆ. ಆದರೆ ಇವರು ಮೈದಾನದಲ್ಲಿ ತಮ್ಮ ವರ್ತನೆಯಿಂದ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.
ಭಾರತ 'ಎ' ಹಾಗೂ ಶ್ರೀಲಂಕಾ 'ಎ' ನಡುವಣ ಲೀಗ್ ಹಂತದ ಪಂದ್ಯ ರೋಚಕತೆ ಹುಟ್ಟಿಸಿತ್ತು. ಸೂಪರ್ ಓವರ್ ವರೆಗೂ ನಡೆದ ಪಂದ್ಯದಲ್ಲಿ ಶ್ರೀಲಂಕಾ 'ಎ' 6 ರನ್ ಜಯ ಸಾಧಿಸಿತು. ಈ ವೇಳೆ ವೈಭವ್ ಸೂರ್ಯವಂಶಿ ಹಾಗೂ ಶ್ರೀಲಂಕಾದ ವಿಶೇನ್ ಹಲಂಬಾಗೆ ನಡುವೆ ಮೈದಾನದಲ್ಲಿ ತೀವ್ರ ಮಾತಿನ ಚಕಮಕಿ ಹಾಗೂ ತಳ್ಳಾಟ ನಡೆದಿತ್ತು. ಈ ಘಟನೆಯ ನಂತರ ವೈಭವ್ ಸೂರ್ಯವಂಶಿ ವಿರುದ್ಧ ಬಿಸಿಸಿಐ ಶಿಸ್ತು ಕ್ರಮ ಕೈಗೊಳ್ಳುತ್ತದೆಯೇ ಎಂಬ ಬಗ್ಗೆ ಸಾಮಾಜಿಕ ತಾಣದಲ್ಲಿ ಚರ್ಚೆ ಆರಂಭವಾಗಿತ್ತು. ಈಗ ಇದಕ್ಕೆ ಬಿಸಿಸಿಐ ತನ್ನ ಸ್ಪಷ್ಟನೆ ನೀಡಿದೆ.

ಬಿಸಿಸಿಐ ಹೇಳಿದ್ದೇನು?
ವೈಭವ್ ಸೂರ್ಯವಂಶಿ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸ್ಪಷ್ಟನೆ ನೀಡಿದ್ದಾರೆ. ಇನ್ನು ಮೈದಾನದಲ್ಲಿ ನಡೆದ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವ ಅಧಿಕಾರ ಬಿಸಿಸಿಐಗೆ ಇಲ್ಲ. ಇದು ಸಂಪೂರ್ಣವಾಗಿ ಪಂದ್ಯದ ರೆಫರಿ ಮತ್ತು ಅಂಪೈರ್‌ಗಳ ವ್ಯಾಪ್ತಿಗೆ ಬರುತ್ತದೆ ಎಂದು ಸೈಕಿಯಾ ಸ್ಪಷ್ಟಪಡಿಸಿದ್ದಾರೆ. ಬಿಸಿಸಿಐ ಮತ್ತು ಐಸಿಸಿ ಇದರಲ್ಲಿ ಯಾವುದೇ ಪಾತ್ರ ವಹಿಸಿಲ್ಲ. ವೈಭವ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದನ್ನು ಅವರು ನಿರಾಕರಿಸಿದ್ದಾರೆ.
ಇನ್ನು ಇತ್ತೀಚಿಗೆ ವೈಭವ್ ಸೂರ್ಯವಂಶಿ ಅವರ ವಿರುದ್ಧ ಬಿಸಿಸಿಐ ಕ್ರಮ ಕೈಗೊಳ್ಳಲಿದೆ ಎಂಬ ವದಂತಿಗಳು ಇದ್ದವು. ಆದರೆ ಬಿಸಿಸಿಐ ಈಗ ಈ ವದಂತಿಗಳಿಗೆ ತೆರೆ ಎಳೆದಿದೆ.
ಪ್ರವಾಸಕ್ಕೆ ಪೋಷಕರಿಗೆ ಅವಕಾಶ
ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ವೈಭವ್ ಸೂರ್ಯವಂಶಿ ಅವರಿಗೆ ಸ್ಥಾನ ನೀಡಲಾಗಿದೆ. ಇನ್ನು ವೈಭವ್ ಸೂರ್ಯವಂಶಿ ಅವರಿಗೆ ಇನ್ನು 15 ವರ್ಷ ವಯಸ್ಸು. ಹೀಗಾಗಿ ಮುಂಬರುವ ಎರಡೂ ಪ್ರವಾಸದಲ್ಲಿ ಅವರೊಂದಿಗೆ ಪೋಷಕರು ಸಹ ಅವರೊಂದಿಗೆ ಇರುತ್ತಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಸ್ಪಷ್ಟ ಪಡಿಸಿದ್ದಾರೆ. ವೈಭವ್ ಅವರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ವೈಭವ್ ಸೂರ್ಯವಂಶಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ. ಆದರೆ ಇವರು ಈ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇವರು ಆಡಿದ 4 ಪಂದ್ಯಗಳಲ್ಲಿ 117 ರನ್ ಗಳಿಸಿದ್ದು, ಇವರ ಸ್ಟ್ರೈಕ್ ರೇಟ್ 153.94 ಆಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಈಗಾಗಲೇ ಫೈನಲ್‌ಗೆ ಪ್ರವೇಶ ಪಡೆದಿದೆ. ಹೀಗಾಗಿ ವೈಭವ್ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬ ಪ್ರಶ್ನೆಗಳು ಮೂಡಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications