Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2023ರ ವಿಶ್ವಕಪ್ ವೇಳಾಪಟ್ಟಿ ಬದಲಾವಣೆ ಮಾಡುವ ಎಚ್‌ಸಿಎ ಮನವಿ ತಿರಸ್ಕರಿಸಿದ ಬಿಸಿಸಿಐ

ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಈಗಾಗಲೇ ಬಿಸಿಸಿಐ ಮತ್ತು ಐಸಿಸಿ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದಕ್ಕಾಗಿ ಎಲ್ಲಾ 10 ತಂಡಗಳು ತಮ್ಮ ಅಂತಿಮ ಸಿದ್ಧತೆಗಳನ್ನು ಆರಂಭಿಸಿವೆ.

ಇದೇ ವೇಳೆ ಭದ್ರತಾ ಸಮಸ್ಯೆಗಳಿಂದಾಗಿ ಸತತ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್‌ಸಿಎ) ಕಳವಳ ವ್ಯಕ್ತಪಡಿಸಿದ್ದರೂ, ಮುಂಬರುವ ಏಕದಿನ ವಿಶ್ವಕಪ್‌ನ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ.

 BCCI Rejected Hyderabad Cricket Associations Request To Change The 2023 World Cup Schedule

ನ್ಯೂಜಿಲೆಂಡ್-ನೆದರ್ಲ್ಯಾಂಡ್ಸ್ ಮತ್ತು ಪಾಕಿಸ್ತಾನ-ಶ್ರೀಲಂಕಾ ನಡುವಿನ ಪಂದ್ಯಗಳಿಗೆ ಭದ್ರತೆಯನ್ನು ಒದಗಿಸುವ ಬಗ್ಗೆ ಸ್ಥಳೀಯ ಪೊಲೀಸರು ಕಳವಳ ವ್ಯಕ್ತಪಡಿಸಿದ ನಂತರ, ಅಕ್ಟೋಬರ್ 9 ಮತ್ತು 10ರಂದು ನಿಗದಿಯಾಗಿರುವ ಎರಡು ಸತತ ಪಂದ್ಯಗಳ ಭದ್ರತಾ ವ್ಯವಸ್ಥೆಗಳ ಬಗ್ಗೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆಯು ಬಿಸಿಸಿಐಗೆ ಮನವರಿಕೆ ಮಾಡಿತ್ತು.

ಆದರೆ, ಈ ಹಂತದಲ್ಲಿ ವಿಶ್ವಕಪ್ ಪಂದ್ಯಗಳನ್ನು ಮರು ನಿಗದಿಪಡಿಸುವುದು ಸಾಧ್ಯವಿಲ್ಲ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆಗೆ ತಿಳಿಸಿದೆ. ಸುಪ್ರೀಂ ಕೋರ್ಟ್‌ನ ಆಡಳಿತಾಧಿಕಾರಿ ಎಲ್‌ ನಾಗೇಶ್ವರ ರಾವ್‌ ನೇಮಿಸಿದ ತಂಡದ ಸದಸ್ಯ ದುರ್ಗಾ ಪ್ರಸಾದ್‌ ಅವರು ಬಿಸಿಸಿಐ ಜತೆಗಿನ ಚರ್ಚೆಯನ್ನು ಒಪ್ಪಿಕೊಂಡಿದ್ದಾರೆ.

"ನಾವು ಬಿಸಿಸಿಐಯೊಂದಿಗೆ ಚರ್ಚೆ ನಡೆಸಿದ್ದೇವೆ ಮತ್ತು ಈ ಸಮಯದಲ್ಲಿ ವೇಳಾಪಟ್ಟಿಯನ್ನು ಬದಲಾಯಿಸುವುದು ಕಾರ್ಯಸಾಧ್ಯವಲ್ಲ ಎಂದು ಅವರು ತಿಳಿಸಿದ್ದಾರೆ. ಆದ್ದರಿಂದ, ನಾವು ಸಹಕರಿಸಲು ಸಮ್ಮತಿಸಿದ್ದೇವೆ," ಎಂದು ದುರ್ಗಾ ಪ್ರಸಾದ್‌ ಹೇಳಿಕೆ ನೀಡಿದ್ದಾರೆ.

ಸೋಮವಾರ, ಆಗಸ್ಟ್ 21ರಂದು ಸಂಬಂಧಿಸಿದ ಪಂದ್ಯಗಳ ವ್ಯವಸ್ಥೆಗಳ ಕುರಿತು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧಿಕಾರಿಗಳು ಬಿಸಿಸಿಐನ ಹಂಗಾಮಿ ಸಿಇಒ ಹೇಮಾಂಗ್ ಅಮೀನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಹೈದರಾಬಾದ್ ಪೊಲೀಸರು ನ್ಯೂಜಿಲೆಂಡ್-ನೆದರ್ಲ್ಯಾಂಡ್ಸ್ ಮತ್ತು ಪಾಕಿಸ್ತಾನ-ಶ್ರೀಲಂಕಾ ಎರಡೂ ಪಂದ್ಯಗಳಿಗೆ ಭದ್ರತಾ ವ್ಯವಸ್ಥೆ ಒದಗಿಸುವ ಬಗ್ಗೆ ಭರವಸೆ ನೀಡಿದ್ದಾರೆ.

"ಬಿಸಿಸಿಐನ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಕೊನೆಯ ಕ್ಷಣದಲ್ಲಿ ಬದಲಾವಣೆ ಮಾಡುವುದು ಸವಾಲಿನ ಸಂಗತಿಯಾಗಿದೆ ಎಂದು ನಮಗೆ ತಿಳಿಸಲಾಗಿದೆ ಮತ್ತು ಪಂದ್ಯಗಳನ್ನು ಕ್ರಮಬದ್ಧವಾಗಿ ಕಾರ್ಯಗತಗೊಳಿಸಲು ನಾವು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ".

"ನಾವು ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಮತ್ತು ಅವರು ನಮಗೆ ಸಂಪೂರ್ಣ ಭದ್ರತೆಯ ಭರವಸೆ ನೀಡಿದ್ದಾರೆ," ಎಂದು ಎಚ್‌ಸಿಎ ಅಧಿಕಾರಿ ತಿಳಿಸಿದರು.

ಬಹುನಿರೀಕ್ಷಿತ 2023ರ ಐಸಿಸಿ ವಿಶ್ವಕಪ್‌ ಆರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ, ಎಲ್ಲರ ಗಮನವು ತಂಡಗಳ ಸಿದ್ಧತೆಗಳತ್ತ ಬದಲಾಗುತ್ತಿದೆ. ಅಕ್ಟೋಬರ್ 5ರಂದು ಅಹಮದಾಬಾದ್‌ನಲ್ಲಿ ವಿಶ್ವಕಪ್ ಪಂದ್ಯಾವಳಿಗೆ ಚಾಲನೆ ಸಿಗಲಿದೆ ಮತ್ತು ಇದೇ ಆಗಸ್ಟ್ 25ರಿಂದ ಟಿಕೆಟ್‌ಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ.

Story first published: Monday, August 21, 2023, 23:35 [IST]
Other articles published on Aug 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+