BCCI ಮಹತ್ವದ ನಿರ್ಣಯ: ಟೀಮ್ ಇಂಡಿಯಾ ಆಟಗಾರರು ಐಪಿಎಲ್ ವೇಳೆ ಈ ಕೆಲಸ ಮಾಡಬೇಕು
ಟೀಮ್ ಇಂಡಿಯಾ ಸದ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿದೆ. ಈ ವೇಳೆ ಭರ್ಜರಿ ಪ್ರದರ್ಶನ ನೀಡಿದ್ದು ಎರಡು ಜಯ ಸಾಧಿಸಿದ್ದು, "ಎ" ಗುಂಪಿನಲ್ಲಿ ಎರಡು ಅಂಕಗಳನ್ನು ಕಲೆ ಹಾಕಿದ್ದು, ಸೆಮಿಫೈನಲ್ ಹಂತವನ್ನು ಪ್ರವೇಶಿಸಿದೆ. ಈ ಟೂರ್ನಿ ಮುಗಿದ ಬಳಿಕ ಐಪಿಎಲ್ ಆರಂಭವಾಗಲಿದೆ. ವಿಶ್ವದ ಶ್ರೀಮಂತ ಲೀಗ್‌ನಲ್ಲಿ ಹಲವು ಸ್ಟಾರ್ ಆಟಗಾರರು ಭಾಗವಹಿಸಲಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಆಟಗಾರರು ಸಹ ಭಾಗವಹಿಸುತ್ತಿದ್ದಾರೆ. ಐಪಿಎಲ್ ಮುಗಿದ ಬಳಿಕ ಸಾಲು ಸಾಲು ಟೆಸ್ಟ್ ಸರಣಿ ಆರಂಭವಾಗಲಿದೆ. ಇದಕ್ಕಾಗಿ ಬಿಸಿಸಿಐ ಮಾಸ್ಟರ್ ಪ್ಲ್ಯಾನ್ ಮಾಡಿದೆ.
ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಪಂದ್ಯಗಳು ನಡೆದಿವೆ. ಈ ಟೂರ್ನಿಯ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಈ ಟೂರ್ನಿ ಮುಗಿದ ಎರಡು ವಾರಗಳ ಬಳಿಕ ಐಪಿಎಲ್ 2025 ಭಾರತದಲ್ಲಿ ಆರಂಭವಾಗಲಿದೆ. ಈ ಮೆಗಾ ಟೂರ್ನಿ ಭಾರತದಲ್ಲಿ ಎರಡು ತಿಂಗಳು ಕಾಲ ನಡೆಯಲಿದೆ. ಈ ವೇಳೆ ಟೀಮ್ ಇಂಡಿಯಾ ಆಟಗಾರರ ವೇಳಾ ಪಟ್ಟಿ ಬ್ಯೂಸಿ ಆಗಿದೆ.

ಐಪಿಎಲ್ 2025 ಮುಗಿದ ಬಳಿಕ ಟೀಮ್ ಇಂಡಿಯಾ ಟೆಸ್ಟ್ ಸರಣಿಗಳನ್ನು ಆಡಲಿದೆ. ಐಪಿಎಲ್ ಮುಗಿದ ಕೆಲವೇ ದಿನಗಳಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್‌ಗೆ ಪ್ರವಾಸವನ್ನು ಬೆಳಸಲಿದೆ. ಈ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಮೆಗಾ ಪ್ಲ್ಯಾನ್ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಐಪಿಎಲ್ ವೇಳೆಯಲ್ಲಿಯೇ ಆಟಗಾರರಿಗೆ ರೆಡ್ ಬಾಲ್ ಪಂದ್ಯಗಳನ್ನು ಆಡುವಂತೆಯೂ ಕೆಳ ಬಹುದು ಎಂದು ಹೇಳಲಾಗುತ್ತಿದೆ.
ಬಿಸಿಸಿಐ ಪ್ಲ್ಯಾನ್ ಏನು?
ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಭಾಗ ವಹಿಸುವುದನ್ನು ಖಚಿತ ಪಡಿಸಿಕೊಳ್ಳಲು ಬಿಸಿಸಿಐ ಒಂದು ಯೋಜನೆಯನ್ನು ಮಾಡಿದೆ ಎಂದು ಕ್ರಿಕಬಜ್ ವರದಿ ಮಾಡಿದೆ. ಕೆಲವು ಆಟಗಾರರಿಗೆ ಐಪಿಎಲ್ ವೇಳೆ ರೆಡ್ ಬೌಲ್ ಪ್ರ್ಯಾಕ್ಟಿಸ್ ಅಥವಾ ಬೇರೆ ಚಟುವಟಿಕೆಗಳನ್ನು ಮಾಡುವಂತೆ ಸೂಚಿಸುಚ ಸಾಧ್ಯತೆ ಇದೆ ಎಂದು ವರದಿ ಮಾಡಿದೆ. 18ನೇ ಆವೃತ್ತಿಯ ಐಪಿಎಲ್ ಮಾರ್ಚ್ 22 ರಿಂದ ಮೇ 25 ರವರೆಗೆ ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಜೂನ್ 20 ರಿಂದ ಆಡಲಿದೆ.

ಈ ಬಗ್ಗೆ ಇನ್ನು ನಿಖರವಾದ ಮಾಹಿತಿಗಳು ಹೊರ ಬಂದಿಲ್ಲ. ಆದರೆ ಟಿ20 ಕ್ರಿಕೆಟ್ ಆಡುವ ವೇಳೆಯೆ ರೆಡ್ ಬಾಲ್ ಕ್ರಿಕೆಟ್ ಆಡುವ ಕುರಿತಾದ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ. ದುಬೈನಲ್ಲಿ ಬಿಸಿಸಿಐ ಅಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪಾಕ್ ಪಂದ್ಯಕ್ಕೂ ಮುನ್ನ ಬಿಸಿಸಿಐ ಅಧಿಕಾರಿಗಳು ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಟ್ರೇಲಿಯಾದಲ್ಲಿ ನಿರಾಸೆ
ಟೀಮ್ ಇಂಡಿಯಾ ಇತ್ತೀಚಿಗೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ನೀರಸ ಪ್ರದರ್ಶನವನ್ನು ನೀಡಿತ್ತು. ಬಾರ್ಡರ್ ಗವಾಸ್ಕರ್ ಸರಣಿಯ ಐದು ಪಂದ್ಯಗಳಲ್ಲಿ ಭಾರತ ಕೇವಲ ಒಂದು ಪಂದ್ಯದಲ್ಲಿ ಜಯ ಸಾಧಿಸಿತ್ತು. ಈ ಸರಣಿಯನ್ನು ಟೀಮ್ ಇಂಡಿಯಾ 3-1 ರಿಂದ ಸೋಲು ಕಂಡಿತ್ತು. ಆಗ ಟೀಮ್ ಇಂಡಿಯಾ ಪ್ರದರ್ಶನದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications