ಬೂಮ್ರಾ ಸಂಪೂರ್ಣ ಫಿಟ್: ಮಹತ್ವದ ಅಪ್‌ಡೇಟ್ ನೀಡಿದ ಜಯ್ ಶಾ
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲರ್ ಜಸ್ಸಪ್ರೀತ್ ಬೂಮ್ರಾ ವಿಚಾರವಾಗಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಗಾಯದಿಂದಾಗಿ ಸುದೀರ್ಘ ಕಾಲದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಜಸ್ಪ್ರೀತ್ ಬೂಮ್ರಾ ಪ್ರಸ್ತುತ ಸಂಪೂರ್ಣವಾಗಿ ಆಡಲು ಫಿಟ್ ಆಗಿದ್ದು ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡುವ ಸಾಧ್ಯತೆ ಇದೆ ಎಂದಿದ್ದಾರೆ.
ಐರ್ಲೆಂಡ್ ತಂಡದ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಆಡಲಿದ್ದು ಈ ಸರಣಿಯಲ್ಲಿ ಟೀಮ್ ಇಂಡಿಯಾ ಪರವಾಗಿ ಬೂಮ್ರಾ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದಿದ್ದಾರೆ ಜಸ್ಪ್ರೀತ್ ಬೂಮ್ರಾ. ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಬೂಮ್ರಾ ಎನ್‌ಸಿಎನಲ್ಲಿ ರಿಹ್ಯಾಬಿಲಿಟೇಶನ್‌ನಲ್ಲಿ ಭಾಗಿಯಾಗಿದ್ದರು. ಇದೀಗ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಣಕ್ಕಿಳಿಯಲು ಅನುಭವಿ ವೇಗಿ ಸಿದ್ಧವಾಗಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಜಯ್ ಶಾ "ಬೂಮ್ರಾ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಬಹುಶಃ ಅವರು ಐರ್ಲೆಂಡ್ ಪ್ರವಾಸಕ್ಕೆ ತೆರಳಲಲಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ. ಇನ್ನು ವಿಶ್ವಕಪ್ ಟೂರ್ನಿಗೂ ಮುನ್ನ 12 ಏಕದಿನ ಪಂದ್ಯಗಳನ್ನು ಭಾರತ ಆಡಲಿದ್ದು ಐರ್ಲೆಡ್ ಪ್ರವಾಸ ಹೊರತುಪಡಿಸಿ ತಂಡದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲಾಗುತ್ತದೆ ಎಂದು ಕೂಡ ಅವರು ಹೇಳಿದರು.
ಇನ್ನು ಬೂಮ್ರಾ ಕಮ್‌ಬ್ಯಾಕ್ ಮಾಡುವ ಕಾರಣ ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದು ಉಳಿದಂತೆ ವಿಶ್ವಕಪ್ ತಂಡದಲ್ಲಿ ಆಡಲಿರುವ ಅನುಭವಿ ಆಟಗಾರರು ಯಾರು ಕೂಡ ಐರ್ಲೆಂಡ್ ಪ್ರವಾಸಕ್ಕೆ ತೆರಳುವುದಿಲ್ಲ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಸ್ವತಃ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಕೂಡ ಈ ಸರಣಿಯಿಂದ ಹೊರಗುಳಿಯಲಿದ್ದಾರೆ. ಐರ್ಲೆಂಡ್ ಪ್ರವಾಸ ಅಂತ್ಯವಾದ ಕೆಲ ದಿನಗಳಲ್ಲಿಯೇ ಏಷ್ಯಾ ಕಪ್ ಟೂರ್ನಿ ಆರಂಭವಾಗಲಿರುವ ಕಾರಣದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇನ್ನು ಇದೇ ಸಂದರ್ಭದಲ್ಲಿ ಬೇರೆ ಮಂಡಳಿಗಳ ಒಳಿತಿಗಾಗಿ ಇತರ ಭಾಗಗಳಿಗೂ ತಮಡ ಪ್ರವಾಸ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಜೈ ಶಾ ಹೇಳಿಕೆ ನೀಡಿದ್ದಾರೆ. "ಇತರ ಮಂಡಳಿಗಳ ಒಳಿತಿಗಾಗಿ ನಾವು ಎಲ್ಲಾ ಕಡೆಗಳಿಗೆ ಪ್ರವಾಸ ಕೈಗೊಳ್ಳಬೇಕಾಗುತ್ತದೆ. ಸಾಕಷ್ಟು ಕ್ರಿಕೆಟ್‌ಗಳು ಆಡುವ ಕಾರಣ ಸಾಕಷ್ಟು ಗಾಯಗಳು ಕೂಡ ಉಂಟಾಗುತ್ತವೆ. ಹಾಗುದ್ದರೂ ನಾವು ಬೇರೆ ಮಂಡಳಿಗಳ ಬಗ್ಗೆಯೂ ಗಮನ ನೀಡಬೇಕಾಗುತ್ತದೆ" ಎಂದಿದ್ದಾರೆ ಜಯ್ ಶಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications