ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಓವಲ್ ಟೆಸ್ಟ್ ಗೆಲುವು: ಡ್ರೆಸ್ಸಿಂಗ್ ರೂಂನಲ್ಲಿ ಟೀಮ್ ಇಂಡಿಯಾ ಸಂಭ್ರಮಾಚರಣೆಯ ವಿಡಿಯೋ ವೈರಲ್

IND vs ENG: BCCI shares the celebration video of Indian players at dressing room after Oval test victory

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿಯಾಗಿ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ ಅದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ. ಅದರಲ್ಲಿಯೂ ಇತ್ತೀಚಿಗಷ್ಟೆ ಮುಗಿದಿರುವ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪಂದ್ಯ ನಡೆಯುವಾಗ ಸಾಕಷ್ಟು ಕುತೂಹಲ ಮತ್ತು ಚರ್ಚೆಗಳಿಗೆ ಕಾರಣವಾಗಿತ್ತು, ಇದೀಗ ಪಂದ್ಯ ಮುಗಿದ ನಂತರವೂ ಕ್ರಿಕೆಟ್ ಜಗತ್ತಿನಲ್ಲಿ ಈ ಪಂದ್ಯದ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಕಷ್ಟದ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಯಾವ ರೀತಿ ಜಯವನ್ನು ಸಾಧಿಸಿತು ಎಂಬುದರ ಕುರಿತು ಸಾಕಷ್ಟು ಮಾತುಕತೆಗಳು ನಡೆಯುತ್ತಿವೆ.

'ವಿಶ್ವ ಕ್ರಿಕೆಟ್‍ನಲ್ಲಿ ಭಾರತ ಪವರ್‌ಹೌಸ್, ಕೊಹ್ಲಿ ಸೂಪರ್‌ಸ್ಟಾರ್' ಎಂದು ಕೊಂಡಾಡಿದ ದಿಗ್ಗಜ ಕ್ರಿಕೆಟಿಗ'ವಿಶ್ವ ಕ್ರಿಕೆಟ್‍ನಲ್ಲಿ ಭಾರತ ಪವರ್‌ಹೌಸ್, ಕೊಹ್ಲಿ ಸೂಪರ್‌ಸ್ಟಾರ್' ಎಂದು ಕೊಂಡಾಡಿದ ದಿಗ್ಗಜ ಕ್ರಿಕೆಟಿಗ

ಈ ಪಂದ್ಯ ಆರಂಭಕ್ಕೂ ಮುನ್ನ ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯದಲ್ಲಿ ಗೆಲುವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದ್ದವು. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಕೊಹ್ಲಿ ಪಡೆ ಮೊದಲನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಶಾರ್ದೂಲ್ ಠಾಕೂರ್ ಜವಾಬ್ದಾರಿಯುತ ಅರ್ಧಶತಕದ ನೆರವಿನಿಂದ 191 ರನ್‌ಗಳಿಗೆ ಆಲ್ ಔಟ್ ಆಯಿತು, ಇಂಗ್ಲೆಂಡ್ ಮೊದಲನೇ ಇನ್ನಿಂಗ್ಸ್‌ನಲ್ಲಿ ಓಲ್ಲಿ ಪೋಪ್ ಮತ್ತು ಕ್ರಿಸ್ ವೋಕ್ಸ್ ಆಕರ್ಷಕ ಅರ್ಧಶತಕಗಳ ನೆರವಿನಿಂದ 290 ರನ್ ಗಳಿಸಿ 99 ರನ್‌ಗಳ ಮುನ್ನಡೆಯನ್ನು ಸಾಧಿಸಿತು. ಈ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ದ್ವಿತೀಯ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಶತಕ, ಚೇತೇಶ್ವರ್ ಪೂಜಾರ, ಶಾರ್ದೂಲ್ ಠಾಕೂರ್ ಹಾಗೂ ಪಂತ್ ಅರ್ಧಶತಕ ಮತ್ತು ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನದ ನೆರವಿನಿಂದ 466 ರನ್ ಗಳಿಸುವುದರ ಮೂಲಕ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿತು.

ಹೀಗೆ ಭಾರತ ತಂಡ ನೀಡಿದ ಬೃಹತ್ ಮೊತ್ತವನ್ನು ಮುಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್ 210 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ 157 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-2 ಅಂತರದ ಹಿನ್ನಡೆಯನ್ನು ಅನುಭವಿಸಿದೆ.

ಇತ್ತ 50 ವರ್ಷಗಳ ನಂತರ ಓವಲ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸಿದ ಕೊಹ್ಲಿ ಪಡೆಗೆ ಡ್ರೆಸ್ಸಿಂಗ್ ರೂಂನಲ್ಲಿ ಅದ್ದೂರಿ ಸ್ವಾಗತ ದೊರೆತಿದೆ. ಪಂದ್ಯ ಗೆದ್ದು ಡ್ರೆಸಿಂಗ್ ರೂಮ್ ತಲುಪಿದ ಟೀಮ್ ಇಂಡಿಯಾ ಆಟಗಾರರು ಸಂಭ್ರಮಾಚರಣೆಯನ್ನೂ ಮಾಡಿದ್ದಾರೆ. ಟೀಮ್ ಇಂಡಿಯಾದ ಸಿಬ್ಬಂದಿ ವರ್ಗದವರು ಕೂಡ ಆಟಗಾರರ ಜತೆ ಸೇರಿಕೊಂಡು ಓವೆಲ್ ಕ್ರೀಡಾಂಗಣದಲ್ಲಿ ಸಾಧಿಸಿದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ದಾರೆ.

ಓವಲ್ ಟೆಸ್ಟ್: ಪಂದ್ಯಶ್ರೇಷ್ಠ ಪ್ರಶಸ್ತಿಗೆ ನನಗಿಂತ ಈ ಆಟಗಾರ ಅರ್ಹ ಎಂದ ರೋಹಿತ್ ಶರ್ಮಾ!ಓವಲ್ ಟೆಸ್ಟ್: ಪಂದ್ಯಶ್ರೇಷ್ಠ ಪ್ರಶಸ್ತಿಗೆ ನನಗಿಂತ ಈ ಆಟಗಾರ ಅರ್ಹ ಎಂದ ರೋಹಿತ್ ಶರ್ಮಾ!

ನಾಲ್ಕನೇ ಟೆಸ್ಟ್ ನಲ್ಲಿ ಗೆಲುವು ಸಾಧಿಸಿದ ಭಾರತ! | Oneindia Kannada

ಈ ವಿಶೇಷವಾದ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು ಭಾರತದ ಕ್ರಿಕೆಟ್ ಅಭಿಮಾನಿಗಳ ಜೊತೆ ಹಂಚಿಕೊಂಡಿದೆ. ಸದ್ಯ ಬಿಸಿಸಿಐ ಟ್ವೀಟ್ ಮಾಡಿರುವ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಸೆಪ್ಟೆಂಬರ್ 10ರ ಶುಕ್ರವಾರದಂದು ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಇಂಗ್ಲೆಂಡ್ ತಂಡ ಸರಣಿಯನ್ನು ಡ್ರಾ ಮಾಡಿಕೊಳ್ಳಬೇಕೆಂದರೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಲೇಬೇಕಾಗಿದೆ. ಇನ್ನು ಟೀಮ್ ಇಂಡಿಯಾ ಸರಣಿಯನ್ನು ಗೆಲ್ಲಬೇಕೆಂದರೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐದನೇ ಟೆಸ್ಟ್ ಪಂದ್ಯವನ್ನು ಡ್ರಾ ಅಥವಾ ಗೆದ್ದರೆ ಸಾಕಾಗಿದೆ.

Story first published: Tuesday, September 7, 2021, 17:28 [IST]
Other articles published on Sep 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X