For Quick Alerts
ALLOW NOTIFICATIONS  
For Daily Alerts
 

Virat Kohli-Rohit Sharma: ವಿರಾಟ್, ರೋಹಿತ್ ಅವರಿಗೆ ಕೊನೆಯ ಅವಕಾಶ

ಭಾರತದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಬಿಸಿಸಿಐ ಗಂಭೀರ ಚಿಂತನೆಯನ್ನು ನಡೆಸಿದೆ. ಈ ವೇಳೆ ಈ ಇಬ್ಬರೂ ಸ್ಟಾರ್ ಆಟಗಾರರಿಗೆ ಇನ್ನು ಅವಕಾಶವನ್ನು ನೀಡಬೇಕಾ ಎಂಬ ಬಗ್ಗೆ ಸಹ ಚರ್ಚೆ ನಡೆದಿದೆ. ಭಾರತದಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್‌ ಸರಣಿ ಹಾಗೂ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಬಾರ್ಡರ್‍‌ ಗವಾಸ್ಕರ್‍‌ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಈ ಸೂಪರ್ ಸ್ಟಾರ್ ಬ್ಯಾಟರ್‍‌ಗಳು ವಿಫಲರಾಗಿದ್ದಾರೆ. ಈ ಇಬ್ಬರೂ ಆಟಗಾರರು ಟೆಸ್ಟ್‌ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ಸೋಲು ಕಾಣಬೇಕಾಯಿತು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಆಯ್ಕೆಯ ಬಗ್ಗೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಕೋಚ್ ಗೌತಮ್ ಗಂಭೀರ್ ಬಿಸಿಸಿಐ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ರೋಹಿತ್-ವಿರಾಟ್ ಭವಿಷ್ಯದ ಬಗ್ಗೆ ಚರ್ಚಿಸಲಾಗಿದೆ. ಬಿಸಿಸಿಐ ಅಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಇಬ್ಬರೂ ಆಟಗಾರರಿಗೆ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಇವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಇದೆ. ಕಳೆದ ವರ್ಷ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೇವಲ ಮೂರು ಏಕದಿನ ಪಂದ್ಯಗಳನ್ನು ಆಡಿದ್ದಾರೆ.

BCCI to Discuss Future of Virat Kohli and Rohit Sharma Ahead of Champions Trophy

ಕೊನೆಯ ಚಾನ್ಸ್‌?

ರೋಹಿತ್‌ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅಬ್ಬರಿಸದೇ ಇದ್ದರೆ ಅವರ ಭವಿಷ್ಯದ ಬಗ್ಗೆ ಚಿಂತನೆಗಳು ಆರಂಭವಾಗಲಿವೆ. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಈ ಇಬ್ಬರೂ ಸ್ಟಾರ್ ಆಟಗಾರರು ಸ್ಥಿರ ಪ್ರದರ್ಶನ ನೀಡಿದ್ದರು. ಇವರಿಬ್ಬರೂ ಈಗಾಗಲೇ ಟಿ20 ವಿಶ್ವಕಪ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈಗ ಇವರಿಬ್ಬರೂ ಏಕದಿನ ಹಾಗೂ ಟೆಸ್ಟ್‌ ಪಂದ್ಯಗಳಲ್ಲಿ ಮಾತ್ರ ಆಡಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಒಬ್ಬ ಸೂಪರ್ ಸ್ಟಾರ್ ಆಟಗಾರ. ಇವರು ಐಸಿಸಿ ಟ್ರೋಫಿಗಳಲ್ಲಿ ಉತ್ತಮ ಪ್ರದರ್ಶನ ನೀಡಿ ರನ್‌ ಕಲೆ ಹಾಕಿದ ಸಾಧಕ. ಈ ಆಟಗಾರರು ಚಾಂಪಿಯನ್ಸ್‌ ಟ್ರೋಫಿಯಲ್ಲಿ ಲಯಕ್ಕೆ ಮರಳಿ ತಂಡಕ್ಕೆ ಚಾಂಪಿಯನ್‌ ಪಟ್ಟವನ್ನು ತೊಡಿಸಬಹುದು. ಇವರಿಬ್ಬರೂ ಮತ್ತೆ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಇದುವರೆಗೆ ಇವರು 13906 ರನ್ ಸಿಡಿಸಿದ್ದಾರೆ.

BCCI to Discuss Future of Virat Kohli and Rohit Sharma Ahead of Champions Trophy

ಆಸ್ಟ್ರೇಲಿಯಾ ಪ್ರವಾಸದಲ್ಲಿ ಹೇಗಿತ್ತು ಪ್ರದರ್ಶನ

ಟೀಮ್ ಇಂಡಿಯಾದ ಪರ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಇವರು ಪರ್ತ್‌ನಲ್ಲಿ ನಡೆದ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದು ಬಿಟ್ಟರೆ ಉಳಿದೆಲ್ಲಾ ಪಂದ್ಯಗಳಲ್ಲಿ ವಿರಾಟ್‌ ಬ್ಯಾಟ್‌ ಮೌನಕ್ಕೆ ಶರಣಾಗಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡಿದ 5 ಟೆಸ್ಟ್‌ ಪಂದ್ಯಗಳಲ್ಲಿ 190 ರನ್‌ ಕಲೆ ಹಾಕಿದ್ದಾರೆ. ಇನ್ನು ಟೀಮ್ ಇಂಡಿಯಾದ ಕ್ಯಾಪ್ಟನ್‌ ರೋಹಿತ್ ಶರ್ಮಾ ಸಹ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರು ಸಿಡ್ನಿ ಟೆಸ್ಟ್‌ ಪಂದ್ಯದಿಂದ ಹಿಂದೆ ಸರಿದಿದ್ದರು.

Story first published: Saturday, January 11, 2025, 22:27 [IST]
Other articles published on Jan 11, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+