ಫೆ.1ರಂದು ಸಚಿನ್, ಬಿಸಿಸಿಐನಿಂದ ಟಿ20 ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ ಸನ್ಮಾನ

2023ರ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ನ ಚೊಚ್ಚಲ ಆವೃತ್ತಿಯಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಿ ಇತಿಹಾಸ ಸೃಷ್ಟಿಸಿತು.
ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ ಸೋಲಿಸುವ ಮೂಲಕ ಚೊಚ್ಚಲ ಟಿ20 ವಿಶ್ವಕಪ್ ಟ್ರೋಫಿಯನ್ನು ಭಾರತ ಮಹಿಳೆಯರು ಎತ್ತಿ ಹಿಡಿದರು.
ಫೆಬ್ರವರಿ 1ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ವಿಶ್ವಕಪ್ ವಿಜೇತ ಭಾರತ ಅಂಡರ್-19 ಮಹಿಳಾ ತಂಡವನ್ನು ಭಾರತದ ಮಾಜಿ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ಮಂಡಳಿಯ ಪದಾಧಿಕಾರಿಗಳು ಅಭಿನಂದಿಸಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಸೋಮವಾರ ಪ್ರಕಟಿಸಿದ್ದಾರೆ.

"ಭಾರತ ರತ್ನ ಸಚಿನ್ ತೆಂಡೂಲ್ಕರ್ ಮತ್ತು ಬಿಸಿಸಿಐ ಪದಾಧಿಕಾರಿಗಳು ಫೆಬ್ರವರಿ 1ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಸಂಜೆ 6:30ಕ್ಕೆ ಟಿ20 ವಿಶ್ವಕಪ್ ವಿಜೇತ U-19 ಭಾರತ ಮಹಿಳಾ ತಂಡವನ್ನು ಅಭಿನಂದಿಸಲಿದ್ದಾರೆ ಎಂದು ನಾನು ಬಹಳ ಸಂತೋಷದಿಂದ ಹಂಚಿಕೊಳ್ಳುತ್ತೇನೆ. ಯುವ ಭಾರತೀಯ ಮಹಿಳಾ ತಂಡ ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ ಮತ್ತು ನಾವು ಮಾಡುತ್ತೇವೆ. ಅವರ ಸಾಧನೆಗಳನ್ನು ಗೌರವಿಸಲಿದ್ದೇವೆ," ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವಿಟರ್‌ನಲ್ಲಿ ಬರೆದಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಸರಣಿಯ ಅಂತಿಮ ಟಿ20 ಮತ್ತು ಸರಣಿ ನಿರ್ಣಾಯಕ ಪಂದ್ಯ ಬುಧವಾರ, ಫೆಬ್ರವರಿ 1ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.
ಭಾನುವಾರ, ಜನವರಿ 29ರಂದು ನಡೆದ ಅಂಡರ್-19 ಟಿ20 ವಿಶ್ವಕಪ್‌ನ ಚೊಚ್ಚಲ ಪ್ರಶಸ್ತಿಗೆ ಭಾರತ ವನಿತೆಯರ ತಂಡವನ್ನು ಶಫಾಲಿ ವರ್ಮಾ ಮುನ್ನಡೆಸಿದರು. ಮಹಿಳಾ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಐಸಿಸಿ ಟ್ರೋಫಿ ಗೆದ್ದ ಭಾರತದ ಮೊದಲ ನಾಯಕಿ ಎನಿಸಿದರು.
ನೂತನ ಟಿ20 ವಿಶ್ವಕಪ್ ಚಾಂಪಿಯನ್ ಭಾರತದ ನಾಯಕಿ ಶಫಾಲಿ ವರ್ಮಾ, ಆರಂಭಿಕ ಜೊತೆಗಾರ್ತಿ ಶ್ವೇತಾ ಸೆಹ್ರಾವತ್ ಮತ್ತು ಲೆಗ್ ಸ್ಪಿನ್ನರ್ ಪಾರ್ಶವಿ ಚೋಪ್ರಾ ಸೇರಿದಂತೆ ಮೂವರು ಭಾರತೀಯ ಆಟಗಾರ್ತಿಯರು ಸೋಮವಾರ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications