ಮುಂಬರುವ ಟಿ20 ವಿಶ್ವಕಪ್‌ಗಾಗಿ 15 ಸದಸ್ಯರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಿದಿ ಬಿಸಿಸಿಐ ಈಗ ತನ್ನ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಹೊಸ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.
ಕ್ರಿಕೆಟ್ ಅಭಿಮಾನಿಗಳಿಗೆ ಟೀಂ ಇಂಡಿಯಾದ ಹೊಸ ಜೆರ್ಸಿ ಅನಾವರಣ ಗೊಳಿಸುವುದಾಗಿ ಅಧಿಕೃತವಾಗಿ ತಿಳಿಸಿದೆ. ಈ ಕುರಿತು ಭಾರತೀಯ ಕ್ರಿಕೆಟ್ ಮಂಡಳಿ (BCCI) ಸೋಮವಾರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.
ಈ ಬಾರಿ ಟೀಂ ಇಂಡಿಯಾದ ಜೆರ್ಸಿಯ ಪ್ರಾಯೋಜಕತ್ವವನ್ನು ಎಂಪಿಎಲ್ ತೆಗದುಕೊಂಡಿದೆ. ಎಂಪಿಎಲ್ ಕೂಡ ಟ್ವಿಟರ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ. ಈಗ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಹೊಸ ಜೆರ್ಸಿಯನ್ನು ಅನಾವರಣ ಮಾಡುವುದಾಗಿ ಹೇಳಿಕೊಂಡಿದ್ದಾರೆ.
ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಸರಣಿ ಆಡಲಿದೆ. ಈ ಸರಣಿಗೂ ವಿಶ್ವಕಪ್‌ನಲ್ಲಿ ಆಡುವ ತಂಡವನ್ನೇ ಆಯ್ಕೆ ಮಾಡಲಾಗಿದೆ. ಈ ಬಾರಿ ಗಾಯದ ಸಮಸ್ಯೆಯಿಂದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ.

ಅಭಿಮಾನಿಗಳಿಗೆ ಆಹ್ವಾನ ನೀಡಿದ ಟೀಂ ಇಂಡಿಯಾ
ಈಗ ಬಿಡುಗಡೆಯಾಗಿರುವ ಹೊಸ ವಿಡಿಯೋದಲ್ಲಿ ಅಭಿಮಾನಿಗಳಿಗೆ ಹೊಸ ಜೆರ್ಸಿಯ ಭಾಗವಾಗಲು ಆಹ್ವಾನ ನೀಡಲಾಗಿದೆ.
ವೀಡಿಯೊದಲ್ಲಿ, ಭಾರತೀಯ ನಾಯಕ ರೋಹಿತ್, ನೀವು ನಮ್ಮನ್ನು ಇಂದು ಕ್ರಿಕೆಟಿಗರನ್ನಾಗಿ ಮಾಡುತ್ತೀರಿ' ಎಂದು ಹೇಳಿದ್ದಾರೆ. ಅಂತೆಯೇ ಶ್ರೇಯಸ್ ಅಯ್ಯರ್, 'ನಿಮ್ಮ ಪ್ರೋತ್ಸಾಹದಿಂದಲೇ ನಮಗೆ ಶಕ್ತಿ ಬಂದಿದೆ' ಎಂದಿದ್ದಾರೆ. ಅಲ್ಲದೇ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಟೀಮ್ ಇಂಡಿಯಾದ ಹೊಸ ಜೆರ್ಸಿಯ ಭಾಗವಾಗಿರಿ' ಎಂದು ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ.
2007 ರಲ್ಲಿ ಟಿ20 ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯಲ್ಲಿ ಬಳಸಲಾದ ತಿಳಿ ನೀಲಿ ಬಣ್ಣದ ಜರ್ಸಿಯನ್ನು ಧರಿಸಿರುವ ಟೀಮ್ ಇಂಡಿಯಾವನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.
ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ಭಾರತ ತನ್ನ ಟಿ20 ವಿಶ್ವಕಪ್ 2022 ಅಭಿಯಾನ ಪ್ರಾರಂಭಿಸಲಿದೆ.
ಟಿ20 ವಿಶ್ವಕಪ್ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (WK), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಸ್ಟ್ಯಾಂಡ್-ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್