ರೋಹಿತ್ ಶರ್ಮಾಗೆ ಟೆಸ್ಟ್ ತಂಡವನ್ನು ಮುನ್ನಡೆಸುವುದು ಕಷ್ಟವಲ್ಲ: ಕಾರಣ ವಿರಾಟ್ ಕೊಹ್ಲಿ ಎಂದ ಗಂಭೀರ್

ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆರಂಭವಾಗಿದ್ದು ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಸಾಕಷ್ಟು ವಿಶೇಷತೆಗಳಿಗೆ ಸಾಕಷ್ಟಿಯಾಗಿದೆ. ಈ ಪಂದ್ಯ ವಿರಾಟ್ ಕೊಹ್ಲಿಗೆ ನೂರನೇ ಟೆಸ್ಟ್ ಪಂದ್ಯವಾಗಿದ್ದರೆ ರೋಹಿತ್ ಶರ್ಮಾಗೆ ನಾಯಕನಾಗಿ ಮೊದಲ ಟೆಸ್ಟ್ ಪಂದ್ಯ ಎಂಬುದು ಕೂಡ ಗಮನಾರ್ಹ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟೀಮ್ ಇಂಡಿಯಾ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ ಹಾಗೂ ನೂರನೇ ಪಂದ್ಯವನ್ನಾಡುತ್ತಿರುವ ವಿರಾಟ್ ಕೊಹ್ಲಿ ಬಗ್ಗೆ ವಿಶೇಷ ಮಾತುಗಳನ್ನಾಡಿದ್ದಾರೆ.
ಟಿ20 ಹಾಗೂ ಏಕದಿನ ಕ್ರಿಕೆಟ್‌ನ ಬಳಿಕ ರೋಹಿತ್ ಶರ್ಮಾ ಟೆಸ್ಟ್ ತಂಡದ ನಾಯಕತ್ವವನ್ನು ಕೂಡ ವಹಿಸಿಕೊಂಡಿದ್ದಾರೆ. ಪೂರ್ಣ ಪ್ರಮಾಣದ ನಾಯಕನಾದ ಬಳಿಕ ಸಿಕ್ಕ ಅವಕಾಶದಲ್ಲಿ ಅದ್ಭುತವಾಗಿ ತಮ್ಮ ನಾಯಕತ್ವದ ಕೌಶಲ್ಯ ತೋರಿಸಿರುವ ರೋಹಿತ್ ಶರ್ಮಾ ನಿರೀಕ್ಷೆಯ ಪ್ರದರ್ಶನ ನೀಡುತ್ತಿದ್ದಾರೆ. ಇದೀಗ ಟೆಸ್ಟ್ ಕ್ರಿಕೆಟ್‌ನ ನಾಯಕತ್ವ ಕೂಡ ರೋಹಿತ್ ಶರ್ಮಾ ವಹಿಸಿಕೊಂಡಿದ್ದಾರೆ. ಆದರೆ ವೈಟ್‌ಬಾಲ್ ಕ್ರಿಕೆಟ್‌ಗೆ ಹೋಲಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾಗೆ ಕಡಿಮೆ ಸವಾಲು ಇರಲಿದೆ ಎಂಬ ಅಭಿಪ್ರಾಯವನ್ನು ಗೌತಮ್ ಗಂಭೀರ್ ವ್ಯಕ್ತಪಡಿಸಿದ್ದಾರೆ.
ಗೌತಮ್ ಗಂಭೀರ್ ಈ ಮಾತನ್ನು ಹೇಳಲು ಪ್ರಮುಖ ಕಾರಣವೂ ಇದೆ. ವಿರಾಟ್ ಕೊಹ್ಲಿ ಕಾರಣದಿಂದಾಗಿಯೇ ರೋಹಿತ್‌ಗೆ ಟೆಸ್ಟ್ ಪಂದ್ಯದಲ್ಲಿ ಮು್ನನಡೆಸುವುದು ಸುಲಭವಾಗಲಿದೆ ಎಂಬ ಮಾತನ್ನು ಗಂಭೀರ್ ಆಡಿದ್ದಾರೆ. ಹಾಗಾದರೆ ಗೌತಮ್ ಗಂಭೀರ್ ಹೇಳಿದ್ದೇನು? ಮುಂದೆ ಓದಿ..

ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಕೆಲಸ ಸುಲಭಗೊಳಿಸಿದ್ದಾರೆ ಕೊಹ್ಲಿ
ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ ಅವರ ಕೆಲಸವನ್ನು ವಿರಾಟ್ ಕೊಹ್ಲಿ ಸುಲಭಗೊಳಿಸಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಟೆಸ್ಟ್ ತಂಡವನ್ನು ಮುನ್ನಡೆಸಲು ಹೆಚ್ಚು ಶ್ರಮವಹಿಸುವ ಅಗತ್ಯವಿಲ್ಲ. ಭಾರತ ತಂಡದ ಬೌಲಿಂಗ್ ವಿಭಾಗ ರೋಹಿತ್ ಶರ್ಮಾ ನೆರವಿಗೆ ಬರಲಿದ್ದು ತಂಡವನ್ನು ಮುನ್ನಡೆಸುವ ಪರಿಣತಿಯನ್ನು ರೋಹಿತ್ ಶರ್ಮಾ ಉತ್ತಮ ರೀತಿಯಲ್ಲಿ ಹೊಂದಿದ್ದಾರೆ ಎಂಬ ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಬೌಲಿಂಗ್ ಶಕ್ತಿ ಹೆಚ್ಚಿಸಿದ್ದು ಕೊಹ್ಲಿ
ಇನ್ನು ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದ ಸಾಮರ್ಥ್ಯ ಹೆಚ್ಚಲು ಕಾರಣ ವಿರಾಟ್ ಕೊಹ್ಲಿ, ವಿಶೇಷವಾಗಿ ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ಎಂಬ ಅಭಿಪ್ರಾಯವನ್ನು ಗಂಭೀರ್ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್ ಇಶಾಂತ್ ಶರ್ಮಾ ಅವರಂತಾ ಬೌಲರ್‌ಗಳಿಗೆ ಬೆಂಬಲವಾಗಿ ನಿಂತಿದ್ದಾರೆ. ಆ ಬೌಲರ್‌ಗಳು ತಮ್ಮ ಪ್ರದರ್ಶನದ ಮೂಲಕ ನಾಯಕನ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ ಎಂದಿದ್ದಾರೆ ಗೌತಮ್ ಗಂಭೀರ್. "ನಿಮ್ಮಲ್ಲಿ ಅಶ್ವಿನ್, ಜಡೇಜಾ, ಶಮಿ, ಬೂಮ್ರಾ ಅವರಂತಾ ಬೌಲರ್‌ಗಳು ಇರುವಾಗ ಕಠಿಣವಾಗಿರಲು ಸಾಧ್ಯವಿಲ್ಲ. ಬ್ಯಾಟರ್‌ಗಳು ಪಂದ್ಯವನ್ನು ಉತ್ತಮ ಸ್ಥಿತಿಗೆ ತಂದೆ ಬೌಲರ್‌ಗಳು ಮಾತ್ರವೇ ಪಂದ್ಯವನ್ನು ಗೆಲ್ಲಿಸಿಕೊಡಬಲ್ಲರು. ಕೊಹ್ಲಿ ಭಾರತದ ಬೌಲಿಂಗ್ ಬಲವನ್ನು ಹೆಚ್ಚಿಸಿದರು. ಹಾಗಾಗಿ ರೋಹಿತ್ ಶರ್ಮಾಗೆ ಟೆಸ್ಟ್ ತಂಡವನ್ನು ಮುನ್ನಡೆಸುವುದು ಕಷ್ಟ ಎನಿಸುವುದಿಲ್ಲ" ಎಂದಿದ್ದಾರೆ ಗೌತಮ್ ಗಂಭೀರ್.

ಬದಲಾವಣೆ ಕಷ್ಟವೆನಿಸದು
ಇನ್ನು ಇದೇ ಸಂದರ್ಭದಲ್ಲಿ ಭಾರತೀಯ ತಂಡದ ಇಬ್ಬರು ಪ್ರಮುಖ ಆಟಗಾರರಾದ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ತಂಡದಿಂದ ಹೊರಬಿದ್ದಿರುವ ಸಂದರ್ಭದಲ್ಲಿನ ಬದಲಾವಣೆ ಕೂಡ ನಾಯಕನಿಗೆ ದೊಡ್ಡ ಸವಾಲಾಗುವುದಿಲ್ಲ ಎಂದಿದ್ದಾರೆ ಗಂಭೀರ್. "ಈ ಬದಲಾವಣೆಗಳು ರೆಡ್ ಬಾಲ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾಗೆ ಹೆಚ್ಚಿನ ಸವಾಲಾಗುತ್ತದೆ ಎನಿಸುವುದಿಲ್ಲ. ಪೂಜಾರ ಹಾಗೂ ರಹಾನೆ ಬಗ್ಗೆ ನೀವು ಮಾತನಾಡುತ್ತೀರಾದರೆ ಅವರ ಸ್ಥಾನವನ್ನು ತುಂಬಲು ಹನುಮ ವಿಹಾರಿ ಹಾಗೂ ಶ್ರೇಯಸ್ ಐಯ್ಯರ್ ಅವರಂತಾ ಅನುಭವ ಇರುವ ಆಟಗಾರರು ನಿಮ್ಮ ತಂಡದಲ್ಲಿದ್ದಾರೆ. ಶ್ರೇಯಸ್ ಐಯ್ಯರ್ ಟೆಸ್ಟ್ ಮಾದರಿಯಲ್ಲಿ ಅದ್ಭುತ ಆರಂಭವನ್ನು ಪಡೆದುಕೊಂಡಿದ್ದಾರೆ" ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ.

ಭಾರತ ಹಾಗೂ ಶ್ರೀಲಂಕಾ ಪ್ಲೇಯಿಂಗ್ XI ಹೀಗಿದೆ
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
ಬೆಂಚ್: ಮೊಹಮ್ಮದ್ ಸಿರಾಜ್, ಶುಬ್ಮನ್ ಗಿಲ್, ಉಮೇಶ್ ಯಾದವ್, ಕುಲದೀಪ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೀಕರ್ ಭರತ್, ಸೌರಭ್ ಕುಮಾರ್
ಶ್ರೀಲಂಕಾ ಪ್ಲೇಯಿಂಗ್ XI: ದಿಮುತ್ ಕರುಣರತ್ನೆ(ನಾಯಕ), ಲಹಿರು ತಿರಿಮನ್ನೆ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ನಿರೋಶನ್ ಡಿಕ್ವೆಲ್ಲಾ(ವಿಕೆಟ್ ಕೀಪರ್), ಸುರಂಗ ಲಕ್ಮಲ್, ವಿಶ್ವ ಫೆರ್ನಾಂಡೊ, ಲಸಿತ್ ಎಂಬುಲ್ಡೆನಿಯಾ, ಲಹಿರು ಕುಮಾರ
ಬೆಂಚ್: ಪ್ರವೀಣ್ ಜಯವಿಕ್ರಮ, ದಿನೇಶ್ ಚಂಡಿಮಲ್, ಚಾಮಿಕಾ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ದುಷ್ಮಂತ ಚಮೀರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications