ಆಶಸ್ ಸರಣಿಯ ಅಂತಿಮ ಪಂದ್ಯವನ್ನು ಇಂಗ್ಲೆಂಡ್ ತಂಡ ಗೆಲ್ಲುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಇಂಗ್ಲೆಂಡ್ ತಂಡದ ಬಾಸ್‌ಬಾಲ್ ಶೈಲಿಯ ಆಟದ ಬಗ್ಗೆ ಈ ಸರಣಿ ಮತ್ತಷ್ಟು ಪ್ರಶ್ನೆಗಳನ್ನು ಎದುರಿಸುವಂತಾಗಿದೆ. ಇದೀಗ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರಲ್ಲಿ ಭಾರತದಲ್ಲಿ ಈ ಬಾಸ್ ಬಾಲ್ ಆಟ ಯಶಸ್ವಿಯಾಗುತ್ತಾ ಎಂಬ ಪ್ರಶ್ನೆ ಎದುರಾಗಿದ್ದು ಅದಕ್ಕೆ ಅವರು ಕುತೂಹಲಕಾರಿ ಉತ್ತರವನ್ನು ನೀಡಿದ್ದಾರೆ.
ಮುಂದಿನ ವರ್ಷದ ಫೆಬ್ರವರಿಯಲ್ಲಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು ಐದು ಪಂದ್ಯಗಳ ಟೆಸ್ಟ ಸರಣಿಯಲ್ಲಿ ಭಾಗವಹಿಸಲಿದೆ. ಬೆನ್ ಸ್ಟೋಕ್ಸ್ ನಾಯಕನಾಗಿ ಹಾಗೂ ಮೆಕ್ಕಲಮ್ ಕೋಚ್ ಆಗಿ 2022ರಲ್ಲಿ ಜವಾಬ್ಧಾರಿ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು ಕುತೂಹಲ ಮೂಡಿಸಿದೆ. ಇಂಗ್ಲೆಂಡ್ ತಂಡದ ಈ ಆಟದ ಶೈಲಿಯ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದುರಾಗುತ್ತಿದ್ದರೂ ಈ ಮ್ಯಾನೇಜ್‌ಮೆಂಟ್‌ನ ಅಡಿಯಲ್ಲಿ ಆಡಿದ 18 ಪಂದ್ಯಗಳಲ್ಲಿ 14 ಗೆಲುವು ಸಾಧಿಸಿದೆ.

ಆದರೆ ಆಸ್ಟ್ರೇಲಿಯಾ ವಿರುದ್ಧದ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ತವರಿನಲ್ಲಿಯೇ ನಿರೀಕ್ಷಿತ ಯಶಸ್ಸು ಸಾಧಿಸಿಲ್ಲ ಎನ್ನುವುದು ಸ್ಪಷ್ಟ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿ 2001ರ ಬಳಿಕ ಮೊದಲ ಬಾರಿಗೆ ಇಂಗ್ಲೆಂಡ್ ನೆಲದಲ್ಲಿ ಆಶಸ್ ಗೆಲ್ಲುವ ವಿಶ್ವಾಸ ಮೂಡಿಸಿತ್ತು. ಆದರೆ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ ಇಂಗ್ಲೆಂಡ್ ತಂಡ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿತು. ಇನ್ನು ಮಾನ್ಲಕಥ ಪಂದ್ಯದಲ್ಲಿ ಗೆಲ್ಲುವ ಹಂತದಲ್ಲಿದ್ದರೂ ಮಳೆಯಿಂದಾಗಿ ಪಂದ್ಯ ಡ್ರಾದಲ್ಲಿ ಅಂತ್ಯವಾಗಿತ್ತು. ಇನ್ನು ಕೊನೆಯ ಪಂದ್ಯ ಕೂಡ ಸಾಕಷ್ಟು ರೋಚಕತೆಯಿಂದ ಕೂಡಿದ್ದು ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 49 ರನ್‌ಗಳ ಅಂತರದ ಗೆಲುವು ಸಾಧಿಸಿ ಸರಣಿಯನ್ನು ಸಮಬಲಗೊಳಿಸಿತು.
ಈ ಸಂದರ್ಭದಲ್ಲಿ ಭಾರತದಲ್ಲಿ ಬಾಜ್‌ಬಾಲ್ ಯಶಸ್ವಿಯಾಗಲಿದೆಯಾ ಎಂಬ ಪ್ರಶ್ನೆಗೆ ಬೆನ್ ಸ್ಟೋಕ್ಸ್ "ನ್ಯೂಜಿಲೆಂಡ್ ತಂಡವನ್ನು ನಾವು 3-0 ಅಂತರದಿಂದ ಮಣಿಸಿದಾಗ ದಕ್ಷಿಣ ಆಫ್ರಿಖಾದಲ್ಲಿ ಇದು ಸಾಧ್ಯವಾ?, ಪಾಕಿಸ್ತಾನದಲ್ಲಿ ಇದನ್ನು ಸಾಧಿಸಲು ಸಾಧ್ಯವಾ, ಆಸ್ಟ್ರೇಲಿಯಾ ವಿರುದ್ಧ ನಾವು ಸಾಧಿಸಲಿದ್ದೇವಾ? ಎಂಬ ಮಾತುಗಳು ಕೇಲಿಬರುತ್ತಲೇ ಇತ್ತು. ಭಾರತದ ವಿರುದ್ಧ ನಾವು ಏನು ಮಾಡಲಿದ್ದೇವೆ ಎನ್ನುವುದು ಯಾರಿಗೆ ಗೊತ್ತದೆ? ಅದನ್ನು ಸಮಯವೇ ಹೇಳಲಿದೆ" ಎಂದಿದ್ದಾರೆ ಬೆನ್ ಸ್ಟೋಕ್ಸ್.
ನ್ಯೂಜಿಲೆಂಡ್ ತಂಡವನ್ನು 3-0 ಅಂತರದಿಂದ ಮಣಿಸಿದ ಆಸ್ಟ್ರೇಲಿಯಾ ತಂಡ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಆದರೆ ಬಾಸ್‌ಬಾಲ್ ಶೈಲಿಯನ್ನು ಮುಂದುವರಿಸಿದ ಇಂಗ್ಲೆಂಡ್ ತಂಡ ನಂತರದ ಎರಡು ಪಂದ್ಯದಲ್ಲಿಯತೂ ಗೆದ್ದು 2-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿತ್ತು. ಬಳಿಕ ಪಾಕಿಸ್ತಾನದ ವಿರುದ್ಧವೂ 3-0 ಅಂತರದ ಗೆಲುವು ಸಾಧಿಸಿತು.
ಇಂಗ್ಲೆಂಡ್ ತಂಡ ಇದೇ ಮೊದಲ ಬಾರಿಗೆ ಭಾರತಕ್ಕೆ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಮುಂದಿನ ವರ್ಷಾರಂಭದಲ್ಲಿ ಪ್ರವಾಸ ಕೈಗೊಳ್ಳಲಿದೆ. ಹೈದರಾಬಾದ್, ವಿಶಾಖಪಟ್ಟಣಂ, ರಾಜ್‌ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿ ಈ ಐದು ಪಂದ್ಯಗಳು ನಡೆಯಲಿದ್ದು ಜನವರಿ 25ರಿಂದ ಆರಂಭವಾಗಿ ಮಾರ್ಚ್ 11ರವರೆಗೆ ಈ ಸರಣಿ ನಡೆಯಲಿದೆ.