Ben Stokes: ಟೆಸ್ಟ್ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಬೆನ್ ಸ್ಟೋಕ್ಸ್; ಈ ಸಾಧನೆ ಮಾಡಿದ ವಿಶ್ವದ 3ನೇ ಆಟಗಾರ
ಜುಲೈ 11 ಗುರುವಾರ, ವೆಸ್ಟ್ ಇಂಡೀಸ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಇತಿಹಾಸ ನಿರ್ಮಿಸಿದ್ದಾರೆ. ಮೊದಲ ಟೆಸ್ಟ್ ನಲ್ಲಿ ವೆಸ್ಟ್ ಇಂಡೀಸ್ ಮೇಲೆ ಇಂಗ್ಲೆಂಡ್ ಬಿಗಿ ಹಿಡಿತ ಸಾಧಿಸಿದ್ದು, ದೊಡ್ಡ ಗೆಲುವಿನತ್ತ ಸಾಗುತ್ತಿದೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಶ್ರೇಷ್ಠ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಸ್ಟೋಕ್ಸ್ ಪಾತ್ರರಾಗಿದ್ದಾರೆ. ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ 6000 ರನ್ ಮತ್ತು 200 ವಿಕೆಟ್ ಗಳಿಸಿದ ವಿಶ್ವದ ಮೂರನೇ ಕ್ರಿಕೆಟಿಗರಾಗಿದ್ದಾರೆ.

ಈ ಸಾಧನೆ ಮಾಡಿದ ಮೂರನೇ ಆಟಗಾರ
ಮಾಜಿ ವೆಸ್ಟ್ ಇಂಡೀಸ್ ಕ್ರಿಕೆಟಿಗ ಸರ್ ಗ್ಯಾರಿ ಸೋಬರ್ಸ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ದಿಗ್ಗಜ ಆಲ್‌ರೌಂಡರ್ ಜಾಕ್ವೆಸ್ ಕಾಲಿಸ್ ಅವರ ಕ್ಲಬ್‌ಗೆ ಬೆನ್ ಸ್ಟೋಕ್ಸ್ ಕೂಡ ಸೇರ್ಪಡೆಗೊಂಡಿದ್ದಾರೆ.
ಸರ್ ಸೋಬರ್ಸ್ ಮತ್ತು ಕಾಲಿಸ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 6000 ರನ್ ಮತ್ತು 200 ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಮಾಡಿದ್ದಾರೆ. ಸರ್ ಸೋಬರ್ಸ್ 93 ಟೆಸ್ಟ್‌ಗಳಲ್ಲಿ 8032 ರನ್ ಮತ್ತು 235 ವಿಕೆಟ್‌ಗಳನ್ನು ಹೊಂದಿದ್ದಾರೆ. ಕಾಲಿಸ್ 166 ಟೆಸ್ಟ್‌ಗಳಲ್ಲಿ 13289 ರನ್ ಗಳಿಸಿದ್ದು, 292 ವಿಕೆಟ್‌ಗಳನ್ನು ಪಡೆದಿದ್ದಾರೆ.
ಬೆನ್ ಸ್ಟೋಕ್ಸ್ ಅವರ ಟೆಸ್ಟ್ ವೃತ್ತಿಜೀವನ
ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ 2013ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದರು. ಅಂದಿನಿಂದ, ಈ 33 ವರ್ಷದ ಆಟಗಾರ 103 ಟೆಸ್ಟ್‌ಗಳಲ್ಲಿ ಇಂಗ್ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ.
ಈ ಅವಧಿಯಲ್ಲಿ, ಎಡಗೈ ಬ್ಯಾಟರ್ ಆಗಿರುವ ಬೆನ್ ಸ್ಟೋಕ್ಸ್ 186 ಇನ್ನಿಂಗ್ಸ್‌ಗಳಲ್ಲಿ 35.31 ಸರಾಸರಿಯಲ್ಲಿ ಒಟ್ಟು 6320 ರನ್ ಗಳಿಸಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ 201 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 22 ರನ್‌ಗಳಿಗೆ 6 ವಿಕೆಟ್‌ಗಳು ಇನ್ನಿಂಗ್ಸ್‌ನಲ್ಲಿ ಸ್ಟೋಕ್ಸ್ ಅತ್ಯುತ್ತಮ ಪ್ರದರ್ಶನವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications