Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್‌ಗೂ ಮುನ್ನ ಬೆನ್ ಸ್ಟೋಕ್ಸ್‌ಗೆ ಅನಾರೋಗ್ಯ, ಅಭ್ಯಾಸಕ್ಕೆ ಗೈರು!

Ben stokes

ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿರುವ ಇಂಗ್ಲೆಂಡ್, ಮೂರನೇ ಪಂದ್ಯದಲ್ಲಿ ನಾಯಕ ಬೆನ್‌ ಸ್ಟೋಕ್ಸ್‌ ಇಲ್ಲದೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಬೆನ್‌ ಸ್ಟೋಕ್ಸ್ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ನಡೆದ ಅಭ್ಯಾಸಕ್ಕೆ ಗೈರಾಗಿದ್ದರು.

ಲೀಡ್ಸ್‌ನ ಹೆಡಿಂಗ್ಲಿನಲ್ಲಿ ಜೂನ್ 23ರಂದು ನಡೆಯಲಿರುವ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಮಂಗಳವಾರ ಬೆಳಿಗ್ಗೆ ಸ್ಟೋಕ್ಸ್ ಕೋವಿಡ್ -19 ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಟೋಕ್ಸ್ ಅವರನ್ನು ಗುಂಪಿನಿಂದ ದೂರ ಇಡಲಾಗಿದೆ. 31 ವರ್ಷದ ಬೆನ್ ಸ್ಟೋಕ್ಸ್‌ ಬುಧವಾರ ಬೆಳಿಗ್ಗಿನ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗಿದ್ದರು.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಇದನ್ನು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣವು ಆಯೋಜಿಸುತ್ತದೆ. ಈ ಪಂದ್ಯಕ್ಕಾಗಿ ಭಾರತ ಕ್ರಿಕೆಟ್ ತಂಡ ಲೀಸೆಸ್ಟರ್‌ಶೈರ್‌ನಲ್ಲಿ ಅಭ್ಯಾಸ ನಡೆಸುತ್ತಿದೆ. ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಮತ್ತು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಅವರ ಮೇಲ್ವಿಚಾರಣೆಯಲ್ಲಿ ಟೀಂ ಇಂಡಿಯಾ ಆಟಗಾರರು ನೆಟ್ಸ್‌ನಲ್ಲಿ ಬೆವರು ಹರಿಸುತ್ತಿದ್ದಾರೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಎಲ್ಲ ಆಟಗಾರರು ನೆಟ್ ಪ್ರಾಕ್ಟೀಸ್ ನಲ್ಲಿ ಭಾಗವಹಿಸುತ್ತಿದ್ದಾರೆ.

ಮತ್ತೊಂದೆಡೆ.. ಎದುರಾಳಿ ತಂಡ ಇಂಗ್ಲೆಂಡ್ ಕೂಡ ಅಭ್ಯಾಸದಲ್ಲಿ ನಿರತವಾಗಿದೆ. ಭಾರತಕ್ಕಿಂತ ಮೊದಲು ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಬೇಕಿದೆ. ಮೂರು ಟೆಸ್ಟ್‌ಗಳ ಸರಣಿಯ ಭಾಗವಾಗಿ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಗುರುವಾರ ಹೆಡಿಂಗ್ಲಿಯಲ್ಲಿ ಪಂದ್ಯ ಆರಂಭವಾಗಲಿದೆ. ಇಂಗ್ಲೆಂಡ್ ತಂಡ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

ಏತನ್ಮಧ್ಯೆ, ಬೆನ್ ಸ್ಟೋಕ್ಸ್ ನೆಟ್ ಅಭ್ಯಾಸದಿಂದ ದೂರ ಸರಿದಿದ್ದಾರೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಸಾಧ್ಯತೆ ಇದ್ದು, ಕೆಮ್ಮಿನಿಂದ ಬಳಲುತ್ತಿದ್ದಾರೆ. ಹೆಡಿಂಗ್ಲಿ ಟೆಸ್ಟ್ ಪಂದ್ಯ ಆರಂಭಕ್ಕೆ ಒಂದು ದಿನ ಮೊದಲು ಈ ಬೆಳವಣಿಗೆಯಿಂದ ಇಂಗ್ಲೆಂಡ್ ಪಾಳಯ ತಲ್ಲಣಗೊಂಡಿತ್ತು.

ಬ್ಯಾಟಿಂಗ್ ಕೋಚ್ ಮಾರ್ಕಸ್ ಟ್ರೆಸ್ಕೊಟೆಕ್ ಕೋವಿಡ್ ಪಾಸಿಟಿವ್ ಆಗಿರುವುದು ಈಗಾಗಲೇ ತಿಳಿದಿದೆ. ಸ್ಟೋಕ್ಸ್ ಇಂಗ್ಲೆಂಡ್‌ ತಂಡದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿಯನ್ನ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ತಳ್ಳಿಹಾಕಿದೆ. ನೆಗೆಟಿವ್ ವರದಿ ಬಂದಿದ್ದರು ಕೆಮ್ಮು ಕಡಿಮೆಯಾಗಲಿಲ್ಲ ಮತ್ತು ಅವರು ಇನ್ನೂ 24 ಗಂಟೆಗಳ ಕಾಲ ವೈದ್ಯಕೀಯ ಮೇಲ್ವಿಚಾರಣೆಯಲ್ಲಿರಲಿದ್ದಾರೆ.

Story first published: Wednesday, June 22, 2022, 15:31 [IST]
Other articles published on Jun 22, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+