ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕಿವೀಸ್ ವಿರುದ್ಧ ಸರಣಿ ಗೆದ್ದು ಭಾರತಕ್ಕೆ ಎಚ್ಚರಿಕೆ ಸಂದೇಶ ನೀಡಿದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್

Ben Stokes statement about match against India after New zealand series Whitewash

ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ವಿರುದ್ಧ ಅಮೋಘ ಫಾರ್ಮ್‌ ಪ್ರದರ್ಶಿಸಿದ್ದು ಸರಣಿಯ ಮೂರು ಪಂದ್ಯಗಳನ್ನು ಕೂಡ ಗೆದ್ದು ಸರಣಿ ವಶಕ್ಕೆ ಪಡೆದುಕೊಂಡಿದೆ. ಟೆಸ್ಟ್ ವಿಶ್ವಚಾಂಪಿಯನ್ ತಂಡವನ್ನು ವೈಟ್‌ವಾಶ್ ಮೂಲಕ ಮಣಿಸಿದ ಉತ್ಸಾಹದಲ್ಲಿರುವ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಭಾರತ ತಂಡಕ್ಕೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡ ಆಕ್ರಮಣಕಾರಿ ಮನೋಭಾವ ಪ್ರದರ್ಶಿಸಿ ಎದುರಾಳಿ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಈ ಆಕ್ರಮಣಕಾರಿ ಆಟವನ್ನು ತಾವು ಭಾರತದ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿಯೂ ಮುಂದುವರಿಸುವುದಾಗಿ ಹೇಳಿದ್ದಾರೆ ಬೆನ್ ಸ್ಟೋಕ್ಸ್.

ಐರ್ಲೆಂಡ್ vs ಭಾರತ: ನಾಯಕತ್ವದ ಮೊದಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಹಾರ್ದಿಕ್ ಪಾಂಡ್ಯಐರ್ಲೆಂಡ್ vs ಭಾರತ: ನಾಯಕತ್ವದ ಮೊದಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ

ಭಾರತ ವಿರುದ್ಧದ ಪಂದ್ಯಕ್ಕೆ ಸ್ಟೋಕ್ಸ್ ಸಂದೇಶ

ಭಾರತ ವಿರುದ್ಧದ ಪಂದ್ಯಕ್ಕೆ ಸ್ಟೋಕ್ಸ್ ಸಂದೇಶ

ಜುಲೈ 1ರಿಂದ ಇಂಗ್ಲೆಂಡ್ ವಿರುದ್ಧ ಕಳೆದ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಆರಂಭವಾಗಲಿದೆ. ಈ ಸರಣಿಗೆ ಈಗ ಇಂಗ್ಲೆಂಡ್ ತಂಡದ ಹೊಂದಿರುವ ವೇಗವನ್ನು ನಿಧಾನಗೊಳಿಸುವ ಯೋಜನೆಯಿಲ್ಲ ಎಂದಿದ್ದಾರೆ ಬೆನ್ ಸ್ಟೋಕ್ಸ್. "ನಾವು ಇಲ್ಲಿಂದ ಇದೇ ಮನಸ್ಥಿತಿಯೊಂದಿಗೆ ಮುಂದಿನ ಸರಣಿಗೂ ಸಿದ್ಧವಾಗಬೇಕಿದೆ ಎಂದು ನಾನು ಈಗಾಗಲೇ ತಂಡಕ್ಕೆ ತಿಳಿಸಿದ್ದೇನೆ. ಯಾವುದೇ ಎದುರಾಳಿಯಾಗಿದ್ದರೂ ನಮ್ಮ ಮನಸ್ಥಿತಿ ಬದಲಾಗಬಾರದು" ಎಂದಿದ್ದಾರೆ ಬೆನ್ ಸ್ಟೋಕ್ಸ್.

ಫಲಿತಾಂಶ ಖುಷಿ ನೀಡಿದೆ

ಫಲಿತಾಂಶ ಖುಷಿ ನೀಡಿದೆ

ನಾನು ಜವಾಬ್ಧಾರಿಯನ್ನು ವಹಿಸಿಕೊಂಡಾಗ ಅದರಿಂದ ಬರುವ ಫಲಿತಾಂಶಕ್ಕಿಂತಲೂ ಹೆಚ್ಚಾಗಿ ಟೆಸ್ಟ್ ಕ್ರಿಕೆಟ್‌ನ ಬಗ್ಗೆ ಮನಸ್ಥಿತಿಯನ್ನು ಬದಲಾಯಿಸುವುದು ಗುರಿಯಾಗಿತ್ತು. ಆನಂದಿಸುತ್ತಾ ಅನುಭವಿಸುತ್ತಾ ದೇಶವನ್ನು ಪ್ರತಿನಿಧಿಸುವುದು ಮುಖ್ಯ ಎಂದು ಭಾವಿಸಿದ್ದೇನೆ. ಹಾಗಾದಲ್ಲಿ ಫಲಿತಾಂಶ ಅದಾಗಿಯೇ ಬರುತ್ತದೆ. ಇದನ್ನು ನಾವು ಇಷ್ಟು ಶೀಘ್ರವಾಗಿ ಮಾಡಲು ಸಾಧ್ಯವಾಗಿದ್ದು ನಂಬಲು ಸಾಧ್ಯವಾಗುತ್ತಿಲ್ಲ" ಎಂದಿದ್ದಾರೆ ಬೆನ್ ಸ್ಟೋಕ್ಸ್.

ಸಹ ಆಟಗಾರನನ್ನು‌ ನಿಂದಿಸಿದ ಅಭಿಮಾನಿಗಳಿಗೆ ವಾರ್ನಿಂಗ್ ಕೊಟ್ಟು ಬೆವರಳಿಸಿದ ವಿರಾಟ್ ಕೊಹ್ಲಿ | Oneindia Kannada
ವೈಟ್‌ವಾಶ್ ಮೂಲಕ ಸರಣಿ ಇಂಗ್ಲೆಂಡ್ ವಶಕ್ಕೆ

ವೈಟ್‌ವಾಶ್ ಮೂಲಕ ಸರಣಿ ಇಂಗ್ಲೆಂಡ್ ವಶಕ್ಕೆ

ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿಯೂ ಇಂಗ್ಲೆಂಡ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡ ಸರಣಿಯ ಮೂರು ಪಂದ್ಯದಲ್ಲಿಯೂ ಗೆಲುವು ಸಾಧಿಸಿದ್ದು ವೈಟ್‌ವಾಶ್ ಮೂಲಕ ವಶಕ್ಕೆ ಪಡೆದಿದೆ.

Story first published: Tuesday, June 28, 2022, 10:32 [IST]
Other articles published on Jun 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X