Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Eng Vs Nz Test: ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿ ಬ್ರೆಂಡನ್ ಮೆಕಲಮ್ ದಾಖಲೆ ಮುರಿದ ಬೆನ್‌ ಸ್ಟೋಕ್ಸ್

Ben Stokes Surpasses His Head Coach Brendon Mccullum For Most Sixes In Test Cricket History

ಇಂಗ್ಲೆಂಡ್ ತಂಡದ ಟೆಸ್ಟ್ ತಂಡದ ನಾಯಕ ಬೆನ್‌ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವಾದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ್ದ ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಬ್ರೆಂಡನ್ ಮೆಕಲಮ್ ದಾಖಲೆಯನ್ನು ಮುರಿದು ಹೊಸ ದಾಖಲೆ ಸ್ಥಾಪಿಸಿದ್ದಾರೆ.

ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಎರಡು ಸಿಕ್ಸರ್ ಸಿಡಿಸುವ ಮೂಲಕ ಬೆನ್‌ ಸ್ಟೋಕ್ಸ್ ಈ ದಾಖಲೆ ನಿರ್ಮಿಸಿದ್ದಾರೆ. ಬ್ರೆಂಡನ್ ಮೆಕಲಂ ಟೆಸ್ಟ್ ಕ್ರಿಕೆಟ್‌ನಲ್ಲಿ 107 ಸಿಕ್ಸರ್ ಸಿಡಿಸುವ ಮೂಲಕ ಅಗ್ರಸ್ಥಾನದಲ್ಲಿದ್ದರು. ಆದರೆ, ಬೆನ್‌ ಸ್ಟೋಕ್ಸ್ 90 ಟೆಸ್ಟ್ ಪಂದ್ಯಗಳಲ್ಲಿ 109 ಸಿಕ್ಸರ್ ಸಿಡಿಸುವ ಮೂಲಕ ಮೆಕಲಂ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದರು.

ಬ್ರೆಂಡನ್ ಮೆಕಲಂ ಸದ್ಯ ಇಂಗ್ಲೆಂಡ್ ತಂಡದ ಕೋಚ್‌ ಆಗಿದ್ದು, ಅವರ ಕೋಚಿಂಗ್‌ ಅವಧಿಯಲ್ಲೇ ಸ್ಟೋಕ್ಸ್ ದಾಖಲೆ ಮುರಿದು ಹೊಸ ದಾಖಲೆ ಬರೆದಿರುವುದು ವಿಶೇಷ. ಮೌಂಟ್ ಮೌಂಗನುಯಿಯ ಬೇ ಓವಲ್‌ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನ ಸ್ಟೋಕ್ಸ್ ದಾಖಲೆ ಬರೆದರು.

ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಆಡಮ್ ಗಿಲ್‌ಕ್ರಿಸ್ಟ್ 96 ಟೆಸ್ಟ್ ಪಂದ್ಯಗಳಲ್ಲಿ 100 ಸಿಕ್ಸರ್ ಸಿಡಿಸುವ ಮೂಲಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ ಗೇಲ್ 98 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದು, ದಕ್ಷಿಣ ಆಫ್ರಿಕಾದ ಮಾಜಿ ಆಲ್‌ರೌಂಡರ್ ಜಾಕ್ವೆಸ್ ಕಾಲಿಸ್ 97 ಸಿಕ್ಸರ್ ಮೂಲಕ 5ನೇ ಸ್ಥಾನದಲ್ಲಿದ್ದಾರೆ. ಒಟ್ಟಾರೆ ಸಿಕ್ಸರ್ ಸಿಡಿಸಿರುವವರ ಪಟ್ಟಿಯಲ್ಲಿ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ. ಎಲ್ಲಾ ಮಾದರಿಯ 483 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅವರು ಒಟ್ಟು 553 ಸಿಕ್ಸರ್ ಸಿಡಿಸಿದ್ದಾರೆ.

Ben Stokes Surpasses His Head Coach Brendon Mccullum For Most Sixes In Test Cricket History

ಮತ್ತೊಂದು ಟೆಸ್ಟ್ ಗೆಲುವಿನತ್ತ ಇಂಗ್ಲೆಂಡ್

ಸದ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಹೊಸ ದಾಖಲೆ ಬರೆಯುತ್ತಿರುವ ಇಂಗ್ಲೆಂಡ್ ಮತ್ತೊಂದು ಪಂದ್ಯವನ್ನು ಗೆಲ್ಲುವ ಸನಿಹದಲ್ಲಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ 374 ರನ್‌ಗಳಿಗೆ ಆಲೌಟ್ ಆಗುವ ಮೂಲಕ 393 ರನ್‌ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.

ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ 19 ರನ್‌ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸೋಲಿನ ಭೀತಿಯಲ್ಲಿದೆ. ಸ್ಟುವರ್ಟ್ ಬ್ರಾಡ್ ಮೂರೂ ವಿಕೆಟ್‌ಗಳನ್ನು ಪಡೆದು ಕಿವೀಸ್ ಪಡೆಗೆ ಆಘಾತ ನೀಡಿದರು.

Story first published: Saturday, February 18, 2023, 12:54 [IST]
Other articles published on Feb 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+