ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND Vs NZ ODI: ನನ್ನ ಸಾಮರ್ಥ್ಯ ಸಾಬೀತುಪಡಿಸಲು ಇದು ಉತ್ತಮ ಅವಕಾಶ ಎಂದ ಯುವ ಕ್ರಿಕೆಟಿಗ

Best Opportunity For Me To Score Runs And Probe Myself - Ishan Kishan

ಭಾರತ ತಂಡದ ಯುವ ವಿಕೆಟ್ ಕೀಪರ್ ತಮ್ಮ ಹೊಸ ಜವಾಬ್ದಾರಿ ಬಗ್ಗೆ ಮಾತನಾಡಿದ್ದಾರೆ. ಆರಂಭಿಕ ಆಟಗಾರ ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದಿರುವ ಇಶಾನ್ ಕಿಶನ್ ತಂಡದಲ್ಲಿ ತಮ್ಮ ಸ್ಥಾನ ಕಾಪಾಡಿಕೊಳ್ಳಬೇಕೆಂದರೆ ಉತ್ತಮ ಪ್ರದರ್ಶನ ನೀಡಬೇಕಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲನೇ ಪಂದ್ಯದಲ್ಲಿ ಅವರು ಕೇವಲ 5 ರನ್ ಗಳಿಸಿ ಔಟಾಗಿದ್ದರೆ.

ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ವಿಫಲರಾದರೂ ಕೂಡ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ರನ್ ಗಳಿಸುವ ವಿಶ್ವಾಸದಲ್ಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಆಡುವುದಕ್ಕೆ ಹೊಂದಿಕೊಳ್ಳುವುದರ ಜೊತೆ ರನ್ ಗಳಿಸುವುದು ಸವಾಲಿನ ಕೆಲಸ ಎಂದು ಅವರು ಹೇಳಿದ್ದಾರೆ.

Best Opportunity For Me To Score Runs And Probe Myself - Ishan Kishan

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದನ್ನು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ದೊರಕಿರುವ ಉತ್ತಮ ಅವಕಾಶ ಎಂದು ಇಶಾನ್ ಕಿಶನ್ ಅಭಿಪ್ರಾಯಪಟ್ಟಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಆಡುವ ಮೂಲಕ ಸಾಧ್ಯವಾಗುವಷ್ಟು ಪಂದ್ಯಗಳಲ್ಲಿ ಭಾರತ ತಂಡದ ಗೆಲುವಿಗೆ ಶ್ರಮಿಸುವುದಾಗಿ ಇಶಾನ್ ಕಿಶನ್ ಹೇಳಿದ್ದಾರೆ.

ಮೊದಲ ಪಂದ್ಯದಲ್ಲಿ ವಿಫಲ

ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲಾಗಿ ಕಣಕ್ಕಿಳಿದ ಇಶಾನ್ ಕಿಶನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು.

ಎಡಗೈ ಬ್ಯಾಟರ್ 14 ಎಸೆತಗಳನ್ನು ಎದುರಿಸಿದರು ಕೇವಲ 5 ರನ್ ಗಳಿಸಿದರು. ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡದೇ ಇದ್ದರೂ, ಇಶಾನ್ ಕಿಶನ್ ಕೀಪಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

ಆರಂಭಿಕರಾದ ನಿಮಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಕಷ್ಟವಲ್ಲವಾ ಎಂದು ಕೇಳಿದ ಪ್ರಶ್ನೆಗೆ ಇಶಾನ್ ಕಿಶನ್ ಉತ್ತರ ನೀಡಿದ್ದಾರೆ. "ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ತಂಡಕ್ಕೆ ಗೆಲುವಿನ ತನ್ ಗಳಿಸಲು ಮತ್ತು ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ನನಗೆ ಸಿಕ್ಕಿರುವ ಉತ್ತಮ ಅವಕಾಶ ಎಂದು ಭಾವಿಸುತ್ತೇನೆ. ನಾನು ಇದನ್ನು ಪ್ರೀತಿಸುತ್ತೇನೆ" ಎಂದು ಹೇಳಿದರು.

Best Opportunity For Me To Score Runs And Probe Myself - Ishan Kishan

ಬಾಂಗ್ಲಾದೇಶದ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ಬದಲಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್ ದ್ವಿಶತಕ ಸಿಡಿಸುವ ಮೂಲಕ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆರಂಭಿಕ ಆಟಗಾರನಾಗಿ ಶುಭಮನ್ ಗಿಲ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಅನಿವಾರ್ಯವಾಗಿ ಇಶಾನ್ ಕಿಶನ್ ಮಧ್ಯಮ ಕ್ರಮಾಂಕದಲ್ಲಿ ಆಡಬೇಕಾಗಿದೆ.

ಮೊದಲ ಪಂದ್ಯದಲ್ಲಿ ಗೆದ್ದ ಭಾರತ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯವನ್ನು 12 ರನ್‌ಗಳ ಅಂತರದಲ್ಲಿ ರೋಚಕ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Story first published: Saturday, January 21, 2023, 15:53 [IST]
Other articles published on Jan 21, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X