ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

BGT 2023: ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಟಾರ್ ಆಲ್‌ರೌಂಡರ್ ಆಡೋದು ಅನುಮಾನ

BGT 2023: Australia Star Allrounder Cameron Green Set Miss The1st Test Against India

ಭಾರತ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಗೆ ದಿನಗಣನೆ ಆರಂಭವಾಗಿದೆ. ಆಸ್ಟ್ರೇಲಿಯಾ ತಂಡ ಫೆಬ್ರವರಿ 1 ರಂದು ಭಾರತಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಕಿರು ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲಿದೆ.

ಮೊದಲ ಟೆಸ್ಟ್ ಪಂದ್ಯಕ್ಕೆ ಮುನ್ನವೇ ಆಸ್ಟ್ರೇಲಿಯಾಗೆ ಕಹಿ ಸುದ್ದಿ ಎದುರಾಗಿದೆ. ನಾಗ್ಪುರದಲ್ಲಿ ನಡೆಯುವ ಮೊದಲನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಅಲಭ್ಯರಾಗಿದ್ದಾರೆ.

ಫಿಟ್ನೆಸ್ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ತೇರ್ಗಡೆ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಬುಮ್ರಾ ವಾಪಸ್?ಫಿಟ್ನೆಸ್ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ತೇರ್ಗಡೆ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಬುಮ್ರಾ ವಾಪಸ್?

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಬೆರಳಿನ ಗಾಯಕ್ಕೆ ತುತ್ತಾಗಿದ್ದ ಕ್ಯಾಮರೂನ್ ಗ್ರೀನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲದ ಕಾರಣ ಅವರು ಮೊದಲನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.

ಕಾಮರೂನ್ ಗ್ರೀನ್ ಸದ್ಯ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದರು, ಅವರು ಬೌಲಿಂಗ್ ಅಭ್ಯಾಸ ಮಾಡುತ್ತಿಲ್ಲ. ಸಂಪೂರ್ಣವಾಗಿ ಫಿಟ್ ಆಗುವವರೆಗೂ ಬೌಲಿಂಗ್ ಅಭ್ಯಾಸ ಮಾಡದಂತೆ ಕ್ರಿಕೆಟ್ ಆಸ್ಟ್ರೇಲಿಯಾ ಸೂಚನೆ ನೀಡಿದೆ.

ಆಸ್ಟ್ರೇಲಿಯಾದ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಕ್ಯಾಮರೂನ್ ಗ್ರೀನ್ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮುನ್ನ, ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಸೋಮವಾರ ಗ್ರೀನ್ ವೈದ್ಯಕೀಯ ವರದಿ ಬರಲಿದ್ದು, ನಂತರ ಅವರು ಮೊದಲ ಟೆಸ್ಟ್ ಆಡುವ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

BGT 2023: Australia Star Allrounder Cameron Green Set Miss The1st Test Against India

ಆಂಡ್ರ್ಯೂ ಮೆಕ್‌ಡೊನಾಲ್ಡ್ ಹೇಳಿದ್ದಿಷ್ಟು

"ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡುವುದು ದೊಡ್ಡ ಸವಾಲಾಗಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಸಮಯ ಕಡಿಮೆ ಇರುವುದರಿಂದ ಅವರ ಲಭ್ಯತೆ ಬಗ್ಗೆ ಹೇಳುವುದು ಕಷ್ಟವಾಗಲಿದೆ." ಎಂದು ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕ್ಯಾಮರೂನ್ ಗ್ರೀನ್ ಸದ್ಯ ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ತರಬೇತಿ ಶಿಬಿರದಲ್ಲಿದ್ದಾರೆ. ಬೆರಳಿನ ಮೂಳೆ ಪೂರ್ತಿಯಾಗಿ ವಾಸಿಯಾಗಿದೆ ಎನ್ನುವ ಭರವಸೆಯೊಂದಿಗೆ ಶಸ್ತ್ರಚಿಕಿತ್ಸಕರನ್ನು ಭೇಟಿಯಾಗಲಿದ್ದಾರೆ, ಗಾಯ ಸಂಪೂರ್ಣವಾಗಿ ವಾಸಿಯಾಗಿಲ್ಲದಿದ್ದರೆ ಭಾರತದ ವಿರುದ್ಧದ ಸರಣಿಯಲ್ಲಿ ಅವರ ಭವಿಷ್ಯ ಅತಂತ್ರವಾಗಲಿದೆ.

BGT 2023: Australia Star Allrounder Cameron Green Set Miss The1st Test Against India

ಅಪಾಯವಿದ್ದರೆ ಬೌಲಿಂಗ್ ಮಾಡಿಸದಿರಲು ನಿರ್ಧಾರ

ಒಂದು ವೇಳೆ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡಲು ಸಾಧ್ಯವಾಗದಿದ್ದರೆ, ಅವರನ್ನು ಸ್ಪೆಷಲಿಸ್ಟ್ ಬ್ಯಾಟರ್ ಆಗಿ ಪರಿಗಣಿಸಲು ಆಸ್ಟ್ರೇಲಿಯಾ ಕ್ರಿಕೆಟ್ ನಿರ್ಧರಿಸಿದೆ. ಆಸ್ಟ್ರೇಲಿಯಾದ ಬ್ಯಾಟಿಂಗ್ ಲೈನ್‌ಅಪ್‌ಗೆ ಗ್ರೀನ್ ಸಮತೋಲನ ತರುವ ಸಾಮರ್ಥ್ಯ ಹೊಂದಿದ್ದಾರೆ. ಕೋಚ್ ಮೆಕ್‌ಡೊನಾಲ್ಡ್ ಕೂಡ ಗ್ರೀನ್‌ರನ್ನು ಬೌಲರ್ ಎನ್ನುವುದಕ್ಕಿಂತ ಬ್ಯಾಟರ್ ಎಂದೇ ಪರಿಗಣಿಸುತ್ತಾರೆ.

"ನಾವು ಗ್ರೀನ್‌ರ ಬ್ಯಾಟಿಂಗ್ ಅನ್ನು ಮೊದಲು ಗೌರವಿಸುತ್ತೇವೆ, ಅಗ್ರ 6ನೇ ಕ್ರಮಾಂಕದಲ್ಲಿ ಅವರು ನಮ್ಮ ಪ್ರಮುಖ ಬ್ಯಾಟರ್ ಆಗಿದ್ದಾರೆ. ಅವರು ಬೌಲಿಂಗ್ ಮಾಡುವುದು ನಮಗೆ ಬೋನಸ್ ಆಗಿದೆ" ಎಂದು ಮೆಕ್‌ಡೋನಾಲ್ಡ್ ಹೇಳಿದ್ದಾರೆ.

Story first published: Sunday, January 29, 2023, 14:37 [IST]
Other articles published on Jan 29, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X