Border-Gavaskar Trophy: ಮೊದಲ ಇನ್ನಿಂಗ್ಸ್ ಮುನ್ನಡೆ ನಿರ್ಣಾಯಕ ಎಂದ ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಈ ಬಾರಿ ಗೆಲುವು ಸಾಧಿಸಲೇಬೇಕೆಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪಣತೊಟ್ಟಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾದ ಸ್ಟಾರ್ ಕ್ರಿಕೆಟಿಗ ಸ್ಟೀವ್ ಸ್ಮಿತ್ ಭಾರತ ವಿರುದ್ದದ ಬಾರ್ಡರ್-ಗವಾಸ್ಕರ್ ಸರಣಿ 'ಆಶಸ್ ಸರಣಿಗಿಂತಲೂ ಕಠಿಣ' ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಕಾರಣ ಕಳೆದ 54 ವರ್ಷಗಳಲ್ಲಿ ಆಸ್ಟ್ರೇಲಿಯಾ ಭಾರತದಲ್ಲಿ ಕೇವಲ ಒಂದು ಟೆಸ್ಟ್ ಸರಣಿಯನ್ನು ಮಾತ್ರವೇ ಗೆದ್ದಿದೆ. 2004ರಲ್ಲಿ ಗಿಲ್‌ಕ್ರಿಸ್ಟ್ ನೇತೃತ್ವದಲ್ಲಿ ಟೆಸ್ಟ್ ಸರಣಿ ಗೆದ್ದ ಬಳಿಕ ಮತ್ತೆ 19 ವರ್ಷಗಳಿಂದ ಆ ಸಾಧನೆ ಮಾಡಲು ಆಸ್ಟ್ರೇಲಿಯಾ ತಂಡಕ್ಕೆ ಸಾಧ್ಯವಾಗಿಲ್ಲ.
ಇದೀಗ ಪ್ಯಾಟ್ ಕಮ್ಮಿನ್ಸ್ ನೇತೃತ್ವದಲ್ಲಿ ಆಸ್ಟ್ರೇಲಿಯಾ ತಂಡ ಮತ್ತೆ ಭಾರತಕ್ಕೆ ಆಗಮಿಸಿದ್ದು ಆತ್ಮವಿಶ್ವಾಸದಲ್ಲಿದೆ. ಈ ಸರಣಿಗೂ ಮುನ್ನ ಮಾತನಾಡಿರುವ ಪ್ಯಾಟ್ ಕಮ್ಮಿನ್ಸ್ ಆಸ್ಟ್ರೇಲಿಯಾ ತಂಡ ಹಿಂದಿನ ಸೋಲು ಗೆಲುವಿನ ಯಾವುದೇ ಹೊರೆಗಳನ್ನು ಬಿಟ್ಟು ಕಣಕ್ಕಿಳಿಯುವುದಾಗಿ ಹೇಳಿದ್ದಾರೆ.
"ಈ ತಂಡ ಬಹಳ ಭಿನ್ನವಾಗಿದೆ. ಇಲ್ಲಿ ಬಹಳಷ್ಟು ತಂಡಗಳು ಈ ಹಿಂದೆ ಆಡಿದೆ. ಹಾಗಾಗಿ ಇಲ್ಲಿ ನಾವು ಈ ಹಿಂದಿನ ಸೋಲು ಗೆಲುವಿನ ಹೊರೆಯನ್ನು ಹೊರಲು ಇಷ್ಟ ಪಡುವುದಿಲ್ಲ. ಇಲ್ಲೊ [್ರವಾಸ ಕೈಗೊಳ್ಳುವುದು ಬಹಳ ಕಠಿಣ ಎಂಬುದು ತಿಳಿದಿದೆ. ಭಾರತ ನಿಜಕ್ಕೂ ಅತ್ಯುತ್ತಮ ತಂಡವಾಗಿದ್ದು ತವರಿನಲ್ಲಿ ಯಾವಾಗಲೂ ಬಲಿಷ್ಠವಾಗಿ ಆಡುತ್ತದೆ. ಖಂಡಿತವಾಗಿಯೂ ಇಲ್ಲಿ ಆಡಲು ಉತ್ಸುಕವಾಗಿದ್ದೇವೆ. ನಮ್ಮ ಅತ್ಯುತ್ತಮ ಪ್ರದರ್ಶನವನ್ನು ಇಲ್ಲಿ ನೀಡಲಿದ್ದೇವೆ" ಎಂದಿದ್ದಾರೆ ಪ್ಯಾಟ್ ಕಮ್ಮಿನ್ಸ್.
ಇನ್ನು ಭಾರತದಲ್ಲಿ ಮೊದಲ ಇನ್ನಿಂಗ್ಸ್‌ನ ಸ್ಕೋರ್ ಬಹಳ ಪ್ರಮುಖವಾಗಿರುತ್ತದೆ ಎಂದು ಪ್ಯಾಟ್ ಕಮ್ಮಿನ್ಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನ ಆಧಾರದಲ್ಲಿಯೇ ಉಳಿದ ಅವಧಿಯಲ್ಲಿಯೂ ಪಂದ್ಯಗಳು ಮುಂದುವರಿಯುತ್ತದೆ ಎಂದಿರುವ ಕಮ್ಮಿನ್ಸ್ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಪಡೆದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದಿದ್ದಾರೆ.
ಇತ್ತಂಡಗಳ ಸ್ಕ್ವಾಡ್
ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್
ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications