ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮತ್ತೊಮ್ಮೆ ನಮಗೆ ಆತನೇ ಬಲು ದೊಡ್ಡ ಕಂಟಕ: ಭಾರತೀಯ ಆಟಗಾರನ ಬಗ್ಗೆ ಆಸಿಸ್ ಕ್ರಿಕೆಟಿಗನ ಆತಂಕ!

BGT 2023: Marcus Stoinis predicted Indian star cricketer could be the biggest threat for them once again

ಆಸ್ಟ್ರೇಲಿಯಾ ಹಾಗೂ ಭಾರತದ ನಡುವಿನ ಬಹು ನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮುಕ್ತಾಯದ ಬಳಿಕ ಭಾರತ ತವರಿನಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿರುವುದು ಕ್ರಿಕೆಟ್ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಈ ಸರಣಿಯ ಬಗ್ಗೆ ಅಭಿಮಾನಿಗಳಿಗೆ ಮಾತ್ರವಲ್ಲದೆ ಎರಡು ತಂಡಗಳ ಆಟಗಾರರು ಕೂಡ ಸಾಕಷ್ಟು ನಿರೀಕ್ಷೆ ಹೊಂದಿದ್ದು ಆಸಿಸ್ ಕ್ರಿಕೆಟಿಗರಂತೂ ಕಳೆದ ಒಂದೆರಡು ತಿಂಗಳಿನಿಂದ ಈ ಸರಣಿಯ ಬಗ್ಗೆ ಅನೇಕ ಕುತೂಹಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದೀಗ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಈ ಸರಣಿಯ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಈ ವರ್ಷ ನಡೆಯಲಿರುವ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಮ್ಮೆ ಕಂಟಕವಾಗಲಿರುವ ಆಟಗಾರನ ಬಗ್ಗೆ ನೀಡಿರುವ ಹೇಳಿಕೆ ಕುತೂಹಲಕಾರಿಯಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್‌ಗೆ ಅವಕಾಶ ಇಲ್ಲ: ಬಿಸಿಸಿಐ ನೀಡಿದ ಭರವಸೆ ಏನು?ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್‌ಗೆ ಅವಕಾಶ ಇಲ್ಲ: ಬಿಸಿಸಿಐ ನೀಡಿದ ಭರವಸೆ ಏನು?

ಈ ಬಾರಿ ಟ್ರೋಫಿ ಕಳೆದುಕೊಳ್ಳಲ್ಲ

ಈ ಬಾರಿ ಟ್ರೋಫಿ ಕಳೆದುಕೊಳ್ಳಲ್ಲ

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಸತತವಾಗಿ ಹಿನ್ನಡೆ ಅನುಭವಿಸುತ್ತಾ ಬಂದಿದೆ. ಅದರಲ್ಲೂ ಕಳೆದ ಎರಡು ಬಾರಿ ತನ್ನ ತವರಿನಲ್ಲಿಯೇ ಆಸ್ಟ್ರೇಲಿಯಾ ಈ ಪ್ರತಿಷ್ಠಿತ ಟ್ರೋಫಿಯನ್ನು ಕಳೆದುಕೊಂಡು ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಹೀಗಾಗಿ ಈ ಬಾರಿ ಈ ಟ್ರೋಫಿಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಎಂದಿದ್ದಾರೆ ಮಾರ್ಕಸ್ ಸ್ಟೋಯ್ನಿಸ್. ಈ ಮೂಲಕ ಪ್ರವಾಸಕ್ಕೂ ಮುನ್ನವೇ ತಮ್ಮ ಗುರಿಯನ್ನು ಸ್ಟೋಯ್ನಿಸ್ ಸ್ಪಷ್ಟ ಪಡಿಸಿದ್ದಾರೆ. ಆಸ್ಟ್ರೇಲಿಯಾ ಭಾರತದಲ್ಲಿ ಕೊನೆಯ ಬಾರಿಗೆ ಟೆಸ್ಟ್ ಸರಣಿಯನ್ನು ಗೆದ್ದಿರುವುದು 2004ರಲ್ಲಿ ಎಂಬುದು ಗಮನಾರ್ಹ ಅಂಶ.

ಭಾರತದಲ್ಲಿ ಗೆಲುವು ಕಠಿಣ ಎಂದ ಸ್ಟೋಯ್ನಿಸ್

ಭಾರತದಲ್ಲಿ ಗೆಲುವು ಕಠಿಣ ಎಂದ ಸ್ಟೋಯ್ನಿಸ್

ಮುಂದುವರಿದು ಮಾತನಾಡಿರುವ ಮಾರ್ಕಸ್ ಸ್ಟೋಯ್ನಿಸ್ ಭಾರತದಲ್ಲಿ ಟೆಸ್ಟ್ ಗೆಲ್ಲುವುದು ಬಹಳ ಕಠಿಣ ಎಂದಿದ್ದಾರೆ. "ಭಾರತವನ್ನು ಅದರದ್ದೇ ನೆಲದಲ್ಲಿ ಸೋಲಿಸುವುದು ಬಹಳ ಕಠಿಣ. ಆದರೆ ನಮ್ಮ ತಂಡ ಕೂಡ ಸಾಕಷ್ಟು ಬಲಿ‍ಷ್ಠವಾಗಿದೆ, ಭಾರತದಲ್ಲಿ ಹೆಚ್ಚಾಗಿ ಸ್ಪಿನ್ ಸ್ನೇಹಿ ಪಿಚ್‌ನಲ್ಲಿಯೇ ಆಡಬೇಕಾಗುತ್ತದೆ" ಎಂದಿದ್ದಾರೆ. ಆದರೆ ಭಾರತದ ಸ್ಪಿನ್ ಸ್ಪೆಶಲಿಸ್ಟ್‌ಗಳಾದ ಆರ್ ಅಶ್ವಿನ್ ರವೀಂದ್ರ ಜಡೇಜಾ ಅವರನ್ನು ಎದುರಿಸಲು ಬೇಕಾದ ತಯಾರಿಯನ್ನು ನಡೆಸಿರುವುದಾಗಿಯೂ ಸ್ಟೋಯ್ನಿಸ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಮತ್ತೊಮ್ಮೆ ಆಸ್ಟ್ರೇಲಿಯಾಗೆ ಕಂಟಕವಾಗಲಿದ್ದಾರೆ

ವಿರಾಟ್ ಕೊಹ್ಲಿ ಮತ್ತೊಮ್ಮೆ ಆಸ್ಟ್ರೇಲಿಯಾಗೆ ಕಂಟಕವಾಗಲಿದ್ದಾರೆ

ಈ ಸಂದರ್ಭದಲ್ಲಿ ಮಾರ್ಕಸ್ ಸ್ಟೋಯ್ನಿಸ್ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಮ್ಮೆ ಕಂಟಕವಾಗಬಲ್ಲ ಭಾರತದ ಸ್ಟಾರ್ ಆಟಗಾರನನ್ನು ಹೆಸರಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ಆಟಗಾರ ವಿರಾಟ್ ಕೊಹ್ಲಿ ಈ ಬಾರಿ ಮತ್ತೊಮ್ಮೆ ಆಸ್ಟ್ರೇಲಿಯಾ ತಂಡದ ಪಾಲಿಗೆ ದುಸ್ವಪ್ನವಾಗಿ ಕಾಡಬಹುದು ಎಂದಿದ್ದಾರೆ. "ವಿರಾಟ್ ಕೊಹ್ಲಿ ವಿಶ್ವದರ್ಜೆಯ ಆಟಗಾರ, ಅವರು ಫಾರ್ಮ್‌ಗೆ ಮರಳಿದ್ದು ಟೆಸ್ಟ್ ಕ್ರಿಕೆಟ್‌ನ ಅತ್ಯುತ್ತಮ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಅವರು ಮತ್ತೊಮ್ಮೆ ಬಹುದೊಡ್ಡ ಕಂಟಕವಾಗಿ ಕಾಡಲಿದ್ದಾರೆ. ಆದರೆ ಈ ಆವೃತ್ತಿಯಲ್ಲಿ ರಿಷಭ್ ಪಂತ್ ಅವರನ್ನು ಬಹಳಷ್ಟು ಮಿಸ್ ಮಾಡಿಕೊಳ್ಳಲಿದ್ದೇವೆ. ಆತ ದುರದೃಷ್ಟವಶಾತ್ ತಂಡದಲ್ಲಿಲ್ಲ. ಆತ ಆದಷ್ಟು ಶೀಘ್ರವಾಗಿ ಚೇತರಿಸಿಕೊಂಡು ಮೈದಾನಕ್ಕೆ ಇಳಿಯಲಿ ಎಂದು ಹಾರೈಸುತ್ತೇವೆ" ಎಂದಿದ್ದಾರೆ ಮಾರ್ಕಸ್ ಸ್ಟೋಯ್ನಿಸ್.

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Saturday, January 28, 2023, 15:39 [IST]
Other articles published on Jan 28, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X