India vs Australia 1st Test: ರೋಹಿತ್ ಶರ್ಮಾ ಬ್ಯಾಟಿಂಗ್‌ಗೆ ತಲೆದೂಗಿದ ಆಸಿಸ್ ದಿಗ್ಗಜ!

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ದಿನ ಟೀಮ್ ಇಂಡಿಯಾ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡು ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ನಾಗ್ಪುರ ಟೆಸ್ಟ್ ಪಂದ್ಯದಲ್ಲಿ ಭಾರತ ಆರಂಭದಲ್ಲಿ ಬಿಗಿಹಿಡಿತ ಸಾಧಿಸಿದೆ. ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಭರ್ಜರಿ ಪ್ರದರ್ಶನ ನೀಡಿದರೆ ಬ್ಯಾಟಿಂಗ್‌ನಲ್ಲಿ ರೋಹಿತ್ ಶರ್ಮಾ ಆಟ ಭಾರತವನ್ನು ಉತ್ತಮ ಸ್ಥಾನದಲ್ಲಿರಿಸಿದೆ.
ಆಸ್ಟ್ರೇಲಿಯಾ ತಂಡವನ್ನು 177 ರನ್‌ಗಳಿಗೆ ಆಲೌಟ್ ಮಾಡಿದ ಬಳಿಕ ಟೀಮ್ ಇಂಡಿಯಾ ಬ್ಯಾಟಿಂಗ್ ನಡೆಸಿದ್ದು ಉತ್ತಮ ಆರಂಭ ಪಡೆದಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆರಂಭದಿಂದಲೇ ಅದ್ಭುತವಾಗಿ ಬ್ಯಾಟಿಂಗ್ ನಡೆಸಿದ್ದು ಎರಡನೇ ದಿನದಾಟದಲ್ಲಿ ಆಸಿಸ್ ಪಡೆಗೆ ಮತ್ತಷ್ಟು ಕಾಟ ನೀಡುವ ಸೂಚನೆ ನೀಡಿದ್ದಾರೆ. ಈಗಾಗಲೇ ಅರ್ಧಶತಕ ಸಿಡಿಸಿರುವ ರೋಹಿತ್ ಶರ್ಮಾ ಆಡಿದ ರೀತಿಯ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಪ್ರತಿಕ್ರಿಯಿಸಿದ್ದಾರೆ. ರೋಹಿತ್ ಶರ್ಮಾ ಅತ್ಯುತ್ತಮ ಬ್ಯಾಟರ್‌ಗಳು ಆಡುವಂತೆಯೇ ಸರಳವಾಗಿ ಬ್ಯಾಟಿಂಗ್ ನಡೆಸಿದ್ದಾರೆ ಎಂದಿದ್ದಾರೆ.
"ಅತ್ಯುತ್ತಮ ಆಟಗಾರರು ಆಡಬೇಕಾದ ರೀತಿಯಲ್ಲಿಯೇ ರೋಹಿತ್ ಶರ್ಮಾ ಸರಳವಾಗಿ ಬ್ಯಾಟಿಂಗ್ ನಡೆಸಿದ್ದಾರೆ. ತನ್ನ ಆಟವನ್ನು ಅವರು ಮತ್ತೆ ಕಂಡುಕೊಂಡಿದ್ದಾರೆ. ಬ್ಯಾಟಿಂಗ್‌ಗೆ ಇಳಿಯುವಾಗ ನೀವು ಮೊದಲಿಗೆ ಮಾಡಬೇಕಾದದ್ದೇನೆಂದರೆ ನಿಮ್ಮನ್ನು ನೀವು ಬೆಂಬಲಿಸಿಕೊಳ್ಳಬೇಕು. ಆತ ಯಾವುದೇ ಒತ್ತಡದಲ್ಲಿ ಇರಲಿಲ್ಲ ಹಾಗೂ ತಮ್ಮ ಶೈಲಿಯನ್ನು ವ್ಯಕ್ತಪಡಿಸಿದ್ದಾರೆ. ಕೆಎಲ್ ರಾಹುಲ್ ಕೂಡ ಅವರಿಗೆ ಉತ್ತಮವಾಗಿ ಬೆಂಬಲ ನೀಡಿದರು" ಎಂದಿದ್ದಾರೆ ಮ್ಯಾಥ್ಯೂ ಹೇಡನ್.
ನಂತರ ಮ್ಯಾಥ್ಯೂ ಹೇಡನ್ ಆಸ್ಟ್ರೇಲಿಯಾದ ಬೌಲರ್‌ಗಳನ್ನು ರೋಹಿತ್ ಶರ್ಮಾ ಒತ್ತಡಕ್ಕೆ ಸಿಲುಕಿಸಿದರು ಎಂದಿದ್ದಾರೆ. ರೋಹಿತ್ ಉಳಿದುಕೊಳ್ಳುವ ಸಲುವಾಗಿ ಬ್ಯಾಟಿಂಗ್ ನಡೆಸದೆ ನೇರವಾಗಿ ರನ್‌ಗಳಿಸುವತ್ತಲೇ ತಮ್ಮ ಚಿತ್ತ ನೆಟ್ಟಿರುವುದು ಸ್ಪಷ್ಟವಾಗಿತ್ತು ಎಂದಿದ್ದಾರೆ.
ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶುಬ್ಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕ್ಯಾಮರೂನ್ ಗ್ರೀನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications