Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Aus: ಮೊದಲ ಟೆಸ್ಟ್‌ನಲ್ಲಿ ಸೂರ್ಯಕುಮಾರ್ ಆಡಲಿದ್ದಾರೆ: ಸಂಜಯ್ ಮಂಜ್ರೇಕರ್

BGT 2023: Sanjay Manjrekar said Suryakumar Yadav will play the first Test match

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಈಗ ವಿಶ್ವ ಕ್ರಿಕೆಟ್ ಅಭಿಮಾನಿಗಳ ಚಿತ್ತವನ್ನು ತನ್ನತ್ತ ಸೆಳೆಯುವಂತೆ ಮಾಡಿದೆ. ಎರಡು ಬಲಿಷ್ಠ ತಂಡಗಳ ನಡುವಿನ ಹಣಾಹಣಿ ಸಾಕಷ್ಟು ಕುತೂಹಲ ಮೂಡಿಸಿದ್ದು ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಸದ್ಯದ ಪ್ರಶ್ನೆಯಾಗಿದೆ. ನಾಗ್ಪುರದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗದ ಬಗ್ಗೆ ಸಾಕಷ್ಟು ಕುತೂಹಲವಿದ್ದು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಆಡು ಬಳಗದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ ಎಂದು ಸಂಜಯ್ ಮಂಜ್ರೇಕರ್ ಭವಿಷ್ಯ ನುಡಿದಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಜೊತೆಗೆ ಮಾತನಾಡಿದ ಮಂಜ್ರೇಕರ್ ಕೆಎಸ್ ಭರತ್ ಜೊತೆಗೆ ಮೊದಲ ಪಂದ್ಯದಲ್ಲಿ ಆಡಲಿದ್ದಾರೆ ಎಂದಿದ್ದಾರೆ.

"ನನ್ನ ಪ್ರಕಾರ ಮೊದಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್ ಕೆಎಸ್ ಭರತ್ ಜೊತೆಗೆ ಆಡಲಿದ್ದಾರೆ. ಸೂರ್ಯಕುಮಾರ್ ಯಾದವ್ 79 ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಆಡಿದ್ದಾರೆ. ನಾವು ನೋಡಿರುವ ವಿಭಿನ್ನ ಕೆರಿಯರ್ ಆಗಿದೆ. ಆತ ಕ್ರಿಕೆಟ್‌ನಲ್ಲಿ ಬಹಳ ಕಾಲದಿಂದ ಇದ್ದಾರೆ" ಎಂದಿದ್ದಾರೆ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್

ಇತ್ತಂಡಗಳ ಸ್ಕ್ವಾಡ್
ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Tuesday, February 7, 2023, 21:00 [IST]
Other articles published on Feb 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+