ಜವಾಬ್ಧಾರಿ ಏನಾದರೂ ಇದ್ದರೆ ರಾಜೀನಾಮೆ ನೀಡಿ: ಸುನಿಲ್ ಗವಾಸ್ಕರ್ ಕಿಡಿಕಾರಿದ್ದು ಯಾರ ಮೇಲೆ!!

ಭಾರತದ ಮಾಜಿ ಕ್ರಿಕೆಟಿಗ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಆಸ್ಟ್ರೇಲಿಯಾ ಕ್ರಿಕೆಟ್ ಆಯ್ಕೆಗಾರರ ವಿರುದ್ಧ ಕಟುವಾಗಿ ಟೀಕೆ ವ್ಯಕ್ತಪಡಿಸಿದ್ದಾರೆ. ಆಸಿಸ್ ಆಯ್ಕೆ ಮಂಡಳಿ ಮಾಡಿರುವ ತಪ್ಪನ್ನು ಬೊಟ್ಟು ಮಾಡಿರುವ ಸುನಿಲ್ ಗವಾಸ್ಕರ್ ಅವರಿಗೆ ಜವಾಭ್ಧಾರಿ ಎನ್ನುವುದು ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದಿದ್ದಾರೆ ಸುನಿಲ್ ಗವಾಸ್ಕರ್.
ಆಸ್ಟ್ರೇಲಿಯಾದ ಆಟಗಾರರತ್ತ ಬೆರಳು ತೋರಿಸುವುದಕ್ಕಿಂತ ಆಯ್ಕೆಗಾರರನ್ನು ಪ್ರಶ್ನಿಸಬೇಕು ಎಂದಿದ್ದಾರೆ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್. ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾ ಆಟಗಾರರ ಬಗ್ಗೆ ಹಲವು ಸಂದರ್ಭದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಕಾರಣ ಸುನಿಲ್ ಗವಾಸ್ಕರ್ ಈ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಆಸಿಸ್ ಆಟಗಾರರ ವಿರುದ್ಧ ವ್ಯಕ್ತವಾಗಿತ್ತು ಭಾರೀ ಟೀಕೆ
ಆಸ್ಟ್ರೇಲಿಯಾ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿ ಮುಖಭಂಗಕ್ಕೆ ಒಳಗಾಗಿತ್ತು. ಅಲ್ಲದೆ ಭಾರತದಲ್ಲಿ ಸರಣಿ ಗೆಲ್ಲುವ ಕನಸನ್ನು ಮತ್ತೊಮ್ಮೆ ಭಗ್ನಗೊಳಿಸಿತ್ತು. ಭಾರತದ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಕಠಿಣ ಸಮಯವನ್ನು ಎದಿರಿಸುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ವಿರುದ್ಧ ಆಸ್ಟ್ರೇಲಿಯಾದ ದಿಗ್ಗಜ ಅಲನ್ ಬಾರ್ಡರ್ ಅವರಿಂದ ಹಿಡಿದು ಮ್ಯಾಥ್ಯೂ ಹೇಡನ್ ವರೆಗೆ ಭಾರಿ ಟೀಕೆ ವ್ಯಕ್ತಪಡಿಸಿದ್ದರು.

ಆಯ್ಕೆ ಮಂಡಳಿಯನ್ನು ಪ್ರಶ್ನಿಸಿದ ಗವಾಸ್ಕರ್
ಸುನಿಲ್ ಗವಾಸ್ಕರ್ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‌ವುಡ್, ಮಿಚೆಲ್ ಸ್ಟಾರ್ಕ್ ಮತ್ತು ಕ್ಯಾಮರೂನ್ ಗ್ರೀನ್ ಅವರ ಉದಾಹರಣೆ ನೀಡಿ ಪ್ರತಿಕ್ರಿಯಿಸಿದ್ದಾರೆ. ಗಾಯದಕಾರಣದಿಂದಾಗಿ ಸರಣಿಯಲ್ಲಿ ಒಂದೂ ಪಂದ್ಯವನ್ನು ಆಡದೆ ಹೇಜಲ್‌ವುಡ್ ಆಸ್ಟ್ರೇಲಿಯಾಗೆ ವಾಪಾಸಾಗಿದ್ದಾರೆ. ಸ್ಟಾರ್ಕ್ ಹಾಗೂ ಗ್ರೀನ್ ಮೂರನೇ ಟೆಸ್ಟ್ ಪಂದ್ಯದ ಬಳಿಕ ಲಭ್ಯವಾಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ಗವಾಸ್ಕರ್, ಗಾಯದ ಕಾರಣದಿಂದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಲಭ್ಯವಿಲ್ಲ ಎಂದು ಗೊತ್ತಿದ್ದರೂ ಅವರನ್ನು ಆಯ್ಕೆ ಮಾಡಿದ್ದು ಯಾವ ಕಾರಣಕ್ಕೆ ಎಂದಿದ್ದಾರೆ ಸುನಿಲ್ ಗವಾಸ್ಕರ್.

ಆಟಗಾರರನ್ನು ಟೀಕಿಸುವುದರಲ್ಲಿ ಅರ್ಥವಿಲ್ಲ ಎಂದ ಗವಾಸ್ಕರ್
"ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಆಟಗಾರರು ಮಾಧ್ಯಮಗಳಲ್ಲಿ ಆಸ್ಟ್ರೇಲಿಯಾದ ಆಟಗಾರರ ಮೇಲೆ ಟೀಕೆಗಳನ್ನು ಮಾಡುತ್ತಿದ್ದಾರೆ. ಆದರೆ ಅವರು ನಿಜವಾಗಿಯೂ ಟೀಕಿಸಬೇಕಾಗಿದ್ದು ಆಸ್ಟ್ರೇಲಿಯಾದ ಆಯ್ಕೆ ಮಂಡಳಿಯ ಸದಸ್ಯರನ್ನು" ಎಂದಿದ್ದಾರೆ ಸುನಿಲ್ ಗವಾಸ್ಕರ್. ಸೂಪರ್ ಸ್ಟಾರ್‌ಗೆ ಬರೆದಿರುವ ಅಂಕಣದಲ್ಲಿ ಸುನಿಲ್ ಗವಾಸ್ಕರ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮಾರ್ಚ್ 9ರಿಂದ ಆರಂಭವಾಗಲಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಅಮೋಘ ಗೆಲುವು ಸಾಧಿಸಿದ್ದ ಭಾರತ ಮೂರನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಶರಣಾಗಿತ್ತು. ಇಂದೋರ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ 9 ವಿಕೆಟ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಭಾರತ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಕುಲದೀಪ್ ಯಾದವ್, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕಟ್
ಆಸ್ಟ್ರೇಲಿಯಾ ಸ್ಕ್ವಾಡ್: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕನ್ನೇಮನ್, ಮಿಚೆಲ್ ಸ್ವೆಪ್ಸನ್, ಮ್ಯಾಟ್ ರೆನ್ಶಾ, ಸ್ಕಾಟ್ ಬೋಲ್ಯಾಂಡ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications