For Quick Alerts
ALLOW NOTIFICATIONS  
For Daily Alerts
 

ಎರಡನೇ ಟೆಸ್ಟ್ ಗೆದ್ದ ಬಳಿಕ ಪ್ರಧಾನಮಂತ್ರಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ ಭಾರತ ತಂಡ

BGT 2023: Team India players and Coach Rahul Dravid visited Pradhanmantri Sangrahalaya after Delhi Test win

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಮೂರನೇ ದಿನದಲ್ಲಿಯೇ ಗೆದ್ದ ಟೀಮ್ ಇಂಡಿಯಾ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಈ ಗೆಲುವಿನ ಬಳಿಕ ಟೀಮ್ ಇಂಡಿಯಾದ ಆಟಗಾರರು ಭಾನುವಾರ ಪ್ರಧಾನಮಂತ್ರಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದಾರೆ. ಕೋಚ್ ದ್ರಾವಿಡ್ ಸೇರಿದಂತೆ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕೂಡ ಈ ಸಂದರ್ಭದಲ್ಲಿ ಸಾತ್ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನಿಡಿ ಮಿಂಚಿದೆ. ಅದರಲ್ಲೂ ರವೀಂದ್ರ ಜಡೇಜಾ ಮೂರನೇ ದಿನದಾಟದಲ್ಲಿ ನೀಡಿ ಅಬ್ಬರದ ಬೌಲಿಂಗ್ ದಾಲೀಯ ಕಾರಣದಿಂದಾಗಿ ಆಸ್ಟ್ರೇಲಿಯಾ ದಾಂಡಿಗರು ಅಕ್ಷರಶಃ ನಿರುತ್ತರವಾಗಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಪೂರ್ಣ ಮೇಲುಗೈ ಸಾಧಿಸಿ ಗೆಲುವು ತನ್ನದಾಗಿಸಿಕೊಂಡಿದೆ.

ಟೀಮ್ ಇಂಡಿಯಾ ಆಲ್‌ರೌಂಡರ್ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದುಕೊಂಡಿದ್ದ ರವೀಂದ್ರ ಜಡೇಜಾ ಎರಡನೇ ಇನ್ನಿಂಗ್ಸ್‌ನಲ್ಲಿ ಆಸಿಸ್ ಪಡೆಯ ಮೇಲೆರಗಿದ್ದು 7 ವಿಕೆಟ್ ಕಬಳಿಸಿ ಅಸ್ಟ್ರೇಲಿಯಾಗೆ ಆಘಾತ ನೀಡಿದ್ದಾರೆ. ಈ ಮೂಲಕ ಈ ಪಂದ್ಯದಲ್ಲಿ ರವೀಂದ್ರ ಜಡೇಜಾ 10 ವಿಕೆಟ್‌ಗಳ ಗೊಂಚಲು ತಮ್ಮದಾಗಿಸಿಕೊಂಡಿದ್ದಾರೆ.

ಒಂದು ವಿಕೆಟ್‌ಗೆ 61 ರನ್ ಮತ್ತು 62 ರನ್‌ಗಳ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡ ಮೂರನೇ ದಿನದಾಟವನ್ನು ಪ್ರಾರಂಭಿಸಿತು. ಬಳಿಕ ಆಸೀಸ್ ಪಡೆ ಭಾರತದ ಆಲ್‌ರೌಂಡರ್ ಜಡೇಜಾ ವಿರುದ್ಧ ಸಂಪೂರ್ಣವಾಗಿ ಕುಸಿಯಿತು. ಈ ಪಂದ್ಯದಲ್ಲಿ ಜಡೇಜಾ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದ್ದು 42 ರನ್‌ಗಳಿಗೆ ಏಳು ವಿಕೆಟ್ ಪಡೆದುಕೊಂಡಿದ್ದಾರೆ. ಈ ಪ್ರದರ್ಶನದಿಂದಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಗೆಲ್ಲಲು 114 ರನ್‌ಗಳ ಸುಲಭ ಗುರಿ ನಿಗದಿಪಡಿಸಲು ಕಾರಣವಾದರು. ಈ ಗುರಿಯನ್ನು ಭಾರತ 4 ವಿಕೆಟ್ ಕಳೆದುಕೊಂಡು ಬೆನ್ನಟ್ಟಿದ್ದು 6 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್),
ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಉಮೇಶ್ ಯಾದವ್

ಆಸ್ಟ್ರೇಲಿಯಾ ಆಡುವ ಬಳಗ: ಮ್ಯಾಟ್ ರೆನ್ಶಾ, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುನ್ನೇಮನ್
ಬೆಂಚ್: ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್, ಆಷ್ಟನ್ ಅಗರ್, ಲ್ಯಾನ್ಸ್ ಮೋರಿಸ್, ಸ್ಕಾಟ್ ಬೋಲ್ಯಾಂಡ್, ಡೇವಿಡ್ ವಾರ್ನರ್

Story first published: Monday, February 20, 2023, 2:40 [IST]
Other articles published on Feb 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+