ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಾರ್ಡರ್-ಗವಾಸ್ಕರ್ ಟ್ರೋಫಿ: ಆಸಿಸ್ ಸ್ಟಾರ್ ವೇಗಿ ಮೊದಲ ಪಂದ್ಯಕ್ಕೆ ಅಲಭ್ಯ ಖಚಿತ

BGT: Australian pacer Mitchell Starc statement on his injury, confirms will miss 1st test

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮೊದಲ ಪಂದ್ಯ ಫೆಬ್ರವರಿ 9ರಿಂದ ಆರಂಭವಾಗಲಿದ್ದು ಆಸ್ಟ್ರೇಲಿಯಾ ತಂಡಕೆಲವೇ ಗಂಟೆಗಳಲ್ಲಿ ಭಾರತಕ್ಕೆ ಆಗಮಿಸಿ ಸರಣಿಗೆ ಸಿದ್ಧತೆ ನಡೆಸಲಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಪ್ರಮುಖ ಹಿನ್ನಡೆಯೊಂದು ಉಂಟಾಗಿದ್ದು ಆಸಿಸ್ ತಂಡದ ಪ್ರಮುಖ ವೇಗದ ಬೌಲರ್ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯವಾಗುವುದು ಖಚಿತವಾಗಿದೆ.

ಆಸ್ಟ್ರೇಲಿಯಾದ ಸ್ಟಾರ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಬೆರಳಿನ ಗಾಯಕ್ಕೆ ತುತ್ತಾಗಿದ್ದು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಭಾರತದ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯುತ್ತಿರುವುದಾಗಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಟಾರ್ಕ್ ಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ನಿಂದ ಹೊರಗುಳಿದಿದ್ದ ಸ್ಟಾರ್ಕ್ ಚಿಕಿತ್ಸೆ ಮುಂದಿವರಿಸಿದ್ದರು. ಭಾರತದ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಚೇತರಿಕೆ ಕಾಣುವ ವಿಶ್ವಾಸ ವ್ಯಕ್ತಪಡಿಸಿದ್ದ ಸ್ಟಾರ್ಕ್ ಇದೀಗ ವಿಶ್ರಾಂತಿ ಮುಂದುವರಿಸುವ ಅಗತ್ಯವಿದೆ ಎಂದಿದ್ದಾರೆ.

ಆಸ್ಟ್ರೇಲಿಯಾದ ಕ್ರಿಕೆಟ್ ಪ್ರಶಸ್ತಿಯ ಸಂದರ್ಭದಲ್ಲಿ ಸ್ಟಾರ್ಕ್ ಗಾಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. "ನಾನು ಚೇತರಿಎಯ ಹಾದಿಯಲ್ಲಿದ್ದೇನೆ. ಇನ್ನೂ ಒಂದೆರಡು ವಾರಗಳ ಅಗತ್ಯವಿದೆ. ಬಳಿಕ ನಿಮ್ಮನ್ನು ದೆಹಲಿಯಲ್ಲಿ ಭೇಟಿಯಾಗುತ್ತೇನೆ. ಮೊದಲ ಟೆಸ್ಟ್‌ನಲ್ಲಿ ಗೆಲುವಿನ ಭರವಸೆಯೊಂದಿಗೆ.. ಅಲ್ಲಿಯೇ ಅಭ್ಯಾಸವನ್ನು ಆರಂಬಿಸುತ್ತೇನೆ" ಎಂದಿದ್ದಾರೆ ವಿಚೆಲ್ ಸ್ಟಾರ್ಕ್.

ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9ರಂದು ನಾಗ್ಪುರದಲ್ಲಿ ನಡೆಯಲಿದ್ದು ಅದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಮೂರನೇ ಪಂದ್ಯ ಧರ್ಮಶಾಲಾದಲ್ಲಿ ಆಯೋಜನೆಯಾದರೆ ಅಂತಿಮ ಟೆಸ್ಟ್ ಪಂದ್ ಅಹ್ಮದಾಬಾದ್‌ನಲ್ಲಿ ನಡೆಯಲಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Tuesday, January 31, 2023, 8:33 [IST]
Other articles published on Jan 31, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X