For Quick Alerts
ALLOW NOTIFICATIONS  
For Daily Alerts
 

Bhuvneshwar Kumar: ಐಪಿಎಲ್ ಇತಿಹಾಸದಲ್ಲಿ ಭುವನೇಶ್ವರ್ ಕುಮಾರ್ ಹೊಸ ದಾಖಲೆ

ಭಾನುವಾರ ನಡೆದ ಹೈವೋಲ್ಟೇಜ್ ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲಿಸಿತು. ಬೆಂಗಳೂರು ತಂಡದ ಗೆಲುವಿನಲ್ಲಿ ವೇಗಿ ಭುವನೇಶ್ವರ್ ಕುಮಾರ್ ಕೂಡ ಪ್ರಮುಖ ಪಾತ್ರವಹಿಸಿದ್ದರು. ಅವರು ತುಂಬ ಅದ್ಭುತವಾಗಿ ಬೌಲಿಂಗ್ ಮಾಡಿದರು. ಇದರೊಂದಿಗೆ ಭುವನೇಶ್ವರ್ ಕುಮಾರ್ ಕೂಡ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಮಾಡಿದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಆರಂಭದಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲವಾದರೂ, ನಂತರ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ವಿಕೆಟ್‌ಗಳ ಬೇಟೆಯಾಡಿದರು. ಈ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

Bhuvneshwar Kumar creates record of becoming second highest wicket-taker in IPL history

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭುವನೇಶ್ವರ್ ಕುಮಾರ್ 4 ಓವರ್‍‌ಗಳನ್ನು ಮಾಡಿದರು. ಈ ನಾಲ್ಕು ಓವರ್‍‌ಗಳಲ್ಲಿ ಅವರು 33 ರನ್ ನೀಡಿ 3 ವಿಕೆಟ್ ಕಬಳಿದರು. ಅವರು ವಿಶೇಷವಾಗೊ ಕೊನೆಯ ಓವರ್‍‌ನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದರು. ಇದರೊಂದಿಗೆ ಭುವನೇಶ್ವರ್ ಕುಮಾರ್ ಕೂಡ ತಮ್ಮ ಹೆಸರಿಗೆ ಮತ್ತೊಂದು ದಾಖಲೆಯನ್ನು ಸೇರಿಸಿಕೊಂಡರು. ಈಗ ಅವರು ಐಪಿಎಲ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಆಗಿದ್ದಾರೆ. ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವೆಂದರೆ

ಭುವನೇಶ್ವರ್ ಕುಮಾರ್ ಇದುವರೆಗೆ ಒಟ್ಟು 185 ಪಂದ್ಯಗಳನ್ನು ಆಡಿದ್ದು, 192 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವೆಂದರೆ 19 ರನ್‌ಗಳಿಗೆ 5 ವಿಕೆಟ್‌ಗಳು. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಹೆಸರಿನಲ್ಲಿದೆ. ಚಹಾಲ್ ಇದುವರೆಗೆ 169 ಪಂದ್ಯಗಳಲ್ಲಿ 214 ವಿಕೆಟ್‌ಗಳನ್ನು ಪಡೆದಿದ್ದಾರೆ. ಈಗ ಭುವನೇಶ್ವರ್ ಕುಮಾರ್ ಎರಡನೇ ಸ್ಥಾನಕ್ಕೆ ಬಂದಿದ್ದಾರೆ.

ಭುವನೇಶ್ವರ್ ಕುಮಾರ್ ಐಪಿಎಲ್ ಇತಿಹಾಸದ ಸ್ಟಾರ್ ಬೌಲರ್‌ಗಳಲ್ಲಿ ಒಬ್ಬರು. ಅವರು ಚೆಂಡನ್ನು ಎರಡೂ ಕಡೆಯಿಂದ ಸ್ವಿಂಗ್ ಮಾಡುವಲ್ಲಿ ನಿಪುಣರು. ಈ ಸಾಮರ್ಥ್ಯದಿಂದಾಗಿ ಅವರು 2011 ರಿಂದ ಐಪಿಎಲ್ ಭಾಗವಾಗಿದ್ದಾರೆ. ಅವರು ಸನ್ ರೈಸರ್ಸ್ ಹೈದರಾಬಾದ್ ಪರ ಐಪಿಎಲ್‌ನಲ್ಲಿ ಗರಿಷ್ಠ ಪಂದ್ಯಗಳನ್ನು ಆಡಿದ್ದಾರೆ. ಅವರು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದು, ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

Story first published: Monday, April 28, 2025, 12:36 [IST]
Other articles published on Apr 28, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+