Bhuvneshwar Kumar: ಡ್ವೇನ್ ಬ್ರಾವೋ ಹಿಂದಿಕ್ಕಿ ಯಶಸ್ವಿ ವೇಗಿ ಎನಿಸಿಕೊಂಡ ಭುವನೇಶ್ವರ್ ಕುಮಾರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಭುವನೇಶ್ವರ್ ಕುಮಾರ್ ಅವರು ವೆಸ್ಟ್ ಇಂಡೀಸ್ ಆಲ್‌ರೌಂಡರ್ ಡ್ವೇನ್ ಬ್ರಾವೋ ಅವರನ್ನು ಹಿಂದಿಕ್ಕಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ವೇಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭುವನೇಶ್ವರ್ ಕುಮಾರ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ವೇಗದ ಬೌಲರ್
ಎನಿಸಿಕೊಂಡಿದ್ದಾರೆ.
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2025 ರ 20ನೇ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಈ ಮೈಲಿಗಲ್ಲು ಸಾಧಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಭುವನೇಶ್ವರ್ ಕುಮಾರ್ ನಾಲ್ಕು ಓವರ್‍ಗಳಲ್ಲಿ 48 ರನ್ ನೀಡಿ 1 ವಿಕೆಟ್ ಪಡೆದರು. ಆರ್‌ಸಿಬಿ ತಂಡಕ್ಕೆ ಸೋಲಿನ ಭೀತಿ ಹುಟ್ಟಿಸಿದ ತಿಲಕ್ ವರ್ಮಾ ಅವರನ್ನು ಭುವನೇಶ್ವರ್ ಕುಮಾರ್ ಔಟ್ ಮಾಡುವ ಮೂಲಕ ಈ ಸಾಧನೆಯ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡರು.

ಭುವನೇಶ್ವರ್ ಕುಮಾರ್ ಈಗ 179 ಪಂದ್ಯಗಳಿಂದ 184 ವಿಕೆಟ್‌ಗಳನ್ನು ಪಡೆದಿದ್ದರೆ, ಬ್ರಾವೋ 161 ಐಪಿಎಲ್ ಪಂದ್ಯಗಳಿಂದ 183 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ದಾಖಲಯ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಮೂರನೇ ಸ್ಥಾನದಲ್ಲಿದ್ದಾರೆ. ಲಸಿತ್ ಮಾಲಿಂಗ 122 ಐಪಿಎಲ್ ಪಂದ್ಯಗಳಿಂದ 170 ವಿಕೆಟ್‌ಗಳನ್ನು ಪಡೆದಿದ್ದಾರೆ. ಭಾರತದ ಮತ್ತೊಬ್ಬ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಹೆಸರು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಜಸ್ಪ್ರೀತ್ ಬುಮ್ರಾ 134 ಐಪಿಎಲ್ ಪಂದ್ಯಗಳಲ್ಲಿ 165 ವಿಕೆಟ್‌ಗಳನ್ನು ಪಡೆದಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಾಲ್ (162 ಪಂದ್ಯಗಳಲ್ಲಿ 206 ವಿಕೆಟ್‌ಗಳು) ಮತ್ತು ಪಿಯೂಷ್ ಚಾವ್ಲಾ (192 ಪಂದ್ಯಗಳಲ್ಲಿ 192 ವಿಕೆಟ್‌ಗಳು) ಮೊದಲ ಎರಡು ಸ್ಥಾನಗಳಲ್ಲಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್
ಭುವನೇಶ್ವರ್ ಕುಮಾರ್ - 184 ವಿಕೆಟ್‌ಗಳು
ಡ್ವೇನ್ ಬ್ರಾವೋ - 183 ವಿಕೆಟ್‌ಗಳು
ಲಸಿತ್ ಮಾಲಿಂಗ - 170 ವಿಕೆಟ್
ಜಸ್ಪ್ರೀತ್ ಬುಮ್ರಾ - 165 ವಿಕೆಟ್‌ಗಳು
ಉಮೇಶ್ ಯಾದವ್ - 144 ವಿಕೆಟ್‌ಗಳು
ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉತ್ತಮ ಫಾರ್ಮ್‌ನಲ್ಲಿದೆ. ಐಪಿಎಲ್ 2025 ರಲ್ಲಿ ನಾಲ್ಕು ಪಂದ್ಯಗಳಲ್ಲಿ ಮೂರಲ್ಲಿ ಗೆಲುವು ದಾಖಲಿಸಿದ್ದು, ಆರು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆರ್‌ಸಿಬಿಯ ಮುಂದಿನ ಪಂದ್ಯ ಏಪ್ರಿಲ್ 10 ರಂದು ಬೆಂಗಳೂರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications