Bhuvneshwar Kumar: ನಿವೃತ್ತಿ ಅಂಚಿನಲ್ಲಿ 'ಸ್ವಿಂಗ್ ಕಿಂಗ್' ಬೌಲರ್ ವೃತ್ತಿಜೀವನ!
ಟೀಮ್ ಇಂಡಿಯಾ ಅಪರೂಪದ ಆಟಗಾರರನ್ನು ಬಹುತೇಕ ಕಳೆದುಕೊಂಡಿದೆ. ಗೌತಮ್ ಗಂಭೀರ್ ಹೆಡ್‌ಕೋಚ್ ಆದ ನಂತರ ಭಾರತ ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚು ಅವಕಾಶಗಳನ್ನು ನೀಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸ್ಟಾರ್ ವೇಗದ ಬೌಲರ್ ಭಾರತ ತಂಡಕ್ಕೆ ಮರಳುವುದು ಅಸಾಧ್ಯ ಎನಿಸುತ್ತಿದೆ.
ಈ ಸ್ಟಾರ್ ವೇಗದ ಬೌಲರ್ ಬೇರೆ ಯಾರು ಅಲ್ಲ. ಸ್ವಿಂಗ್ ಕಿಂಗ್ ಖ್ಯಾತಿಯ ಭುವನೇಶ್ವರ್ ಕುಮಾರ್. ಭಾರತ ತಂಡದ ಮೊದಲು ಟೆಸ್ಟ್ ತಂಡದಿಂದ ಭುವನೇಶ್ವರ್ ಕುಮಾರ್ ಹೊರಗುಳಿದಿದರು. ನಂತರ ಟಿ20 ಮತ್ತು ಏಕದಿನ ತಂಡಗಳಿಂದ ಅವರನ್ನು ಕೈಬಿಡಲಾಯಿತು. ಇಂತಹ ಪರಿಸ್ಥಿತಿಯಲ್ಲಿ ಭುವನೇಶ್ವರ್ ಕುಮಾರ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ನಿವೃತ್ತಿ ಅಂಚಿನಲ್ಲಿದೆ.

ಟೀಮ್ ಇಂಡಿಯಾ ಪರ ಮಿಂಚಿದ ಭುವನೇಶ್ವರ್ ಕುಮಾರ್ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕವೇ ವಿಶ್ವ ಕ್ರಿಕೆಟ್ ಗಮನ ಸೆಳೆದಿದ್ದರು. ಭುವನೇಶ್ವರ್ ಕುಮಾರ್ ಬೌಲಿಂಗ್‌ಗೆ ಎದುರಾಳಿ ತಂಡದ ಬ್ಯಾಟರ್‌ಗಳು ಬ್ಯಾಟಿಂಗ್ ಮಾಡಲು ಹೆದರಿದ ಸಂದರ್ಭಗಳೂ ಇವೆ. ಈಗ ಭುವನೇಶ್ವರ್ ಕುಮಾರ್ ಅವರಿಗೆ ಉಳಿದಿರುವ ಏಕೈಕ ಆಯ್ಕೆ ನಿವೃತ್ತಿ.
ಕೊನೆಯ ಪಂದ್ಯಗಳು
ಭುವನೇಶ್ವರ್ ಕುಮಾರ್ ಅವರು ಟೀಮ್ ಇಂಡಿಯಾ ಪರ ತಮ್ಮ ಕೊನೆಯ ಏಕದಿನ ಪಂದ್ಯವನ್ನು 2022ರ ಜನವರಿ 21 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದರು. ಬಳಿಕ 2022ರ ನವೆಂಬರ್ 22 ರಂದು ನ್ಯೂಜಿಲೆಂಡ್ ವಿರುದ್ಧ ಭಾರತದ ಪರ ಅವರು ತಮ್ಮ ಕೊನೆಯ ಟಿ20 ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. 2018ರ ದಕ್ಷಿಣ ಆಫ್ರಿಕಾ ವಿರುದ್ಧದ ಜೋಹಾನ್ಸ್‌ಬರ್ಗ್ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನಕ್ಕಾಗಿ ಭುವನೇಶ್ವರ್ ಕುಮಾರ್ ಅವರಿಗೆ 'ಮ್ಯಾನ್ ಆಫ್ ದಿ ಮ್ಯಾಚ್'ಪ್ರಶಸ್ತಿ ಸಿಕ್ಕಿತ್ತು. ಆದರೆ ಇದಾದ ನಂತರ ಅವರಿಗೆ ಭಾರತದ ಪರ ಟೆಸ್ಟ್ ಕ್ರಿಕೆಟ್ ಆಡುವ ಅದೃಷ್ಟ ಒದಗಲಿಲ್ಲ.
ನಿವೃತ್ತಿ ಅಂಚಿನಲ್ಲಿ ಭುವಿ
ಭುವನೇಶ್ವರ್ ಕುಮಾರ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾಕ್ಕೆ ಪ್ರಮುಖ ವೇಗದ ಬೌಲರ್ ಆಗಿದ್ದರು. ಭುವನೇಶ್ವರ್ ಕುಮಾರ್ ಚೆಂಡನ್ನು ಎರಡೂ ಕಡೆ ಸ್ವಿಂಗ್ ಮಾಡುವ ಮೂಲಕ ವಿಕೆಟ್ ಪಡೆಯುತ್ತಿದ್ದರು. ಅಗತ್ಯವಿದ್ದಾಗ ಬ್ಯಾಟ್‌ನಲ್ಲೂ ಉತ್ತಮ ಪ್ರದರ್ಶನ ನೀಡಿ ಭಾರತ ತಂಡವನ್ನು ಸಂಕಷ್ಟ ಪರಿಸ್ಥಿತಿಯಿಂದ ಹೊರತರುತ್ತಿದ್ದರು. 2018 ರಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ, ಭುವನೇಶ್ವರ್ ಕುಮಾರ್ ಜೋಹಾನ್ಸ್‌ಬರ್ಗ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 63 ರನ್ ಗಳಿಸಿವುದರ ಜೊತೆಗೆ 4 ವಿಕೆಟ್‌ಗಳನ್ನು ಸಹ ಕಬಳಿಸಿದ್ದರು.
ಭಾರತ ತಂಡಕ್ಕೆ ಮರಳುವುದು ಅಸಾಧ್ಯ
ಇದೀಗ ವೇಗದ ಬೌಲರ್‌ಗಳಾದ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇದಲ್ಲದೇ, ಇತ್ತೀಚೆಗೆ ಆಕಾಶ್ ದೀಪ್ ಕೂಡ ಟೀಮ್ ಇಂಡಿಯಾಗೆ ಫಿಟ್ ಆಗಿದ್ದಾರೆ. ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಆಕಾಶ್ ದೀಪ್ ಅವರ ಉಪಸ್ಥಿತಿಯಿಂದ ಭುವನೇಶ್ವರ್ ಕುಮಾರ್ ಭಾರತ ತಂಡಕ್ಕೆ ಮರಳುವುದು ಅಸಾಧ್ಯವಾಗಿದೆ. ಟೀಮ್ ಇಂಡಿಯಾದ ಬಹುತೇಕ ಪಂದ್ಯಗಳಲ್ಲಿ ಸೋಲಿಗೆ ಭುವನೇಶ್ವರ್ ಕುಮಾರ್ ಬೌಲಿಂಗ್ ಕಾರಣವಾಗಿದೆ. 2022ರ ಟಿ20 ವಿಶ್ವಕಪ್ ಮತ್ತು ಏಷ್ಯಾ ಕಪ್ ಟೂರ್ನಿಗಳಲ್ಲಿ ಭುವನೇಶ್ವರ್ ಕುಮಾರ್ ಸಾಕಷ್ಟು ರನ್ ನೀಡುವ ಮೂಲಕ ಭಾರತ ತಂಡದ ಸೋಲಿಗೆ ಕಾರಣವಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications