WTC: ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತಕ್ಕೆ ದೊಡ್ಡ ಹೊಡೆತ; ಫೈನಲ್ ಹಾದಿ ಹೀಗಿದೆ
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಅವಮಾನಕರ ಸೋಲನ್ನು ಅನುಭವಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದ ಮೂರನೇ ದಿನ ರೋಹಿತ್ ಶರ್ಮಾ ಪಡೆ 25 ರನ್‌ಗಳಿಂದ ಸೋತಿದೆ.
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 3-0 ಅಂತರದಿಂದ ಕಳೆದುಕೊಂಡ ನಂತರ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) 2023-25 ರಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ವಾಂಖೆಡೆ ಟೆಸ್ಟ್ ಸೋಲಿನ ಬಳಿಕ ಡಬ್ಲ್ಯೂಟಿಸಿ ಫೈನಲ್ ತಲುಪುವ ಭಾರತದ ಅವಕಾಶಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಇದೀಗ ಟೀಮ್ ಇಂಡಿಯಾದ ಹಾದಿ ತುಂಬಾ ಕಷ್ಟಕರವಾಗಿದೆ.

ಭಾರತಕ್ಕೆ ದೊಡ್ಡ ಹೊಡೆತ
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿನ ಬಳಿಕ ಭಾರತ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಕಳೆದುಕೊಂಡಿದೆ. ಈ ಮೂಲಕ ಆಸ್ಟ್ರೇಲಿಯಾ ನಂಬರ್ ಒನ್ ಸ್ಥಾನಕ್ಕೇರಿದೆ. ಪ್ರಸ್ತುತ ಭಾರತ ತಂಡವು 98 ಅಂಕಗಳನ್ನು ಹೊಂದಿದ್ದು, ಪಿಟಿಸಿ 58.33 ಆಗಿದೆ. ಮತ್ತೊಂದೆಡೆ, ಆಸ್ಟ್ರೇಲಿಯಾ ಪ್ರಸ್ತುತ 90 ಅಂಕಗಳನ್ನು ಹೊಂದಿದ್ದರೂ, ಪಿಟಿಸಿ 62.50 ರಷ್ಟಿದೆ. ಇದರಿಂದಾಗಿ ಕಾಂಗೂರು ಪಡೆ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಆಗ್ರಸ್ಥಾನಕ್ಕೇರಿದೆ.
ಶ್ರೀಲಂಕಾ 55.56 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಭಾರತದ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಬಳಿಕ ಕಿವೀಸ್ ಪಡೆ ಒಂದು ಸ್ಥಾನ ಜಿಗಿತ ಕಂಡಿದ್ದು, 4ನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಐದನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಆರನೇ ಸ್ಥಾನದಲ್ಲಿದೆ ಮತ್ತು ಪಾಕಿಸ್ತಾನ ತಂಡ ಏಳನೇ ಸ್ಥಾನದಲ್ಲಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಗಳಲ್ಲಿ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ತಂಡಗಳಿವೆ.
ಭಾರತದ ಡಬ್ಲ್ಯೂಟಿಸಿ ಫೈನಲ್ ಹಾದಿ
ಮುಂದಿನ ವರ್ಷ ಇಂಗ್ಲೆಂಡ್‌ನ ಲಾರ್ಡ್ಸ್ ಅಂಗಳದಲ್ಲಿ ಡಬ್ಲ್ಯೂಟಿಸಿ ಫೈನಲ್ ನಡೆಯಲಿದೆ. ಡಬ್ಲ್ಯೂಟಿಸಿ ಫೈನಲ್ ತಲುಪು ತಂಡಗಳ ಪೈಕಿ ಟೀಮ್ ಇಂಡಿಯಾ ಮುಂಚೂಣಿಯಲ್ಲಿದೆ. ಆದರೆ, ಇದಕ್ಕೂ ಮುನ್ನ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ.
ಡಬ್ಲ್ಯೂಟಿಸಿ ಫೈನಲ್ ತಲುಪುಬೇಕಾದರೆ ಇತರ ತಂಡಗಳ ಫಲಿತಾಂಶಗಳನ್ನು ಲೆಕ್ಕಿಸದೆ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಐದು ಟೆಸ್ಟ್ ಪಂದ್ಯಗಳಲ್ಲಿ ಕನಿಷ್ಠ 4ರಲ್ಲಿ ಗೆಲ್ಲಬೇಕು. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ಭಾರತ ಟೆಸ್ಟ್ ಸರಣಿ ಕಳೆದುಕೊಂಡರೆ ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ.
ಡಬ್ಲ್ಯೂಟಿಸಿ ಫೈನಲ್ ರೇಸ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಂದೆ ಇರಬಹುದು. ಆದರೆ ಶ್ರೀಲಂಕಾ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಕೂಡ ಡಬ್ಲ್ಯೂಟಿಸಿ ಫೈನಲ್ ತಲುಪುವ ಪ್ರಬಲ ಸ್ಪರ್ಧಿಗಳಾಗಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications