WTC: ಭಾರತ ಗೆಲುವಿನ ನಂತರ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆ; ಯಾವ ತಂಡಕ್ಕೆ ಲಾಭ?
ಬಾಂಗ್ಲಾದೇಶ ವಿರುದ್ಧ 280 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ (ಡಬ್ಲ್ಯೂಟಿಸಿ) ಅಂಕಪಟ್ಟಿಯಲ್ಲಿ ತನ್ನ ಮೊದಲ ಸ್ಥಾನವನ್ನು ಭದ್ರಗೊಳಿಸಿಕೊಂಡಿದೆ. ಇನ್ನೊಂದೆಡೆ ಗಾಲೆಯಲ್ಲಿ ನಡೆದ ಮೊದಲ ತವರು ಟೆಸ್ಟ್‌ನಲ್ಲಿ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ಸೋಲಿಸುವ ಮೂಲಕ ಡಬ್ಲ್ಯೂಟಿಸಿ ಫೈನಲ್‌ಗೆ ಪ್ರವೇಶಿಸುವ ಅವಕಾಶವನ್ನು ಹೊಂದಿದೆ.
ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ಮುಂದಿನ ವರ್ಷ ನಡೆಯಲಿರುವ ಡಬ್ಲ್ಯೂಟಿಸಿ ಫೈನಲ್‌ನಲ್ಲಿ ಸ್ಫರ್ಧಿಸಲು ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಿಗೆ ಪೈಪೋಟಿ ಹೆಚ್ಚಾಗಿದೆ. ಕೆಲ ದಿನಗಳ ಹಿಂದೆ ಭಾರತ ಮತ್ತು ಆಸ್ಟ್ರೇಲಿಯಾ ಡಬ್ಲ್ಯೂಟಿಸಿ ಫೈನಲ್ ಆಡಬಹುದು ಎನ್ನಲಾಗುತ್ತಿತ್ತು. ಆದರೆ ಈಗ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆ ಆಗಿದೆ.

ಬಾಂಗ್ಲಾದೇಶ ಕುಸಿತ
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಗೆಲುವಿನ ಮೂಲಕ ಭಾರತ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಮುನ್ನಡೆಯನ್ನು ಹೆಚ್ಚಿಸಿಕೊಂಡಿದೆ. ಭಾರತದ ಗೆಲುವಿನ ಶೇಕಡಾವಾರು ಅಂಕಗಳು (ಪಿಸಿಟಿ) 71.67 ರಷ್ಟಿದ್ದು, ಅಗ್ರಸ್ಥಾನದಲ್ಲಿ ಮುಂದುವರೆಯಲಿದೆ. ಇತ್ತ ಬಾಂಗ್ಲಾದೇಶ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಇಳಿದಿದೆ. ಬಾಂಗ್ಲಾದೇಶ ಶೇಕಡಾವಾರು ಅಂಕ 39.29 ಇದ್ದು, ಶ್ರೀಲಂಕಾ ಮತ್ತು ಇಂಗ್ಲೆಂಡ್ ತಂಡಗಳಿಗಿಂತ ಹಿಂದಿದೆ.
ಗಾಲೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಭರ್ಜರಿ ಜಯದಿಂದ ಶ್ರೀಲಂಕಾ ಲಾಭ ಪಡೆದಿದೆ. ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾದ ನಂತರ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಪ್ರಸ್ತುತ ಧನಂಜಯ್ ಡಿ ಸಿಲ್ವಾ ಮುನ್ನಡೆಸುತ್ತಿರುವ ಲಂಕಾ ತಂಡದ ಶೇಕಾಡವಾರು ಅಂಕ 50 ರಷ್ಟಿದೆ.
ಶ್ರೀಲಂಕಾ ತಂಡಕ್ಕೆ ಫೈನಲ್ ಅವಕಾಶ?
ಶ್ರೀಲಂಕಾ ತಂಡವು ಡಬ್ಲ್ಯೂಟಿಸಿ ಫೈನಲ್‌ಗೆ ಪ್ರವೇಶಿಸುವ ಅವಕಾಶವನ್ನು ಹೊಂದಿದೆ. ಗರಿಷ್ಠ ಶೇಕಾಡವಾರು ಅಂಕ 69.23 ರಷ್ಟನ್ನು ಸಾಧಿಸಿದರೆ ಫೈನಲ್ ತಲುಪುವ ಅವಕಾಶವಿದೆ. ಇದಕ್ಕಾಗಿ ಲಂಕಾ ತಂಡ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು 2-0 ಅಂತರದಲ್ಲಿ ಜಯಿಸುವುದರ ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧವೂ ಕ್ಲೀನ್ ಸ್ವೀಪ್ ಮಾಡಬೇಕಿದೆ. ಹರಿಣಗಳ ಪಡೆ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯು ನವೆಂಬರ್ 27 ರಂದು ಪ್ರಾರಂಭವಾಗಲಿದೆ. ಎರಡೂ ಪಂದ್ಯಗಳು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿವೆ.
ಡಬ್ಲ್ಯೂಟಿಸಿ ಟಾಪ್ 5 ತಂಡಗಳು
ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದ್ದು, ಶ್ರೀಲಂಕಾ ತಂಡ ಮೂರನೇ ಸ್ಥಾನವನ್ನು ಅಲಂಕರಿಸಿದೆ. ಇನ್ನು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications