ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಮೈದಾನದ ಕೈತಪ್ಪಲು ಬಿಡುವುದಿಲ್ಲ: ಡಿಕೆಶಿ
18ನೇ ಆವೃತ್ತಿಯ ಚಾಂಪಿಯನ್ ಪಟ್ಟವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಲಂಕರಿಸಿದೆ. ಈ ಸಂಭ್ರಮಾಚರಣೆಯ ವೇಳೆ ನಡೆದ ಕಾಲ್ತುಳಿತದ ವೇಳೆ 11 ಜನರು ಸಾವನ್ನಪ್ಪಿದ್ದರು. ಆರ್‌ಸಿಬಿ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ದುರ್ಘಟನೆ ಸಂಭವಿಸಿದೆ. ಈ ಘಟನೆಯ ಬಳಿಕ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವುದಿಲ್ಲ ಎಂದು ಹೇಳಲಾಗಿತ್ತು. ಇದರಿಂದ ಆರ್‌ಸಿಬಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಈಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ ಆ ಒಂದು ಹೇಳಿಕೆ ಅಭಿಮಾನಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಮತದಾನದ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಯಾವುದೇ ಕಾರಣಕ್ಕೂ ಐಪಿಎಲ್ ಚಿನ್ನಸ್ವಾಮಿ ಕೈ ತಪ್ಪಲು ಬಿಡುವುದಿಲ್ಲ. ನಮ್ಮ ಹೆಮ್ಮೆಯಾದ ಆರ್‌ಸಿಬಿ ತವರು ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತ ಪಡಿಸಿದ್ದರೆ. ಈ ಬಗ್ಗೆ ಸಂಬಂಧ ಪಟ್ಟವರೊಂದಿಗೆ ಚರ್ಚಿಸುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆಯ ವೇಳೆ ನಡೆದ ದುರ್ಘಟನೆ ಆರ್‌ಸಿಬಿ ಮ್ಯಾನೇಜ್ಮೆಂಟ್‌ಗೆ ಕಪ್ಪು ಚುಕ್ಕೆ ಎಂತೆ ಪರಿಣಮಿಸಿತ್ತು. ಅಲ್ಲದೆ ಚಿನ್ನಸ್ವಾಮಿ ಮೈದಾನ ಪಂದ್ಯವಾಳಿಗಳಿಗೆ ಸೂಕ್ತವಲ್ಲ ಎಂದು ಸರ್ಕಾರ ನೇಮಿಸಿದ್ದ ಸಮಿತಿ ವರದಿಯನ್ನು ನೀಡಿತ್ತು. ಈ ಬೆನ್ನಲ್ಲೆ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. 19ನೇ ಆವೃತ್ತಿಯ ಐಪಿಎಲ್‌ನ ಆರ್‌ಸಿಬಿ ತವರು ಪಂದ್ಯಗಳನ್ನು ಬೇರೆ ಕಡೆ ನಡೆಸಲು ನಿರ್ಧರಿಸಲಾಗಿತ್ತು. ಇದರಿಂದ ಆರ್‌ಸಿಬಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಆಗಿತ್ತು. ಈಗ ಡಿಕೆ ಶಿವಕುಮಾರ್ ನೀಡಿದ ಆ ಒಂದು ಹೇಳಿಕೆ ಅಭಿಮಾನಿಗಳಲ್ಲಿ ನವ ಉತ್ಸಾಹ ತುಂಬಿದೆ. ಕ್ರಿಕೆಟ್ ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಾಪಸ್ ತರುವ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ.
ಡಿಕೆ ಶಿವಕುಮಾರ್ ಹೇಳಿದ್ದೇನು?
ನಾನು ಸಹ ಕ್ರಿಕೆಟ್ ಅಭಿಮಾನಿ. ಐಪಿಎಲ್ ಪಂದ್ಯಗಳನ್ನು ಬೆಂಗಳೂರು ಬಿಟ್ಟು ಬೇರೆ ಕಡೆ ಸ್ಥಳಾಂತರಿಸುವಂತೆ ನೋಡಿಕೊಳ್ಳುತ್ತೇವೆ. ಈ ಮೈದಾನದಲ್ಲಿ ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ನಾವು ವಾಪಸ್ ತರುತ್ತೇವೆ. ಮುಂದಿನ ಬಾರಿಯ ಐಪಿಎಲ್ ಪಂದ್ಯಗಳು ಸಹ ಬೆಂಗಳೂರಿನಲ್ಲಿ ನಡೆಯಲಿವೆ ಎಂಬ ವಿಶ್ವಾಸವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಕ್ತ ಪಡಿಸಿದ್ದಾರೆ. ಈಗ ಉದ್ಭವಿಸಿರುವ ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಅಭಿಮಾನಿಗಳಲ್ಲಿ ನವ ಉತ್ಸಾಹ ಮೂಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಹಿಂದಿನ ಅನಾಹುತ ಕೆಟ್ಟದರು. ನಗರದ ಗೌರವ ಉಳಿಸುವ ಕೆಲಸವನ್ನು ನಾನು ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಭಿಮಾನಿಗಳ ದಟ್ಟಣೆಯನ್ನು ತಪ್ಪಿಸಲು ಬೇಕಾದ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ. ಚಿನ್ನಸ್ವಾಮಿ ಮೈದಾನಕ್ಕೆ ಪರ್ಯಾವಾಗಿ ಬೇರೆ ಮೈದಾನ ನಿರ್ಮಾಣಕ್ಕೆ ಸಿದ್ಧತೆಗಳು ಬರದಿಂದ ನಡೆದಿವೆ ಎಂದು ತಿಳಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿಗೂ ಮುನ್ನ ಡಿಕೆ ಶಿವಕೂಮಾರ್ ನೀಡಿದ ಹೇಳಿಕೆ ಮಹತ್ವ ಪಡೆದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications