IPL 2023: ಮುಂಬೈ ಇಂಡಿಯನ್ಸ್‌ಗೆ ಭಾರೀ ಹಿನ್ನಡೆ; 2023ರ ಐಪಿಎಲ್‌ನಿಂದ ಸ್ಟಾರ್ ಬೌಲರ್ ಸಂಪೂರ್ಣ ಹೊರಕ್ಕೆ

2023ರ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ(ಐಪಿಎಲ್) ದಿನಗಣನೆ ಆರಂಭವಾಗಿದ್ದು, ಮಾರ್ಚ್ 31ರಿಂದ 16ನೇ ಸೀಸನ್‌ನ ಲೀಗ್‌ಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ.
ಇದೇ ವೇಳೆ ಐದು ಬಾರಿಯ ಚಾಂಪಿಯನ್ ತಂಡ ಮುಂಬೈ ಇಂಡಿಯನ್ಸ್‌ಗೆ ದೊಡ್ಡ ಹಿನ್ನಡೆಯಾಗುವ ಸುದ್ದಿಯೊಂದು ಹೊರಬಿದ್ದಿದ್ದು, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರು ಗಾಯದಿಂದ ಚೇತರಿಸಿಕೊಳ್ಳಲು ವಿಫಲವಾದ ಕಾರಣ, 2023ರ ಐಪಿಎಲ್‌ನಿಂದ ಸಂಪೂರ್ಣ ಹೊರಗುಳಿಯಲಿದ್ದಾರೆ.
ಜಸ್ಪ್ರೀತ್ ಬುಮ್ರಾ ಬೆನ್ನು ನೋವು ಹೆಚ್ಚು ಗಂಭೀರವಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾದ ಕಾರಣ, ಚೇತರಿಸಿಕೊಳ್ಳಲು ತುಂಬಾ ಸಮಯ ಹಿಡಿಯುವುದರಿಂದಾಗಿ ಈ ಬಾರಿಯ ಐಪಿಎಲ್ ಋತುವಿನ ಬಹುಪಾಲು ತಪ್ಪಿಸಿಕೊಳ್ಳಲಿದ್ದಾರೆ.

ಕಳೆದ ಬಾರಿ ಹೀನಾಯ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ಈ ಬಾರಿ ಪ್ರಮುಖ ವೇಗದ ಬೌಲರ್ ಅನುಪಸ್ಥಿತಿ ದೊಡ್ಡ ಹೊಡೆತ ನೀಡಲಿದೆ. ಕಳೆದ ಋತುವಿನಲ್ಲಿ 8 ಕೋಟಿ ರೂಪಾಯಿಗೆ ಖರೀದಿಸಿದ್ದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಅವರ ಸೇವೆಯನ್ನು ಕಳೆದುಕೊಂಡಿತ್ತು. ಈ ಬಾರಿ ಜಸ್ಪ್ರೀತ್ ಬುಮ್ರಾ ತಪ್ಪಿಸಿಕೊಳ್ಳಲಿದ್ದಾರೆ. ಆದರೆ, ಜೋಫ್ರಾ ಆರ್ಚರ್ 2023ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿಯುವ ನಿರೀಕ್ಷೆಯಿದೆ.
ಇನ್ನು ಜೂನ್‌ನಲ್ಲಿ ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗುತ್ತಾರೆಯೇ ಎಂದು ಕಾದು ನೋಡಬೇಕಿದೆ. ಬೆನ್ನು ನೋವಿನ ಕಾರಣದಿಂದ ಸದ್ಯ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಗೂ ಬುಮ್ರಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಬೆಂಗಳೂರಿನ ಎನ್‌ಸಿಎನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಜಸ್ಪ್ರೀತ್ ಬುಮ್ರಾ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಪರ ಕೊನೆಯ ಬಾರಿಗೆ ಆಡಿದ್ದಾರೆ. ನಂತರ ಬೆನ್ನುನೋವಿನ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಅಂದಿನಿಂದ ಅವರು ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಂತಹ ಪ್ರಮುಖ ಪಂದ್ಯಾವಳಿಗಳನ್ನು ತಪ್ಪಿಸಿಕೊಂಡಿದ್ದಾರೆ.
ಏಪ್ರಿಲ್ 2ರಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಐಪಿಎಲ್ 2023ರ ಅಭಿಯಾನವನ್ನು ಆರಂಭಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications