Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Jasprit Bumrah: ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಬಗ್ಗೆ ಬಿಗ್ ಅಪ್ಡೇಟ್

ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಭಾಗವಾಗಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಕೊನೆಯ ಸಿಡ್ನಿ ಟೆಸ್ಟ್ ಪಂದ್ಯದ ಸಮಯದಲ್ಲಿ ಅವರು ಕೆಳ ಬೆನ್ನಿನ ಗಾಯದಿಂದ ಬಳಲುತ್ತಿದ್ದರು. ಈ ಗಾಯದಿಂದಾಗಿ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಆದರೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಪ್ರಾರಂಭವಾಗುವ ಮೊದಲು, ಬಮ್ರಾ ತಮ್ಮ ಗಾಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.

ಐಪಿಎಲ್ 2025 ಕ್ಕೂ ಮೊದಲು ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಒಂದು ದೊಡ್ಡ ಒಳ್ಳೆಯ ಸುದ್ದಿ ಬಂದಿದೆ. ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಫೆಬ್ರವರಿ 27, ಗುರುವಾರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ನೆಟ್ಸ್‌ನಲ್ಲಿ ಬೌಲಿಂಗ್ ಮಾಡಲು ಪ್ರಾರಂಭಿಸಿದ್ದಾರೆ. ಬುಮ್ರಾ ಇನ್‌ಸ್ಟಾಗ್ರಾಮ್ ನಲ್ಲಿ ಬೌಲಿಂಗ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಬೌಲಿಂಗ್ ಮಾಡುತ್ತಿದ್ದಾರೆ. ಈ ವಿಡಿಯೋಗೆ 'ಪ್ರತಿದಿನ ಪ್ರಗತಿ ಸಾಧಿಸಲಾಗುತ್ತಿದೆ' ಎಂದು ಬುಮ್ರಾ ಶೀರ್ಷಿಕೆ ನೀಡಿದ್ದಾರೆ.

Big update on Jasprit Bumrah fitness

ಐಪಿಎಲ್ 2025ರ ಆರಂಭಕ್ಕೂ ಮುನ್ನ ಜಸ್ಪ್ರೀತ್ ಬುಮ್ರಾ ಫಿಟ್ ಆಗುವ ನಿರೀಕ್ಷೆಯಿದೆ. ಐಪಿಎಲ್ 18ನೇ ಆವೃತ್ತಿ ಮಾರ್ಚ್ 22 ರಿಂದ ಆರಂಭವಾಗಲಿದೆ. ಮುಂಬೈ ಇಂಡಿಯನ್ಸ್ (ಎಂಐ) ತಂಡವು ಮಾರ್ಚ್ 23 ರಂದು ತನ್ನ ಮೊದಲ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಆಡಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ 3 ವಾರಗಳಿಗಿಂತ ಹೆಚ್ಚು ಸಮಯ ಉಳಿದಿದೆ. ಬುಮ್ರಾ ಪ್ರಸ್ತುತ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುತ್ತಿರುವ ರೀತಿ ನೋಡಿದರೆ, ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಐಪಿಎಲ್ 2025 ರಲ್ಲಿ ಮೊದಲ ಪಂದ್ಯದಿಂದಲೇ ಮುಂಬೈ ಇಂಡಿಯನ್ಸ್ ಪರ ಆಡಬಹುದು ಎನ್ನಲಾಗುತ್ತಿದೆ.

ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಜಸ್ಪ್ರೀತ್ ಬುಮ್ರಾ ಅವರನ್ನು 18 ಕೋಟಿ ರೂ.ಗೆ ಉಳಿಸಿಕೊಂಡಿತು. ಐಪಿಎಲ್ 2025 ರಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲಿಂಗ್ ವಿಭಾಗವನ್ನು ಬುಮ್ರಾ ಮುನ್ನಡೆಸಲಿದ್ದಾರೆ. ಬೆನ್ನುನೋವಿನಿಂದ ಚೇತರಿಸಿಕೊಂಡ ನಂತರ, ಬುಮ್ರಾ ಬೌಲಿಂಗ್ ಮಾಡಲು ಪ್ರಾರಂಭಿಸಿರುವುದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರಿಲೀಫ್ ಕೊಟ್ಟಿದೆ.

ಐಪಿಎಲ್ 2025 ರ ಮುಂಬೈ ಇಂಡಿಯನ್ಸ್ ತಂಡ

ಹಾರ್ದಿಕ್ ಪಾಂಡ್ಯ (ನಾಯಕ), ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಜ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಅಶ್ವಿನಿ ಕುಮಾರ್, ಮಿಚೆಲ್ ಸ್ಯಾಂಟ್ನರ್, ರೀಸ್ ಟಾಪ್ಲಿ, ದೀಪಕ್ ಚಾಹರ್, ಮುಜೀಬ್ ಉರ್ ರೆಹಮಾನ್, ವಿಲ್ ಜ್ಯಾಕ್, ಕೃಷ್ಣನ್ ಶ್ರೀಜಿತ್, ರಾಜ್ ಬಾವಾ, ಸತ್ಯನಾರಾಯಣ್ ರಾಜು, ಬೆವೊನ್ ಜೇಕಬ್ಸ್, ಲಿಜಾದ್ ವಿಲಿಯಮ್ಸ್, ವಿಘ್ನೇಶ್ ಪುತ್ತೂರ್, ಅರ್ಜುನ್ ತೆಂಡೂಲ್ಕರ್.

Story first published: Friday, February 28, 2025, 12:01 [IST]
Other articles published on Feb 28, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+