Cooch Behar Trophy: ದೇಶೀಯ ಕ್ರಿಕೆಟ್‌ನಲ್ಲಿ 10 ವಿಕೆಟ್ ಕಬಳಿಸಿ ದಾಖಲೆ ಬರೆದ ಯುವ ಸ್ಪಿನ್ನರ್
ಬಾರ್ಡರ್ ಗವಾಸ್ಕರ್ ಟ್ರೋಫಿಯ ಸಂದರ್ಭದಲ್ಲಿ ಭಾರತದ ಯುವ ಸ್ಪಿನ್ನರ್ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ. ಅಂಡರ್-19 ಕೂಚ್ ಬೆಹಾರ್ ಟ್ರೋಫಿ ಪಂದ್ಯದಲ್ಲಿ ಬಿಹಾರ ತಂಡದ ಯುವ ಸ್ಪಿನ್ನರ್ ಸುಮನ್ ಕುಮಾರ್ ಅವರು ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸುಮನ್ ಕುಮಾರ್ ಈ ಸಾಧನೆ ಮಾಡಿದ್ದಾರೆ.
ಟೀಮ್ ಇಂಡಿಯಾ ಮಾಜಿ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದ ದಾಖಲೆಯನ್ನು ಮಾಡಿದ್ದಾರೆ. ಇದೀಗ ಬಿಹಾರದ ಸುಮನ್ ಕುಮಾರ್ ಕೂಚ್ ಬೆಹಾರ್ ಟ್ರೋಫಿಯಲ್ಲಿ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರ ಪರ ಸುಮನ್ ಕುಮಾರ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಪರಿಣಾಮ ರಾಜಸ್ಥಾನ ತಂಡ 182 ರನ್‌ಗಳಿಗೆ ಆಲೌಟ್ ಆಯಿತು. ಇತ್ತೀಚೆಗಷ್ಟೇ ಅನ್ಶುಲ್ ಕಾಂಬೋಜ್ ದೇಶೀಯ ಕ್ರಿಕೆಟ್‌ನಲ್ಲಿ ಇದೇ ಸಾಧನೆ ಮಾಡಿದ್ದರು.

ಸುಮನ್ ಕುಮಾರ್ ಅವರ ಸ್ಪಿನ್ ಬೌಲಿಂಗ್ ದಾಳಿಗೆ ರಾಜಸ್ಥಾನದ ಬ್ಯಾಟರ್‌ಗಳು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಅವರು 33.5 ಓವರ್‌ಗಳಲ್ಲಿ 53 ರನ್ ನೀಡಿ ರಾಜಸ್ತಾನ ತಂಡದ ಎಲ್ಲಾ 10 ವಿಕೆಟ್‌ಗಳನ್ನು ಪಡೆದರು. ಒಮ್ಮೆ ಹ್ಯಾಟ್ರಿಕ್ ವಿಕೆಟ್ ಪಡೆದು ಸಂಭ್ರಮಿಸಿದರು. ಇದಲ್ಲದೆ, 20 ಮೇಡನ್ ಓವರ್‌ಗಳನ್ನು ಬೌಲಿಂಗ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.
ಪಂದ್ಯ ಫಲಿತಾಂಶ
ಬಿಹಾರ ತನ್ನ ಮೊದಲ ಇನಿಂಗ್ಸ್‌ನಲ್ಲಿ 467 ರನ್ ಗಳಿಸಿತ್ತು. ಸುಮನ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಬಿಹಾರ ತಂಡವು ರಾಜಸ್ಥಾನವನ್ನು ಕೇವಲ 182 ರನ್‌ಗಳಿಗೆ ಆಲೌಟ್ ಮಾಡಿದೆ. ಫಾಲೋ ಆನ್ ಆಡಿದ ರಾಜಸ್ಥಾನ ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 173 ರನ್ ಕಲೆ ಹಾಕಿದೆ. ರಾಜಸ್ಥಾನದ ಎರಡನೇ ಇನ್ನಿಂಗ್ಸ್‌ನಲ್ಲಿ ಸುಮನ್ ಇನ್ನೂ ಯಾವುದೇ ವಿಕೆಟ್ ಪಡೆದಿಲ್ಲ.
ಅನ್ಶುಲ್ ಕಾಂಬೋಜ್ ದಾಖಲೆ
ಇತ್ತೀಚೆಗೆ ರಣಜಿ ಟ್ರೋಫಿ ಪಂದ್ಯದಲ್ಲಿ ಕೇರಳ ವಿರುದ್ಧದ ಹರಿಯಾಣದ ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದಿದ್ದರು. ಭಾರತದ ದೇಶೀಯ ಋತುವಿನಲ್ಲಿ ಬೌಲರ್‌ಯೊಬ್ಬರು ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಪಡೆದಿರುವುದು ಇದು ಎರಡನೇ ಬಾರಿ. ಆದರೆ ಕೂಚ್ ಬೆಹಾರ್ ಟ್ರೋಫಿ ಪ್ರಥಮ ದರ್ಜೆ ಪಂದ್ಯವಾಗಿದೆ. 14 ವರ್ಷದೊಳಗಿನ, 16 ವರ್ಷದೊಳಗಿನ, 19 ವರ್ಷದೊಳಗಿನ ಮತ್ತು 23 ವರ್ಷದೊಳಗಿನ ಪಂದ್ಯಗಳಿಗೆ ಪ್ರಥಮ ದರ್ಜೆ ಅಥವಾ ಪಟ್ಟಿ ಎ ಸ್ಥಾನಮಾನವನ್ನು ನೀಡಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications