ಅಂಧರ ಟಿ20 ವಿಶ್ವಕಪ್: ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಕೊಚ್ಚಿ, ಫೆಬ್ರವರಿ. 06 : 2ನೇ ಆವೃತ್ತಿಯ ಅಂಧರ ಟ್ವೆಂಟಿ-20 ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 128 ರನ್‌ಗಳ ಅಂತರದಿಂದ ಸೋಲಿಸಿದೆ. ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡ, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.
ಭಾನುವಾರ kocfciy ರಾಜಗಿರಿ ಕಾಲೇಜ್ ಮೈದಾನದಲ್ಲಿ ನಡೆದ ಭಾರತ ಮತ್ತು ಆಸೀಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಸುನಿಲ್ ಮತ್ತು ಮಹಮ್ಮದ್ ಫರ್ಹಾನ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ವಿಕೆಟ್ ನಷ್ಟವಿಲ್ಲದೆ 272 ರನ್ ಕಲೆ ಹಾಕಿತು.[ಅಂಧರ ಟಿ20 ವಿಶ್ವಕಪ್ : ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ]

72 ಎಸೆತಗಳನ್ನು ಎದುರಿಸಿದ ಕರ್ನಾಟಕದ ಸುನಿಲ್ 29 ಬೌಂಡೆಇಗಳ ಮೂಲಕ 163 ರನ್ ಸಿಡಿಸಿದರು. ಫರ್ಹಾನ್ 35 ಎಸೆತಗಳಲ್ಲಿ 53 ರನ್ ಗಳಿಸಿ ಗಾಯಗೊಂಡು ನಿವೃತ್ತಿಯಾದರು.
ಆಸ್ಟ್ರೇಲಿಯಾ 144 ರನ್‌ಗಳಿಸಲಷ್ಟೇ ಶಕ್ತವಾಯಿತು. ಭಾರತ ಪರ ಅಜಯ್ ಕುಮಾರ್ ರೆಡ್ಡಿ 11 ರನ್ ಗಳನ್ನು ನೀಡಿ 2 ವಿಕೆಟ್ ಪಡೆದು ತಂಡದ ಗೆಲುವಿಗೆ ನೆರವಾದರು.
Story first published: Wednesday, January 3, 2018, 10:04 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications