India vs Australia 1st Test: ನಾಗ್ಪುರದಲ್ಲಿ ಹವಾಮಾನ ಮುನ್ಸೂಚನೆ, ಸಂಭಾವ್ಯ ಆಡುವ 11ರ ಬಳಗ

ಗುರುವಾರ, ಫೆಬ್ರವರಿ 9ರಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರಾರಂಭವಾಗಲಿರುವ ಬಹು ನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸತತ ಮೂರು ಟೆಸ್ಟ್ ಸರಣಿಗಳನ್ನು ಜಯಿಸಿದೆ ಮತ್ತು ತವರಿನಲ್ಲಿ ಭಾರತವೇ ಗೆಲ್ಲುವ ನೆಚ್ಚಿನ ತಂಡವಾಗಿದೆ. ಪರಸ್ಪರ 52 ಟೆಸ್ಟ್‌ಗಳಲ್ಲಿ 22 ಪಂದ್ಯಗಳನ್ನು ಭಾರತ ಗೆದ್ದು ಉತ್ತಮವಾದ ದಾಖಲೆ ಹೊಂದಿದೆ.
ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವು ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಪ್ರಾರಂಭವಾಗಲಿದೆ. ನಾಗ್ಪುರದ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ನಿರೀಕ್ಷಿಸಲಾಗಿದೆ ಮತ್ತು ದಿನವು ಮುಂದುವರೆದಂತೆ ತಾಪಮಾನ ಹೆಚ್ಚಾಗುತ್ತದೆ. ಹವಾಮಾನ ಇಲಾಖೆ ಪ್ರಕಾರ, ಮೊದಲ ಟೆಸ್ಟ್ ಪಂದ್ಯಕ್ಕೆ ಯಾವುದೇ ಮಳೆ ಆತಂಕ ಇರುವುದಿಲ್ಲ ಎಂದು ಹೇಳಿದೆ.

ನಾಗ್ಪುರದಲ್ಲಿ ನಡೆದ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರೂ ಆಟಗಾರರು ಭಾರತ ತಂಡಕ್ಕೆ ಯಾವ ರೀತಿ ಪ್ರಭಾವ ಬೀರಲಿದ್ದಾರೆ ಎಂಬುದರ ಬಗ್ಗೆ ಮಾತನಾಡಿದರು. ಇದೇ ವೇಳೆ, "ಮೊದಲ ಪಂದ್ಯದಲ್ಲಿ ಯಾವ ಆಟಗಾರನನ್ನು ಆಡಿಸಬೇಕೆಂದು ತಂಡದ ಮ್ಯಾನೇಜ್‌ಮೆಂಟ್ ಇನ್ನೂ ನಿರ್ಧರಿಸಿಲ್ಲ," ಎಂದು ತಿಳಿಸಿದರು.
"ಕಾರು ಅಪಘಾತದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ಅವರನ್ನು ಈ ಸರಣಿಯಲ್ಲಿ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಅವರ ಪಾತ್ರವನ್ನು ತುಂಬಲು ನಮ್ಮಲ್ಲಿ ಹುಡುಗರಿದ್ದಾರೆ. ನಾವು ನಮ್ಮ ಬ್ಯಾಟ್ಸ್‌ಮನ್‌ಗಳಿಗೆ ಎದುರಾಳಿಗಳ ತಂತ್ರದ ಬಗ್ಗೆ ತಿಳಿಸಿದ್ದೇವೆ ಮತ್ತು ಮೊದಲ ಪಂದ್ಯದ ಮೊದಲ ದಿನದಿಂದಲೇ ನಾವು ಅವುಗಳನ್ನು ಕಾರ್ಯಗತಗೊಳಿಸುತ್ತೇವೆ," ಎಂದು ನಾಯಕ ರೋಹಿತ್ ಶರ್ಮಾ ಹೇಳಿದರು.

ಭಾರತ vs ಆಸ್ಟ್ರೇಲಿಯಾ ತಂಡಗಳ ಸಂಭಾವ್ಯ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪೀಟರ್ ಹ್ಯಾಂಡ್ಸ್ಕಾಂಬ್, ಟಾಡ್ ಮರ್ಫಿ/ ಮಿಚೆಲ್ ಸ್ವೆಪ್ಸನ್, ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications