Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

BGT 2023: ಆಸ್ಟ್ರೇಲಿಯಾಗೆ ಆರಂಭದಲ್ಲೇ ಆಘಾತ; ಮತ್ತೋರ್ವ ಸ್ಟಾರ್ ವೇಗಿ ಮೊದಲ ಟೆಸ್ಟ್‌ನಿಂದ ಔಟ್!

Border-Gavaskar Trophy 2023: Aussie star pacer Josh Hazlewood missed out first Test against India at Nagpur

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಆರಂಭಕ್ಕೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರವೇ ಬಾಕಿಯಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾಗೆ ದೊಡ್ಡ ಹಿನ್ನಡೆಯೊಂದು ಉಂಟಾಗಿದ್ದು ಸರಣಿಯ ಆರಂಭಕ್ಕೂ ಮುನ್ನವೇ ತಂಡದ ಮತ್ತೋರ್ವ ಸ್ಟಾರ್ ವೇಗಿ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ. ಈ ಮೂಲಕ ಮಿಚೆಲ್ ಸ್ಟಾರ್ಕ್ ಬಳಿಕ ಮತ್ತೊಂದು ಹಿನ್ನಡೆಗೆ ಒಳಗಾಗಿದೆ ಆಸಿಸ್ ಪಡೆ.

ಭಾರತ ಪ್ರವಾಸಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ಕೆಲ ಪ್ರಮುಖ ಆಟಗಾರರು ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ತಂಡದ ಸ್ಟಾರ್ ವೇಗಿ ಜೋಶ್ ಹೇಜಲ್‌ವುಡ್ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿರುವ ಮತ್ತೋರ್ವ ಆಟಗಾರ ಎನಿಸಿದ್ದಾರೆ. ಜೋಶ್ ಹೇಜಲ್‌ವುಡ್ ನಾಗ್ಪುರದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ.

ಹಿಮ್ಮಡಿ ಗಾಯಕ್ಕೆ ತುತ್ತಾಗಿರುವ ಹೇಜಲ್‌ವುಡ್

ಹಿಮ್ಮಡಿ ಗಾಯಕ್ಕೆ ತುತ್ತಾಗಿರುವ ಹೇಜಲ್‌ವುಡ್

ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಎಡಗಾಲಿನ ಹಿಮ್ಮಡಿ ನೋವಿಗೆ ತುತ್ತಾಗಿದ್ದಾರೆ. ಕಳೆದ ತಿಂಗಳು ಈ ಸಮಸ್ಯೆಗೆ ಜೋಶ್ ತುತ್ತಾಗಿದ್ದರೂ ಸದ್ಯ ಸಂಪೂರ್ಣ ಚೇತರಿಕೆ ಕಂಡಿಲ್ಲ. ಹೀಗಾಗಿ ಭಾರತ ವಿರುದ್ಧದ ಸರಣಿಯ ಆರಂಭಿಕ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಲ್ಲಿದ್ದಾರೆ ಆಸಿಸ್ ವೇಗಿ.

ಗಾಯಗೊಂಡಿದ್ದಾರೆ ಮತ್ತೋರ್ವ ವೇಗಿ ಮಿಚೆಲ್ ಸ್ಟಾರ್ಕ್

ಗಾಯಗೊಂಡಿದ್ದಾರೆ ಮತ್ತೋರ್ವ ವೇಗಿ ಮಿಚೆಲ್ ಸ್ಟಾರ್ಕ್

ಆಸ್ಟ್ರೇಲಿಯಾದ ಮತ್ತೋರ್ವ ವೇಗಿ ಮಿಚೆಲ್ ಸ್ಟಾರ್ಕ್ ಕೂಡ ಈಗಾಗಲೇ ಗಾಯಗೊಂಡಿದ್ದು ಮೊದಲ ಟೆಸ್ಟ್‌ನಿಂದ ಹೊರಗುಳಿಯುವುದು ಖಚಿತವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಸ್ಟಾರ್ಕ್ ಗಾಯಕ್ಕೆ ತುತ್ತಾಗಿದ್ದರು. ಬೆರಳಿನ ಗಾಯಕ್ಕೆ ತುತ್ತಾಗಿರುವ ಅವರು ಸದ್ಯ ಚೇತರಿಕೆಯ ಹಾದಿಯಲ್ಲಿದ್ದರೂ ವಿಶ್ರಾಂತಿಯ ಅಗತ್ಯವಿರುವ ಕಾರಣ ಎರಡನೇ ಪಂದ್ಯಕ್ಕೆ ಲಭ್ಯವಾಗುವ ಬಗ್ಗೆ ಭಾರತ ಪ್ರವಾಸ ಕೈಗೊಳ್ಳುವ ಮುನ್ನ ನಡೆಸ ಆಸ್ಟ್ರೇಲಿಯಾ ಕ್ರಿಕೆಟ್‌ನ ಪ್ರಶಸ್ತಿ ಸಮಾರಂಭದಲ್ಲಿ ಮಾಹಿತಿ ನೀಡಿದ್ದರು. ಸ್ಟಾರ್ಕ್ ಕೂಡ ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯವಾಗುವ ನಿರೀಕ್ಷೆಯಿದೆ.

ಕೆಮರೂನ್ ಗ್ರೀನ್ ಆಡುವ ಬಗ್ಗೆಯೂ ಅನುಮಾನ

ಕೆಮರೂನ್ ಗ್ರೀನ್ ಆಡುವ ಬಗ್ಗೆಯೂ ಅನುಮಾನ

ಇನ್ನು ಆಸ್ಟ್ರೇಲಿಯಾ ತಂಡದ ಯುವ ಆಲ್‌ರೌಂಡರ್ ಕೆಮರೂನ್ ಗ್ರೀನ್ ಕೂಡ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಆದರೆ ಕೆಮರೂನ್ ಗ್ರೀನ್ ಕೂಡ ಸಂಪೂರ್ಣವಾಗಿ ಚೇತರಿಕೆ ಕಂಡಿಲ್ಲ. ಈ ಬಗ್ಗೆ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಮಾಹಿತಿ ನೀಡಿದ್ದು ಮೊದಲ ಪಂದ್ಯದಲ್ಲಿ ಗ್ರೀನ್ ಲಭ್ಯತೆ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ. ಗ್ರೀನ್ ಮೊದಲ ಪಂದ್ಯದಲ್ಲಿ ಆಡಿದರೂ ಬೌಲಿಂಗ್ ಮಾಡಲು ಸಮರ್ಥವಾಗಿಲ್ಲ ಎಂದು ಆಸಿಸ್ ನಾಯಕ ಸ್ಪಷ್ಟಪಡಿಸಿದ್ದು ಮೊದಲ ಪಂದ್ಯಕ್ಕೆ ಲಭ್ಯತೆಯ ಬಗ್ಗೆ ಸೋಮವಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಟೆಸ್ಟ್ ಸರಣಿಯ ಆರಂಭಕ್ಕೆ ಕ್ಷಣಗಣನೆ

ಟೆಸ್ಟ್ ಸರಣಿಯ ಆರಂಭಕ್ಕೆ ಕ್ಷಣಗಣನೆ

ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9ರಂದು ನಾಗ್ಪುರದಲ್ಲಿ ನಡೆಯಲಿದ್ದು ಅದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಮೂರನೇ ಪಂದ್ಯ ಧರ್ಮಶಾಲಾದಲ್ಲಿ ಆಯೋಜನೆಯಾದರೆ ಅಂತಿಮ ಟೆಸ್ಟ್ ಪಂದ್ ಅಹ್ಮದಾಬಾದ್‌ನಲ್ಲಿ ನಡೆಯಲಿದೆ
ಇತ್ತಂಡಗಳ ಸ್ಕ್ವಾಡ್
ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Sunday, February 5, 2023, 12:02 [IST]
Other articles published on Feb 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+