IND vs AUS 2nd Test: ಭಾರತ vs ಆಸ್ಟ್ರೇಲಿಯಾ 2ನೇ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡನೇ ಪಂದ್ಯ ಇಂದು (ಶುಕ್ರವಾರ, ಫೆಬ್ರವರಿ 17) ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಆತಿಥೇಯ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.
ನಾಗ್ಪುರದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ ಎರಡನೇ ಪಂದ್ಯವನ್ನು ಆತಿಥೇಯ ತಂಡ ಅದೇ ಹುಮ್ಮಸ್ಸಿನಿಂದ ಆರಂಭಿಸಿದೆ.
ಭಾರತ ತಂಡವು ಈ ಪಂದ್ಯದಲ್ಲಿ ಒಂದು ಬದಲಾವಣೆಯನ್ನು ಮಾಡಿದ್ದು, ಮೊದಲ ಪಂದ್ಯದಲ್ಲಿ 8 ರನ್ ಗಳಿಸಿದ್ದ ಸೂರ್ಯಕುಮಾರ್ ಯಾದವ್ ಬದಲಿಗೆ ಅತ್ಯುತ್ತಮ ಫಾರ್ಮ್‌ನಲ್ಲಿರುವ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.
ಇದೇ ವೇಳೆ ಆಸ್ಟ್ರೇಲಿಯಾ ತಂಡವು ರೇನ್‌ಶಾ ಬದಲಿಗೆ ಎಡಗೈ ಬ್ಯಾಟರ್ ಮ್ಯಾಥ್ಯೂ ಕುಹ್ನೆಮನ್‌ಗೆ ಚೊಚ್ಚಲ ಟೆಸ್ಟ್ ಪಂದ್ಯ ಆಡಲು ಅವಕಾಶ ನೀಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಭಾರತದ ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ತಮ್ಮ 13 ವರ್ಷಗಳ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯವಾಡಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಕೆಎಸ್ ಭರತ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications