For Quick Alerts
ALLOW NOTIFICATIONS  
For Daily Alerts
 

BGT 2024: ಭಾರತ ವಿರುದ್ಧ ಕೊನೆಯ 2 ಟೆಸ್ಟ್‌ಗಳಿಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಮೂರು ವರ್ಷಗಳ ಮರಳಿದ ವೇಗಿ

ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಉಳಿದ ಎರಡು ಪಂದ್ಯಗಳಿಗೆ ಆತಿಥೇಯ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಿದೆ. ಕ್ಯಾನ್‌ಬೆರಾದ ಓವಲ್‌ನಲ್ಲಿ ಭಾರತ ವಿರುದ್ಧದ ನಡೆದ ಅಭ್ಯಾಸ ಪಂದ್ಯದಲ್ಲಿ ಶತಕ ಬಾರಿಸಿದ ಯುವ ಬ್ಯಾಟರ್ ಯಂಗ್ ಸ್ಯಾಮ್ ಕಾನ್ಸ್ಟಾಸ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ಮೂರು ವರ್ಷಗಳ ನಂತರ ವೇಗದ ಬೌಲರ್ ಆಸೀಸ್‌ ತಂಡಕ್ಕೆ ಮರಳಿದ್ದಾರೆ. ಭಾರತ ವಿರುದ್ಧ ಕೊನೆಯ ಎರಡು ಪಂದ್ಯಗಳನ್ನು ಗೆಲ್ಲಲು ಆಸೀಸ್ ಪಡೆ ಯೋಜನೆ ರೂಪಿಸಿಕೊಂಡಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಈಗಾಗಲೇ ಮೂರು ಟೆಸ್ಟ್ ಪಂದ್ಯಗಳ ಬಳಿಕ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಭಾರತ ತಂಡ ಪರ್ತ್‌ನಲ್ಲಿ ಗೆಲುವಿನೊಂದಿಗೆ ಸರಣಿಯನ್ನು ಪ್ರಾರಂಭಿಸಿತು. ಆದರೆ ಅಡಿಲೇಡ್‌ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ಸರಣಿಯಲ್ಲಿ ಸಮಬಲಗೊಳಿಸಿತು. ನಂತರ ಬ್ರಿಸ್ಬೇನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವು ಮಳೆಯಿಂದಾಗಿ ಡ್ರಾ ಆಗಿತ್ತು. ಉಳಿದ ಎರಡು ಪಂದ್ಯಗಳು ಕ್ರಮವಾಗಿ ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ.

Border Gavaskar Trophy 2024 Australia announces squad for last 2 Tests against India

ಆಸ್ಟ್ರೇಲಿಯಾ ಪರ ಕೇವಲ 3 ಟೆಸ್ಟ್ ಪಂದ್ಯಗಳನ್ನು ಆಡಿರುವ 28 ವರ್ಷದ ಜೇ ರಿಚರ್ಡ್ಸನ್ ಮೂರು ವರ್ಷಗಳ ಸುದೀರ್ಘ ಕಾಯುವಿಕೆ ನಂತರ ಆಸ್ಟ್ರೇಲಿಯಾ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಅವರು 2021ರ ಡಿಸೆಂಬರ್ ತಿಂಗಳಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಜೇ ರಿಚರ್ಡ್ಸನ್ 2019 ರಲ್ಲಿ ಶ್ರೀಲಂಕಾ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಆದರೆ, ಇದುವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ 11 ವಿಕೆಟ್ ಪಡೆದಿರುವ ಜೇ ರಿಚರ್ಡ್ಸನ್ ಭಾರತದ ವಿರುದ್ಧ ಪ್ಲೇಯಿಂಗ್-11ರಲ್ಲಿ ಸ್ಥಾನ ಪಡೆಯುತ್ತಾರೋ? ಇಲ್ಲವೋ? ಎಂಬುದು ಕುತೂಹಲ ಮೂಡಿಸಿದೆ.

ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಗಳಿಗೆ ವೇಗದ ಬೌಲರ್ ಸೀನ್ ಅಬಾಟ್ ಕೂಡ ತಂಡಕ್ಕೆ ಮರಳಿದ್ದಾರೆ. ಟ್ಯಾಸ್ಮೆನಿಯಾದ ಅನ್‌ಕ್ಯಾಪ್ಡ್ ಆಲ್‌ರೌಂಡರ್ ಬ್ಯೂ ವೆಬ್‌ಸ್ಟರ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಟ್ಯಾಸ್ಮೆನಿಯಾ ಅವರನ್ನು ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್‌ಗೂ ಮೊದಲು ಸೇರಿಸಿಕೊಳ್ಳಲಾಗಿತ್ತು. ಬ್ರಿಸ್ಬೇನ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹೇಜಲ್‌ವುಡ್ ಕಾಲಿನ ಗಾಯಕ್ಕೆ ಒಳಗಾಗಿರುವುದರಿಂದ ಸರಣಿಯಿಂದ ಹೊರಗುಳಿದಿದ್ದಾರೆ.

ಭಾರತ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿರುವ ಸ್ಯಾಮ್ ಕಾನ್‌ಸ್ಟಾಸ್ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಸ್ಯಾಮ್ ಕಾನ್‌ಸ್ಟಾಸ್ ಆಸ್ಟ್ರೇಲಿಯಾ ಪರ ಆಡಲಿರುವ 70 ವರ್ಷಗಳ ನಂತರ ಅತ್ಯಂತ ಕಿರಿಯ ಟೆಸ್ಟ್ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಲಿದ್ದಾರೆ. ನಾಥನ್ ಮೆಕ್‌ಸ್ವೀನಿ ಕಳೆದ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ (ಉಪನಾಯಕ), ಸೀನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್‌ಕೀಪರ್), ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಸ್ಯಾಮ್ ಕಾನ್ಸ್ಟಾನ್ಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಝೈ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್ ಬ್ಯೂ ವೆಬ್ಸ್ಟರ್.

Story first published: Friday, December 20, 2024, 12:10 [IST]
Other articles published on Dec 20, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+