ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಮೆಲ್ಬೋರ್ನ್ ಟೆಸ್ಟ್ ಪಂದ್ಯವನ್ನು 184 ರನ್‌ಗಳಿಂದ ಗೆದ್ದ ಆಸ್ಟ್ರೇಲಿಯಾ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಈ ಸೋಲಿನೊಂದಿಗೆ ಭಾರತ ತಂಡಕ್ಕೆ ಸುಲಭವಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್ ತಲುಪು ಹಾದಿ ಮುಚ್ಚಿದೆ. ಇದೀಗ ಉಳಿದ ತಂಡಗಳ ಫಲಿತಾಂಶಗಳ ಮೇಲೆ ಭಾರತ ತಂಡದ ಭವಿಷ್ಯ ನಿರ್ಧಾರವಾಗಲಿದೆ.
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 474 ರನ್‌ಗಳಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ದಿಟ್ಟ ಹೋರಾಟ ನೀಡುವ ಮೂಲಕ 369 ರನ್‌ಗಳನ್ನು ಕಲೆ ಹಾಕಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ 105 ರನ್ ಮುನ್ನಡೆ ಪಡೆದಿದ್ದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 235 ರನ್‌ಗಳ ಗಳಿಸಿತು. ಇದರೊಂದಿಗೆ ಆಸೀಸ್ 340 ರನ್‌ಗಳ ಗೆಲುವಿನ ಗುರಿಯನ್ನು ಭಾರತ ತಂಡಕ್ಕೆ ನೀಡಿತು. ಗುರಿ ಬೆನ್ನಟ್ಟಿದ ಭಾರತ 155 ರನ್‌ಗಳಿಗೆ ಸರ್ವಪತನ ಆಗುವ ಮೂಲಕ ಸೋಲು ಕಂಡಿದೆ.

ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡದ ಬ್ಯಾಟರ್‌ಗಳು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (140) ಅವರ ಅಮೋಘ ಶತಕದ ನೆರವನಿಂದ ಆಸ್ಟ್ರೇಲಯಾ ಮೊದಲ ಇನ್ನಿಂಗ್ಸ್‌ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 369 ರನ್ ಗಳಿಸಿತ್ತು. ಭಾರತ ತಂಡದ ಪರ 21ರ ಹರೆಯದ ನಿತೀಶ್ ಕುಮಾರ್ ರೆಡ್ಡಿ (114) ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. ಇದರೊಂದಿಗೆ ಆತಿಥೇಯರು ಮೊದಲ ಇನಿಂಗ್ಸ್‌ನಲ್ಲಿ ಭಾರತ ತಂಡಕ್ಕಿಂತ 105 ರನ್‌ಗಳ ಮುನ್ನಡೆ ಸಾಧಿಸಿತು.
ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವು ಮಾರ್ನಸ್ ಲ್ಯಾಬುಸ್ಚಾಗ್ನೆ (70) ಮತ್ತು ನಾಯಕ ಪ್ಯಾಟ್ ಕಮಿನ್ಸ್ (41) ನಾಥನ್ ಲಿಯಾನ್ (41) ಜವಾಬ್ದಾರಿಯುತ ಇನ್ನಿಂಗ್ಸ್ ಕಟ್ಟಿದರು. ಈ ಮೂಲಕ ಆಸೀಸ್ ಪಡೆ 234 ರನ್ ಗಳಿಸಿ ಭಾರತಕ್ಕಿಂತ 339 ರನ್‌ಗಳ ಮುನ್ನಡೆ ಸಾಧಿಸಿತು. ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲು 340 ರನ್‌ಗಳ ಗುರಿ ಬೆನ್ನಟ್ಟಿದ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಪಂದ್ಯದ ಐದನೇ ದಿನದಂತ್ಯಕ್ಕೆ ಎರಡನೇ ಇನಿಂಗ್ಸ್‌ನಲ್ಲಿ 79.1 ಓವರ್‌ಗಳಲ್ಲಿ 155 ರನ್‌ಗಳಿಗೆ ಕುಸಿದು 184 ರನ್‌ಗಳಿಂದ ಸೋಲನುಭವಿಸಿತು.
ಭಾರತ ತಂಡದ ಎರಡನೇ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ (9), ವಿರಾಟ್ ಕೊಹ್ಲಿ (5) ಮತ್ತು ಕೆಎಲ್ ರಾಹುಲ್ (0) ರನ್ ಗಳಿಸುವಲ್ಲಿ ವಿಫಲರಾದರು. ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದವರು ಯಶಸ್ವಿ ಜೈಸ್ವಾಲ್ ಮಾತ್ರ. ಅವರು ಮೊದಲ ಇನ್ನಿಂಗ್ಸ್‌ನಲ್ಲಿ 118 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 82 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರು 65 ಎಸೆತಗಳಲ್ಲಿ 6 ಬೌಂಡರಿ ಹಾಗು 2 ಸಿಕ್ಸರ್ ಮೂಲಕ 60 ರನ್ ಬಾರಿಸಿದರು.
ಭಾರತ ತಂಡದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಮ್ಮ ಫಾರ್ಮ್ ಅನ್ನು ಮುಂದುವರೆಸಿದರು. ಮೊದಲ ಇನಿಂಗ್ಸ್‌ನಲ್ಲಿ 28.4 ಓವರ್‌ಗಳಲ್ಲಿ 9 ಮೇಡನ್ ಓವರ್‌ಗಳನ್ನು ಮಾಡಿ 99 ರನ್‌ಗಳಿಗೆ 4 ವಿಕೆಟ್ ಪಡೆದರು. ಇಲ್ಲಿಗೆ ನಿಲ್ಲದ ಬುಮ್ರಾ ಎರಡನೇ ಇನಿಂಗ್ಸ್‌ನಲ್ಲಿ 24.4 ಓವರ್‌ಗಳಲ್ಲಿ 7 ಮೇಡನ್ ಓವರ್ ಮಾಡಿ 57 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಪಂದ್ಯದಲ್ಲಿ ಬುಮ್ರಾ ಒಟ್ಟು 9 ವಿಕೆಟ್ ಉರುಳಸಿದರು.