For Quick Alerts
ALLOW NOTIFICATIONS  
For Daily Alerts
 

Adelaide Test: ಗುಲಾಬಿ ಸುಂದರಿ ಎದುರು ನಡೆಯದ ರೋಹಿತ್ ಪಡೆಯ ವೈಯ್ಯಾರ

ಅಡಿಲೇಡ್‌ನ ಓವಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಅಡಿಲೇಡ್‌ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ ಭಾರತ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 175 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಗೆಲುವಿಗೆ 19 ರನ್‌ಗಳ ಗುರಿ ಪಡೆಯಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿ ಪಂದ್ಯವನ್ನು ಗೆದ್ದಿದೆ.

ಪರ್ತ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದು ಸರಣಿಯನ್ನು 1-1 ರಲ್ಲಿ ಸಮಬಲ ಮಾಡಿದೆ. ಅಡಿಲೇಡ್‌ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಅಬ್ಬರಿಸಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ.

Border Gavaskar Trophy 2024 India Loses Second Test Match Against Australia

ಅಡಿಲೇಡ್‌ ಟೆಸ್ಟ್ ಪಂದ್ಯದಲ್ಲಿ ಮೊದಲ ಟಾಸ್ ಗೆದ್ದು ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 180 ರನ್‌ಗೆ ಆಲೌಟ್ ಆಯಿತು. ಭಾರತದ ಪರ ನಿತೀಶ್‌ಕುಮಾರ್ ರೆಡ್ಡಿ 42 ರನ್‌ಗಳ ಕೊಡುಗೆ ನೀಡಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸೀಸ್ ಪರ ಟ್ರಾವಿಸ್ ಹೆಡ್ (140) ಭರ್ಜರಿ ಶತಕ ಸಿಡಿಸಿದರು. ಇದರೊಂದಿಗೆ ಆಸೀಸ್ ಆಲೌಟ್ ಆಗುವ ಮೂಲಕ 337 ರನ್ ಗಳಿಸಿದರು. ಭಾರತ ಪುನಃ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಆಟವಾಡುವ ನಿರೀಕ್ಷೆಯಿತ್ತು. ಆದರೆ ಭಾರತ ಕೇವಲ 175 ರನ್‌ ಕಲೆ ಹಾಕುವ ಮೂಲಕ ಆಸ್ಟ್ರೇಲಿಯಾಕ್ಕೆ 19 ರನ್‌ಗಳ ಸುಲಭ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಅಡಿಲೇಡ್ ಟೆಸ್ಟ್ ಪಂದ್ಯವನ್ನು ಗೆದ್ದು ಬೀಗಿತು.

ಡಬ್ಲ್ಯೂಟಿಸಿ ಅಂಕಪಟ್ಟಿ

ಅಡಿಲೇಡ್ ಟೆಸ್ಟ್ ಪಂದ್ಯದ ಸೋಲು ಭಾರತ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಎರಡನೇ ಟೆಸ್ಟ್‌ನಲ್ಲಿ ಸೋತ ನಂತರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಅಂಕಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದೆ. ಇದರಿಂದಾಗಿ ಈಗ ಡಬ್ಲ್ಯೂಟಿಸಿಯ ಫೈನಲ್‌ಗೆ ತಲುಪುವ ಹಾದಿಯು ಭಾರತ ತಂಡಕ್ಕೆ ಕಷ್ಟಕರವಾಗಿದೆ. ಡಬ್ಲ್ಯೂಟಿಸಿ ಆವೃತ್ತಿ ಭಾರತಕ್ಕೆ ಮೂರು ಪಂದ್ಯಗಳು ಉಳಿದಿವೆ. ಎಲ್ಲಾ ಮೂರು ಟೆಸ್ಟ್ ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧವೇ ಭಾರತ ಆಡಲಿದ್ದು, ಗೆಲ್ಲಬೇಕಾದ ಒತ್ತಡದಲ್ಲಿದೆ.

ಟೀಮ್ ಇಂಡಿಯಾ ತನ್ನ ಉಳಿದ ಮೂರು ಪಂದ್ಯಗಳನ್ನು ಗೆದ್ದರೆ, ಡಬ್ಲ್ಯೂಟಿಸಿ ಫೈನಲ್ ಸನಿಹ ಬರಬಹುದು. ಆದರೆ, ಫೈನಲ್‌ನಲ್ಲಿ ಸ್ಥಾನ ಖಚಿತವಾಗುವುದು ಉಳಿದ ತಂಡಗಳ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ. ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಪ್ರಾಬಲ್ಯ ಸಾಧಿಸಿದೆ.

ಆಸೀಸ್ ಬೌಲರ್‌ಗಳ ದರ್ಬಾರ್

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಎರಡನೇ ಬಾರಿಗೆ ಐದು ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದರು. ಆದರೆ, ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ ಸ್ಕಾಟ್ ಬೋಲ್ಯಾಂಡ್ ಮೂರು ಮತ್ತು ಮಿಚೆಲ್ ಸ್ಟಾರ್ಕ್ ಎರಡು ವಿಕಟ್ ಪಡೆದರು.

Story first published: Sunday, December 8, 2024, 11:26 [IST]
Other articles published on Dec 8, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+