Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS 1st: ಪರ್ತ್‌ ಟೆಸ್ಟ್ ಪಂದ್ಯಕ್ಕೆ ಭಾರತ-ಆಸ್ಟ್ರೇಲಿಯಾ ಸಜ್ಜು; ಎಷ್ಟು ಗಂಟೆಗೆ, ಯಾವ ಚಾನೆಲ್‌ನಲ್ಲಿ ನೇರಪ್ರಸಾರ?

ಬಹು ನಿರೀಕ್ಷಿತ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ನವೆಂಬರ್ 22 ರಂದು ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ, ಭಾರತ ತಂಡವನ್ನು ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ. ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸರಣಿಯಲ್ಲಿ ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದೆ. ಆದರೆ ಆಸ್ಟ್ರೇಲಿಯಾ ಸತತ ಎರಡು ಬಾರಿ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.

ತವರಿನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸತತ ಎರಡು ಸೋಲಿಸಿರುವುದು ಈ ಬಾರಿ ಭಾರತಕ್ಕೆ ಟೆಸ್ಟ್ ಸರಣಿ ಗೆಲ್ಲುವ ನಿರೀಕ್ಷೆಯನ್ನು ಹೆಚ್ಚಿಸಿದೆ. ಭಾರತಕ್ಕೆ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯು ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಜೂನ್‌ನಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ನಲ್ಲಿ ಸ್ಥಾನ ಪಡೆಯಲು ಆಸ್ಟ್ರೇಲಿಯಾವನ್ನು 4-0 ಅಂತರದಿಂದ ಸೋಲಿಸಬೇಕಾಗಿದೆ. ಇಲ್ಲವಾದರೆ ಭಾರತಕ್ಕೆ ಡಬ್ಲ್ಯೂಟಿಸಿ ಫೈನಲ್‌ ತಲುಪುವ ಹಾದಿ ಕಠಿಣವಾಗಿರಲಿದೆ.

Border Gavaskar Trophy 2024 India vs Australia 1st Test live streaming Full report

ಸ್ಟಾರ್ ಬ್ಯಾಟರ್ ಅಲಭ್ಯತೆ

ಪರ್ತ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ಗೆ ಟೀಮ್ ಇಂಡಿಯಾದಿಂದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಹೊರಗುಳಿದಿದ್ದಾರೆ. ಎರಡನೇ ಮಗುವಿಗೆ ತಂದೆಯಾಗಿರುವ ರೋಹಿತ್ ಶರ್ಮಾ ಇನ್ನೂ ಭಾರತದಲ್ಲಿದ್ದಾರೆ. ಶುಭಮನ್ ಗಿಲ್ ಕೈ ಬೆರಳಿನ ಗಾಯದಿಂದಾಗಿ ತಂಡದಿಂದ ದೂರ ಸರಿದಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ವೇಗದ ಬೌಲರ್ ಉಪನಾಯಕ ಜಸ್ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವು ಆಟಗಾರರು ಟೀಮ್ ಇಂಡಿಯಾ ಪರ ತಮ್ಮ ಚೊಚ್ಚಲ ಪಂದ್ಯವನ್ನು ಆಡುವ ನಿರೀಕ್ಷೆಯಿದೆ. ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳನ್ನು ಅಭಿಮಾನಿಗಳು ಉಚಿತವಾಗಿ ವೀಕ್ಷಿಸಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ನೇರಪ್ರಸಾರ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಭಾರತೀಯ ಕ್ರಿಕೆಟ್‌ ಅಭಿಮಾನಿಗಳು ಈ ಟೆಸ್ಟ್‌ ಸರಣಿಯ ಎಲ್ಲಾ ಪಂದ್ಯಗಳನ್ನು ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್‌ ಮತ್ತು ಜಿಯೋ ಸಿನಿಮಾದಲ್ಲಿ ಎಲ್ಲಾ ಪಂದ್ಯಗಳ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ನೀಡಲಾಗುತ್ತಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ರವೀಂದ್ರ ಜಡೇಜಾ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ವಿರಾಟ್ ಕೊಹ್ಲಿ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಹರ್ಷಿತ್ ರಾಣಾ, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

ಮೊದಲ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್‌ಕೀಪರ್‌), ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್‌ಕೀಪರ್‌), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್.

Story first published: Thursday, November 21, 2024, 15:21 [IST]
Other articles published on Nov 21, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+