Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS: ಪರ್ತ್ ಟೆಸ್ಟ್‌ಗೆ ಮುನ್ನ ವಿರಾಟ್ ಕೊಹ್ಲಿ ಪೋಸ್ಟ್..

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗೆ ಕೇವಲ ಎರಡು ದಿನಗಳು ಬಾಕಿ ಉಳಿದಿವೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯ ನವೆಂಬರ್ 22 ರಂದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ. ಉಭಯ ತಂಡಗಳು ಪರ್ತ್‌ ಟೆಸ್ಟ್ ಪಂದ್ಯ ಗೆಲುವ ನಿರೀಕ್ಷೆಯಲ್ಲಿವೆ. ಇದಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿರಾಟ್ ಪೋಸ್ಟ್ ನೋಡಿರುವ ಅಭಿಮಾನಿಗಳು ಶಾಕ್ ಆಗಿದ್ದಾರೆ.

ಬಾರ್ಡರ್ ಗವಾಸ್ಕಾರ್ ಟ್ರೋಫಿನ ಟೆಸ್ಟ್ ಸರಣಿ ನಂತರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಪೈಕಿ ಇಬ್ಬರು ಸ್ಟಾರ್ ಆಟಗಾರರು ಟೆಸ್ಟ್ ಕ್ರಿಕೆಟ್‌ ನಿವೃತ್ತಿ ಹೇಳುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಇಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮಾಡಿರುವ ಪೋಸ್ಟ್ ಅಭಿಮಾನಿಗಳಿಗೆ ಅಚ್ಚರಿ ತರಿಸಿದೆ. ಈಗಾಗಲೇ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.

Border Gavaskar Trophy 2024 Virat Kohli post goes viral before Perth Test

ಟ್ವೀಟರ್ (ಎಕ್ಸ್)ನಲ್ಲಿ ವಿರಾಟ್ ಕೊಹ್ಲಿ ಪೋಸ್ಟ್ ಮಾಡಿರುವ ಬಟ್ಟೆ ಬ್ರಾಂಡ್‌ವೊಂದಕ್ಕೆ ಸಂಬಂಧಿಸಿದೆ. ಬಟ್ಟೆ ಬ್ರಾಂಡ್ 'WROGN' ನೊಂದಿಗೆ ತಮ್ಮ ದಶಕದ ಸುದೀರ್ಘ ಪ್ರಯಾಣದ ಬಗ್ಗೆ ವಿರಾಟ್ ಕೊಹ್ಲಿ ಬರೆದಿದ್ದಾರೆ. ಮೊದಲ ವಿರಾಟ್ ಕೊಹ್ಲಿ ಅವರ ಪೋಸ್ಟ್ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಕೊಹ್ಲಿಯ ಪೋಸ್ಟ್ ನೋಡಿದ ಅನೇಕ ಅಭಿಮಾನಿಗಳು ಅವರು ನಿವೃತ್ತಿ ಘೋಷಿಸಿದ್ದಾರೆ ಎಂದು ಭಾವಿಸಿದರು. ಇದಾದ ಬಳಿಕ ಅಭಿಮಾನಿಗಳು ಸಂಪೂರ್ಣ ಪೋಸ್ಟ್ ಅನ್ನು ಓದಿದಾಗ, ಇದು ವಿರಾಟ್ ಕೊಹ್ಲಿ ಅವರ ನಿವೃತ್ತಿಗೆ ಸಂಬಂಧಿಸಿಲ್ಲ ಎಂದು ಅರ್ಥಮಾಡಿಕೊಂಡಿದ್ದಾರೆ. ಈ ಹಿಂದೆಯೂ ಕೊಹ್ಲಿ ತಮ್ಮ ವೃತ್ತಿಜೀವನದ ಕೆಲವು ವಿಚಾರಗಳನ್ನು ಘೋಷಿಸುವಾಗ ಇದೇ ರೀತಿಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಟೆಂಪ್ಲೇಟ್ ಅನ್ನು ಬಳಸಿದ್ದರು. ಕೊಹ್ಲಿ 2022 ರಲ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿಯುವಾಗ ಇದೇ ರೀತಿಯ ಘೋಷಣೆ ಮಾಡಿದ್ದರು.

ಅಭಿಮಾನಿಗಳ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ ಪೋಸ್ಟ್ ಓದಿರುವ ಅಭಿಮಾನಿಗಳು ಸಾಕಷ್ಟು ಕಾಮೆಂಟ್ ಮಾಡುತ್ತಿದ್ದಾರೆ. ಒಬ್ಬ ಬಳಕೆದಾರ, 'ನಾನು ಒಂದು ನಿಮಿಷ ಹೆದರಿದ್ದೆ' ಎಂದು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರರು, 'ಮಿನಿ ಹೃದಯಾಘಾತ' ಎಂದು ಪೋಸ್ಟ್‌ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲರೂ ವಿರಾಟ್ ಕೊಹ್ಲಿ ಅವರು ನಿವೃತ್ತಿ ಘೋಷಿಸಿದ್ದಾರೆ ಎಂದು ಭಾವಿಸಿ ಭಯಗೊಂಡಿದ್ದಾರೆ.

Story first published: Wednesday, November 20, 2024, 14:48 [IST]
Other articles published on Nov 20, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+