Border Gavaskar Trophy: ಅಜಿಂಕ್ಯಾ ರಹಾನೆ ಸ್ಥಾನ ತುಂಬಲು ಯುವ ಬ್ಯಾಟರ್ ರೆಡಿ
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಬಿಸಿಸಿಐ ಯುವ ಮತ್ತು ಅನುಭವಿಗಳಿರುವ ಭಾರತ ತಂಡವನ್ನು ಆಯ್ಕೆ ಮಾಡಿದೆ. ಆದರೆ ಅಭ್ಯಾಸದ ವೇಳೆ ಟೀಮ್ ಇಂಡಿಯಾದ ಕೆಲವು ಅಟಗಾರರು ಗಾಯಗೊಂಡಿದ್ದಾರೆ. ಈ ಆಟಗಾರರು ಆಸ್ಟ್ರೇಲಿಯಾ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಅನುಮಾನಗಳಿವೆ. ಅದರಲ್ಲೂ ಭಾರತದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಬಹುತೇಕ್ ಮೊದಲ ಟೆಸ್ಟ್ ಮಿಸ್ ಮಾಡಿಕೊಳ್ಳಲಿದ್ದಾರೆ. ಉಳಿದಂತೆ ಕೆಎಲ್ ರಾಹುಲ್ ಮತ್ತು ಸರ್ಫರಾಜ್ ಖಾನ್ ಆಡುವ ಬಗ್ಗೆ ಯಾವುದೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ಅಭಿಮಾನಿಗಳು ಸ್ಟಾರ್ ಬ್ಯಾಟರ್‌ಗಳಾದ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ.
ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತಕ್ಕೆ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಜೋಡಿ ಬೆನ್ನೆಲುಬಾಗಿದ್ದಾರೆ. ಆದರೆ ಈ ಬಾರಿ ಆಸ್ಟ್ರೇಲಿಯಾಕ್ಕೆ ಬಿಸಿಸಿಐ ಈ ಜೋಡಿಯನ್ನು ಆಯ್ಕೆ ಮಾಡಿಲ್ಲ. ಆದರೂ ಅಜಿಂಕ್ಯ ರಹಾನೆ ಸ್ಥಾನವನ್ನು ತುಂಬಬಲ್ಲ ಯುವ ಬ್ಯಾಟರ್ ಟೀಮ್ ಇಂಡಿಯಾದಲ್ಲಿದ್ದಾರೆ. ಈ ಬ್ಯಾಟರ್ ಟೀಮ್ ಇಂಡಿಯಾ ಆಡಿರುವ ಕೆಲವೇ ಇನ್ನಿಂಗ್ಸ್‌ಗಳಲ್ಲಿ ತನ್ನ ಸಾಮರ್ಥ್ಯವನ್ನು ತೋರಿಸಿದ್ದು, ತಂಡದಲ್ಲಿ ಭರವಸೆ ಉಳಿಸಿಕೊಂಡಿದ್ದಾರೆ. ಈ ಬ್ಯಾಟರ್ ಬೇರೆ ಅಲ್ಲ, ಟೀಮ್ ಇಂಡಿಯಾದ ಯುವ ವಿಕೆಟ್‌ಕೀಪರ್-ಬ್ಯಾಟರ್ ಧ್ರುವ್ ಜುರೆಲ್.

ಒಂದು ಕಡೆ ಟೀಮ್ ಇಂಡಿಯಾದ ದಿಗ್ಗಜರು ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಹೋರಾಡುತ್ತಿದ್ದಾರೆ. ಮತ್ತೊಂದೆಡೆ, ಜುರೆಲ್ ಅವರ ಅಬ್ಬರದ ಬ್ಯಾಟಿಂಗ್ ಎಲ್ಲರ ಗಮನ ಸೆಳೆದಿದ್ದಾರೆ. ಈ ವರ್ಷದ ಆರಂಭದಲ್ಲಿ ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ತನ್ನ ಬ್ಯಾಟಿಂಗ್‌ನಿಂದ ಸಂಚಲನ ಮೂಡಿಸಿದ ಆಟಗಾರ ಧ್ರುವ್ ಜುರೆಲ್. ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ವಿಕೆಟ್ ಕಳೆದುಕೊಂಡಾಗ ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು. ಮತ್ತೊಂದೆಡೆ ಈ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಭಾರತ ತಂಡದ ಭಾಗವಾಗಿರಲಿಲ್ಲ. ಇಂತಹ ಸಂದರ್ಭದಲ್ಲಿ ಕ್ರೀಸ್‌ಗೆ ಕಚ್ಚಿ ನಿಂತ ಜುರೆಲ್ ಇಂಗ್ಲೆಂಡ್ ಬೌಲರ್‌ಗಳಿಗೆ ಬೆವರಿಳಿಸಿದ್ದರು.
ಆರಂಭದಲ್ಲಿ ಟೀಮ್ ಇಂಡಿಯಾದ ಪ್ರಮುಖ ವಿಕೆಟ್ ಪಡೆದಿದ್ದ ಇಂಗ್ಲೆಂಡ್ ತಂಡ ಗೆಲುವಿನ ಹೊಸ್ತಿಲಲ್ಲಿತ್ತು. ಆದರೆ ಜುರೆಲ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಕ್ಕೆ ತಿರುವು ನೀಡಿದ್ದರು. ಇದರೊಂದಿಗೆ ಜುರೆಲ್ ವಿಶ್ವ ಕ್ರಿಕೆಟ್‌ನಲ್ಲಿ ಸದ್ದು ಮಾಡಿದ್ದರು. ಮಾರ್ಕ್ ವುಡ್‌ನಂತಹ ವೇಗದ ಬೌಲರ್‌ಗಳನ್ನು ಸಾಮರ್ಥವಾಗಿ ಎದುರಿಸಿದ ಜುರೆಲ್ ಸುಲಭವಾಗಿ ರನ್ ಗಳಿಸಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜುರೆಲ್ ಅವರ ಪ್ರದರ್ಶನದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಹೀಗಾಗಿ ಅವರನ್ನು ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಅಜಿಂಕ್ಯ ರಹಾನೆ ಸ್ಥಾನವನ್ನು ಜುರೆಲ್ ತುಂಬಲಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಭಾರತ ಎ ಪರ ರನ್‌ಗಳ ಮಳೆ
ಪರ್ತ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಧ್ರುವ್ ಜುರೆಲ್ ಆಡುವ ಗೋಲ್ಡನ್ ಚಾನ್ಸ್ ಪಡೆದಿದ್ದಾರೆ. ಈ ಸರಣಿಗೆ ತಯಾರಿ ನಡೆಸಲು ಅವರನ್ನು ಈಗಾಗಲೇ ಕೆಎಲ್ ರಾಹುಲ್ ಜೊತೆಗೆ ಆಸ್ಟ್ರೇಲಿಯಾಕ್ಕೆ ಕಳುಹಿಸಲಾಗಿತ್ತು. ಅಲ್ಲಿ ಆಸ್ಟ್ರೇಲಿಯಾ ಎ ವಿರುದ್ಧದ ಪಂದ್ಯದಲ್ಲಿ ಭಾರತ ಎ ಪರ ಜುರೆಲ್ ಅದ್ಭುತ ಬ್ಯಾಟಿಂಗ್ ಮಾಡಿದ್ದರು. ಎರಡು ಪಂದ್ಯಗಳಲ್ಲಿ ಜುರೆಲ್ ಅವರ ಬ್ಯಾಟಿಂಗ್ ನೋಡಿದ ನಂತರ, ಅವರು ಆಸ್ಟ್ರೇಲಿಯಾದ ಬೌನ್ಸಿ ಪಿಚ್‌ಗಳಿಗೆ ಹೊಂದಿಕೊಂಡಂತೆ ಕಾಣುತ್ತಿದೆ. ಜುರೆಲ್ 80 ಮತ್ತು 68 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದ್ದರು. ಇಂತಹ ಅವರ ಬ್ಯಾಟಿಂಗ್ ಪ್ರದರ್ಶನ ಟೀಮ್ ಇಂಡಿಯಾದ ಒತ್ತಡವನ್ನು ಸಾಕಷ್ಟು ಮಟ್ಟಿಗೆ ನಿವಾರಿಸಲಿದೆ. ಈಗಾಗಲೇ ಜುರೆಲ್ ಬಗ್ಗೆ ಅನೇಕ ದಿಗ್ಗಜರು ಗುಣಗಾನ ಮಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications