India vs Australia: ದೆಹಲಿ ಟೆಸ್ಟ್‌ನಲ್ಲಿ ಭಾರತಕ್ಕೆ ಕಠಿಣ ಸವಾಲು: ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಆಸಿಸ್ ಅನುಭವಿ

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯ ದೆಹಲಿಯಲ್ಲಿ ನಡೆಯಲು ಕ್ಷಣಗಣನೆ ಆರಂಭವಾಗಿದೆ. ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳ ಆಟಗಾರರು ಈಗಾಗಲೇ ದೆಹಲಿ ತಲುಪಿದ್ದು ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಗೆದ್ದ ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಮತ್ತೊಂದು ಗೆಲುವಿಗಾಗಿ ಎದುರು ನೋಡುತ್ತಿದ್ದರೆ ಪ್ರವಾಸಿ ಆಸ್ಟ್ರೇಲಿಯಾ ಕಮ್‌ಬ್ಯಾಕ್‌ಗೆ ಸಿದ್ಧತೆ ನಡೆಸುತ್ತಿದೆ.
ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದಲ್ಲಿ ಪ್ರಮುಖ ಬದಲಾವಣೆಯಾಗುವ ಸಾಧ್ಯತೆಗಳು ಇದೆ. ಗಾಯದ ಕಾರಣ ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದ ಆಸ್ಟ್ರೇಲಿಯಾದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳು ಇದೆ. ಸ್ವತಃ ಸ್ಟಾರ್ಕ್ ಈ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.
ಕಳೆದ ಡಿಸೆಂಬರ್ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೈಬೆರಳಿಗೆ ಗಾಯಮಾಡಿಕೊಂಡಿದ್ದ ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯಾ ಪರವಾಗಿ ಕಳೆದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಕಳೆದ ವಾರ ನಾಗ್ಪುರದಲ್ಲಿ ನಡೆದ ಟೆಸ್ಟ್ ಪಂದ್ಯದಿಂದಲೂ ಮಿಚೆಲ್ ಸ್ಟಾರ್ಕ್ ಹೊರಬಿದ್ದಿದ್ದರು. ಈ ಪಂದ್ಯವನ್ನು ಟೀಮ್ ಇಂಡಿಯಾ ಇನ್ನಿಂಗ್ಸ್ ಹಾಗೂ 132 ರನ್‌ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿತ್ತು. ಈ ಮೂಲಕ ಸದ್ಯ ಟೀಮ್ ಇಂಡಿಯಾ ಈ ಸರಣಿಯಲ್ಲಿ ಮುನ್ನಡೆಯಲ್ಲಿದೆ.
ಮೊದಲ ಟೆಸ್ಟ್‌ನಲ್ಲಿ ಭಾಗವಹಿಸುವುದು ಅಸಾಧ್ಯ ಎಂದು ಖಚಿತವಾಗಿದ್ದ ಕಾರಣ ಆಸ್ಟ್ರೇಲಿಯಾ ತಂಡದೊಂದಿಗೆ ಪ್ರಯಾಣಿಸದೆ ಸಿಡ್ನಿಯಲ್ಲಿಯೇ ಸ್ಟಾರ್ಕ್ ಉಳಿದುಕೊಂಡಿದ್ದರು. ಶನಿವಾರ ಭಾರತಕ್ಕೆ ಬಂದಿಳಿದ ಅವರು ಮಂಗಳವಾರ ತಂಡದ ಆಟಗಾರರನ್ನು ಕೂಡಿಕೊಂಡಿದ್ದಾರೆ. ಎರಡನೇ ಟೆಸ್ಟ್ ಪಂದ್ಯ ಶುಕ್ರವಾರ ಆರಂಭವಾಗಲಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾ, ಶುಭಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್, ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕ್ಯಾಮೆರಾನ್ ಗ್ರೀನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications