ಬಾರ್ಡರ್-ಗವಾಸ್ಕರ್ ಟ್ರೋಫಿ: ಭಾರತದತ್ತ ಪ್ರಯಾಣ ಆರಂಭಿಸಿದ ಆಸಿಸ್ ಆಟಗಾರರು

ಬಹು ನಿರೀಕ್ಷಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಪ್ರಸ್ತುತ ಭಾರತ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಭಾಗವಹಿಸುತ್ತಿದ್ದು ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಅದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಫೆಬ್ರವರಿ 9ರಿಂದ ನಡೆಯಲಿದೆ. ಈ ಸರಣಿಯಲ್ಲಿ ಭಾಗವಹಿಸಲಿರುವ ಆಸ್ಟ್ರೇಲಿಯಾ ತಂಡದ ಆಟಗಾರರು ಈಗಾಗಲೇ ಆಸ್ಟ್ರೇಲಿಯಾದಿಂದ ಭಾರತಕ್ಕೆ ಪ್ರಯಾಣ ಆರಂಭಿಸಿದ್ದಾರೆ.
ಆಸ್ಟ್ರೇಲಿಯಾದ ಕೆಲ ಆಟಗಾರರು ಸಾಮಾಜಿಕ ಜಾಲತಾಣಗಳಲ್ಲಿ ಭಾರತಕ್ಕೆ ಪ್ರಯಾಣ ಆರಂಬಿಸಿರುವುದರ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆಸಿಸ್ ಸ್ಪಿನ್ನರ್ ಆಶ್ಟನ್ ಅಗರ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಪ್ರಯಾಣದ ಸಂದರ್ಭದ ಕೆಲ ಚಿತ್ರಗಳನ್ನು ಶೇರ್ ಮಾಡಿದ್ದಾರೆ. ಈ ಫೋಟೋದಲ್ಲಿ ಮಾರ್ನಸ್ ಲ್ಯಾಬುಶೈನ್, ಟ್ರೆವಿಸ್ ಹೆಡ್, ಮಿಚೆಲ್ ಸ್ವೆಪ್ಸನ್ ಅವರನ್ನು ಕಾಣಬಹುದಾಗಿದೆ. ಈ ಮೂವರು ಕೂಡ ಆರೆಂಜ್ ಜೂಸ್ ಜೊತೆಗೆ ಫೋಟೋಗೆ ಫೋಸ್ ನೀಡಿದ್ದಾರೆ.
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಹಾಲಿ ಚಾಂಪಿಯನ್ ಆಗಿದ್ದು 2020-21ರಲ್ಲಿ ಆಸ್ಟ್ರೇಲಿಯಾದಲ್ಲಿಯೇ ನಡೆದಿದ್ದ ಈ ಸರಣಿಯನ್ನು ಭಾರತ 2-1 ಅಂತರದಿಂದ ವಶಕ್ಕೆ ಪಡೆದುಕೊಂಡಿತ್ತು. ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರ ಅಮೋಘ ಪ್ರದರ್ಶನದಿಂದಾಗಿ ಭಾರತ ಐತಿಹಾಸಿಕ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಈ ಮೂಲಕ ಭಾರತ ಸತತ ಮೂರಬೇ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಈಗ ವಿಶ್ವ ಕ್ರಿಕೆಟ್‌ನ ಅತ್ಯಂತ ಪೈಪೋಟಿಯ ಸರಣಿಗಳಲ್ಲಿ ಒಂದೆನಿಸಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾಗವಹಿಸುವ ದೃಷ್ಟಿಯಿಂದ ಈ ಸರಣಿ ಅತ್ಯಂತ ಮಹತ್ವದ್ದು ಎಂಬುದು ಮತ್ತೊಂದು ಗಮನಾರ್ಹ ಅಂಶ.
ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9ರಂದು ನಾಗ್ಪುರದಲ್ಲಿ ನಡೆಯಲಿದ್ದು ಅದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಮೂರನೇ ಪಂದ್ಯ ಧರ್ಮಶಾಲಾದಲ್ಲಿ ಆಯೋಜನೆಯಾದರೆ ಅಂತಿಮ ಟೆಸ್ಟ್ ಪಂದ್ ಅಹ್ಮದಾಬಾದ್‌ನಲ್ಲಿ ನಡೆಯಲಿದೆ
ಇತ್ತಂಡಗಳ ಸ್ಕ್ವಾಡ್ ಹೀಗಿದೆ ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್
ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications